2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು

ರಾಜ್ಯದಲ್ಲಿ 2023ರಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ಸಚಿವ ಬಿ ಶ್ರೀರಾಮುಲು
ಸಚಿವ ಬಿ ಶ್ರೀರಾಮುಲು

ಚಿತ್ರದುರ್ಗ: ರಾಜ್ಯದಲ್ಲಿ 2023ರಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ದೊಡ್ಡ ಉಳ್ಳಾರ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿರುವ ಅವರು, ಕಳೆದ ಚುನಾವಣೆಯಲ್ಲಿ ನಾನು ಮೊಳಕಾಲ್ಮುಲು ಕ್ಷೇತ್ರದಲ್ಲಿ ಸ್ಪರ್ಧಿಸಿ ಜಯ ಗಳಿಸಿದ್ದೆ. ನನಗೆ ನನ್ನ ಕ್ಷೇತ್ರದ ಜನರ ಆಶೀರ್ವಾದವಿದೆ. ಹಾಗಾಗಿ, ಮುಂದಿನ ಚುನಾವಣೆಯಲ್ಲೂ ಅಲ್ಲಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಮತ್ತೊಮ್ಮೆ ಜನರು ನನ್ನನ್ನು ಆಶೀರ್ವದಿಸಿ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಕುರಿತು ಮಾತನಾಡಿದ ಅವರು, ಇತ್ತೀಚೆಗೆ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತಂತೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಆ ಕುರಿತಂತೆ ಹೊರಡಿಸಲಾಗಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಅದರಿಂದಾಗಿ, ದೀಪಾವಳಿಯ ದಿನದಂದೇ ಮೀಸಲಾತಿ ಹೆಚ್ಚಳ ಕಾನೂನು ಜಾರಿಯಾಗಿದೆ. ಇದರಿಂದ ವಾಲ್ಮೀಕಿ ಸಮುದಾಯದ ಮೀಸಲಾತಿಯೂ ಹೆಚ್ಚಾಗಿದೆ. ಈ ಮೂಲಕ, ಕಳೆದ ಚುನಾವಣೆಯಲ್ಲಿ ನಾನು ವಾಲ್ಮೀಕಿ ಜನಾಂಗದ ಮೀಸಲಾತಿ ಹೆಚ್ಚಿಸುವ ಕುರಿತಂತೆ ನೀಡಿದ್ದ ವಾಗ್ದಾನವನ್ನು ಈಡೇರಿಸಿದ್ದೇನೆ. ಕಾಕತಾಳೀಯವೆಂಬಂತೆ, ದೊಡ್ಡ ಉಳ್ಳಾರ್ತಿಯಲ್ಲಿ ಇದೇ ದಿನ ವಾಲ್ಮೀಕಿ ಮಹರ್ಷಿಯ ಪ್ರತಿಮೆ ಅನಾವರಣಗೊಳ್ಳುತ್ತಿರುವುದು ಖುಷಿಯ ವಿಚಾರವಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com