'ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ, ಬದುಕು ಕಟ್ಟಲು ನೋಡಿ: ಸಾತ್ಯಕಿ ಯಾರು? ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ಏನಾಗಬೇಕು?'
ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಸಾತ್ಯಕಿ ಯಾರು, ಯಾರು ಆ ಮನುಷ್ಯ? ಅವರಿಗೆ ಏನು ಗೊತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Published: 23rd October 2022 02:12 PM | Last Updated: 23rd October 2022 02:12 PM | A+A A-

ಎಚ್.ಡಿ ಕುಮಾರಸ್ವಾಮಿ
ಮಡಿಕೇರಿ: ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಸಾತ್ಯಕಿ ಯಾರು, ಯಾರು ಆ ಮನುಷ್ಯ? ಅವರಿಗೆ ಏನು ಗೊತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಮೊದಲು ಜನರ ಬದುಕನ್ನು ಕಟ್ಟಲು ನೋಡಿ. ಕೊಡಗಿನಲ್ಲಿ ಮೂರು ವರ್ಷದಿಂದ ಭೂಕುಸಿತದಿಂದ ಮನೆ, ಬೆಳೆ ಹಾಳಾಗಿದೆ. ಅವರಿಗೆ ಏನು ಕೊಟ್ಟಿದ್ದೀರಿ ಮೊದಲು ಹೇಳಿ. ಆಮೇಲೆ ನಿಮ್ಮ ಹಿಂದಿ ಭಾಷೆ ಬಗ್ಗೆ ಚರ್ಚೆ ಮಾಡಿ. ಸಾವರ್ಕರ್ ಮಗನೋ, ಮೊಮ್ಮಗನೋ ಇಲ್ಲಿಗೆ ಬಂದು ನಮಗೆ ಬೋಧನೆ ಮಾಡುವುದು ಏನಿದೆ. ಮೊದಲು ಜನರ ಬದುಕನ್ನು ಕಟ್ಟಲು ನೋಡಿ ಅವರ ಉಪದೇಶ ಕಟ್ಟಿಕೊಂಡು ನನಗೆ ಏನೂ ಆಗಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಚಿವ ಸೋಮಣ್ಣ ಮತ್ತು ಬಿಜೆಪಿಯವರ ವಿರುದ್ಧ ಕಿಡಿಕಾರಿದ ಹೆಚ್.ಡಿ.ಕುಮಾರಸ್ವಾಮಿ, ಅದು ಬಿಜೆಪಿಯವರ ಸಂಸ್ಕೃತಿಯನ್ನು ತೋರಿಸುತ್ತದೆ. ಅವರ ನಡವಳಿಕೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಅವರು ಎರಡು ತರಹದ ಮುಖ ಹೊಂದಿದ್ದಾರೆ. ಎದುರು ಸಿಕ್ಕಾಗ ಒಂದು ರೀತಿ ಮಾತನಾಡಿಸುತ್ತಾರೆ. ಆದರೆ ಒಳಗೆ ಇರುವ ನಡವಳಿಕೆಯೇ ಬೇರೆ ಇದೆ ಎಂದು ಹೇಳಿದರು.