
ರಾಹುಲ್ ಗಾಂಧಿ
ಯಾದಗಿರಿ: ರಾಹುಲ್‌ಗಾಂಧಿ ಪ್ರಧಾನಿಯಲ್ಲ ಮುಂದೆಯೂ ಆಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಭವಿಷ್ಯ ನುಡಿದಿದ್ದಾರೆ.
ಯಾದಗಿರಿಯ ಹುಣಸಗಿಯಲ್ಲಿ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ನಮ್ಮ ಅಭಿವೃದ್ದಿ ಕೆಲಸಗಳ ಬಗ್ಗೆ ಏನೂ ಗೊತ್ತಿಲ್ಲ. ರಾಜ್ಯದಲ್ಲಿ ಕೆಲಸ ಪಡೆಯಬೇಕು ಅಂದ್ರೆ ಲಂಚ ಕೊಡಬೇಕು ಅಂತ ಹೇಳಿದ್ದಾರೆ.
ಕಾಂಗ್ರೆಸ್ ಅವಧಿಯಲ್ಲಿ ಆಗಿರುವ ಭ್ರಷ್ಟಾಚಾರಗಳ ಬಗ್ಗೆಯೂ ಅವರಿಗೆ ಗೊತ್ತಿಲ್ಲ. ಹೀಗಾಗಿ ಅವರಿಗೆ ಸಿದ್ದರಾಮಯ್ಯ ಅವಧಿಯ ಭ್ರಷ್ಟಾಚಾರದ ಫೈಲ್ ಕಳುಹಿಸುತ್ತಿದ್ದೇನೆ. ಭ್ರಷ್ಟ್ರರನ್ನ ಕಟ್ಟಿಕೊಂಡು ನಡೀತಿದ್ದೀಯಾ, ಇವರ ಮೇಲೇನಾದರೂ ಕ್ರಮ ತೆಗೆದುಕೊಳ್ಳುತ್ತೀರಾ? ಅಂತ ಫೈಲ್ ಕಳುಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಹಗರಣಗಳ ದಾಖಲೆ ರಾಹುಲ್ ಗಾಂಧಿಗೆ ಕೊಡುವೆ: ಸಿಎಂ ಬೊಮ್ಮಾಯಿ
ರಾಹುಲ್ ಗಾಂಧಿ ಅವರಿಗೆ ದೇಶದ ಬಗ್ಗೆ ಏನೂ ಗೊತ್ತಿಲ್ಲ, ಬೇರೆ ಬೇರೆ ರಾಜ್ಯಗಳಲ್ಲಿ ಮಾತನಾಡುವ ಭಾಷೆಯೂ ಗೊತ್ತಿಲ್ಲ, ಹೀಗಾಗಿ ಪ್ರಧಾನಿ ಆಗುವುದಿಲ್ಲ. ಕಾಂಗ್ರೆಸ್ ಕಾರ್ಯಕರ್ತರ 'ಪೇಸಿಎಂ' ಅಭಿಯಾನದ ಕುರಿತು ಬೊಮ್ಮಾಯಿ, ಕಾಂಗ್ರೆಸ್ ನವರಿಗೆ ಮಾಡಲು ಏನು ಕೆಲಸ ಇಲ್ಲ, ಹೀಗಾಗಿ ಆಂದೋಲನ ಮಾಡಲಿ, ರಾಜ್ಯದ ಅಭಿವೃದ್ಧಿಯ ಹೊಣೆ ನಮ್ಮ ಮೇಲಿದೆ ಎಂದಿದ್ದಾರೆ.