ಈಗಿನ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಅಲ್ಲ: ಸಿಎಂ ಬೊಮ್ಮಾಯಿಗೆ ನೆನಪಿಸಿದ ಸಿದ್ದು!
ಬೆಂಗಳೂರು: ಹಿಂದಿನ ಸರ್ಕಾರಗಳ ಅವಧಿಯಲ್ಲಿ ನಡೆದಿರುವ ಎಲ್ಲಾ ಅಕ್ರಮಗಳ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ವಿವರಗಳನ್ನು ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರಿಗೆ ಕಳುಹಿಸಲಾಗುವುದು ಎಂಬ ಬೊಮ್ಮಾಯಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು. ಕರ್ನಾಟಕ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ವಿವರವನ್ನು ರಾಹುಲ್ ಗಾಂಧಿಗೆ ಕಳುಹಿಸುವುದಾಗಿ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಈಗ ನರೇಂದ್ರ ಮೋದಿ ಪ್ರಧಾನಿ, ರಾಹುಲ್ ಗಾಂಧಿ ಅಲ್ಲ ಎಂಬುದನ್ನು ಬೊಮ್ಮಾಯಿ ಮರೆಯಬಾರದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ತಪ್ಪಿತಸ್ಥರು ಯಾರಾದರೂ ಶಿಕ್ಷೆಯಾಗಬೇಕು ಎಂದು ನಾನು ಯಾವಾಗಲೂ ಹೇಳುತ್ತಿದ್ದೇನೆ. ಹಿಂದಿನ ಎಲ್ಲಾ ಸರ್ಕಾರಗಳಲ್ಲಿ ವರದಿಯಾದ ಎಲ್ಲಾ ಅಕ್ರಮಗಳ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಯನ್ನು ಪ್ರಾರಂಭಿಸಲು ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಹಣ ಇರುವವರಿಗೆ ಮಾತ್ರ ಕೆಲಸ ಸಿಗುತ್ತದೆ ಎಂಬ ರಾಹುಲ್ ಗಾಂಧಿ ಆರೋಪದ ಬೆನ್ನಲ್ಲೇ, 2023ರ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಬಿಜೆಪಿಯ ‘ಜನ ಸಂಕಲ್ಪ ಯಾತ್ರೆ’ ನಡೆಸುತ್ತಿರುವ ಬೊಮ್ಮಾಯಿ, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಭ್ರಷ್ಟಾಚಾರದ ವಿವರಗಳನ್ನು ರಾಹುಲ್ ಗಾಂಧಿ ಅವರಿಗೆ ಕಳುಹಿಸಲಾಗುವುದು ಎಂದು ಹೇಳಿದ್ದರು.
ಹಿಂದಿನ ಕಾಂಗ್ರೆಸ್ ಆಡಳಿತವಿದ್ದಾಗ 2013-18ರ ನಡುವೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಬೊಮ್ಮಾಯಿ ಸರ್ಕಾರದ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬದಲು ಪ್ರತಿಪಕ್ಷ ನಾಯಕರ ಬಗ್ಗೆ ನಿರಂತರವಾಗಿ ಮಾತನಾಡುವ ಮೂಲಕ ತಮ್ಮದೇ ಆದ ಅಸಮರ್ಥತೆ" ಯನ್ನು ಬಹಿರಂಗಪಡಿಸುತ್ತಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ, ರಾಜ್ಯವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಏನಾದರೂ ಹೇಳುವಂತೆ ಮುಖ್ಯಮಂತ್ರಿಗಳನ್ನು ಕೇಳಿದರು


