ಯತ್ನಾಳ್​ಗೆ​ ಪಾಕಿಸ್ತಾನದ ಮೇಲೆ ಪ್ರೀತಿ ಇದೆ, ಅದಕ್ಕೇ ಪದೇ ಪದೇ ಪ್ರಸ್ತಾಪಿಸುತ್ತಾರೆ: ಓವೈಸಿ

ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಇದ್ದು, ಹೀಗಾಗಿಯೇ ಪಾಕಿಸ್ತಾನದ ಬಗ್ಗೆ ಪದೇ ಪದೇ ಉಲ್ಲೇಖಿಸುತ್ತಿದ್ದಾರೆಂದು ಎಐಎಂಐಎಂ ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ.
ವಿಜಯಪುರದಲ್ಲಿ ಓವೈಸ್.
ವಿಜಯಪುರದಲ್ಲಿ ಓವೈಸ್.
Updated on

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಇದ್ದು, ಹೀಗಾಗಿಯೇ ಪಾಕಿಸ್ತಾನದ ಬಗ್ಗೆ ಪದೇ ಪದೇ ಉಲ್ಲೇಖಿಸುತ್ತಿದ್ದಾರೆಂದು ಎಐಎಂಐಎಂ ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ.

ವಿಜಯಪುರ ನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ನಗರಸಭೆಯ 35 ವಾರ್ಡ್‌ಗಳ ಪೈಕಿ ನಾಲ್ಕರಲ್ಲಿ ಮಾತ್ರ ಪಕ್ಷ ಸ್ಪರ್ಧಿಸುತ್ತಿದೆ. “ನಾವು ನಮ್ಮ ರಾಜಕೀಯ ರ್ಯಾಲಿಗಳಲ್ಲಿ ಪಾಕಿಸ್ತಾನದ ಹೆಸರನ್ನು ತೆಗೆದುಕೊಳ್ಳುವುದಿಲ್ಲ. ಯತ್ನಾಳ್ ತಮ್ಮ ಭಾಷಣಗಳಲ್ಲಿ ಪಾಕಿಸ್ತಾನದ ಬಗ್ಗೆ ಪ್ರಸ್ತಾಪಿಸುತ್ತಲೇ ಇರುತ್ತಾರೆ. ಅವರಿಗೆ ಪಾಕಿಸ್ತಾನದ ಮೇಲೆ ಹೆಚ್ಚು ಪ್ರೀತಿ ಇದೆ, ಆದರೆ ಪಾಕಿಸ್ತಾನದ​ ಮೇಲೆ ಯತ್ನಾಳ್​ಗೆ ಯಾಕೆ ಪ್ರೀತಿ ಇದೆ ನನಗೆ ಗೊತ್ತಿಲ್ಲ. ಪಾಕಿಸ್ತಾನ​ ಹೆಸರು ಪದೇ ಪದೇ ಹೇಳು ಎಂದು ಪ್ರಧಾನಿ ಮೋದಿ ಯತ್ನಾಳ್​ಗೆ ಹೇಳಿ‌ಕೊಟ್ಟಿರಬಹುದು ಎಂದು ಲೇವಡಿ ಮಾಡಿದರು. 

ಬಳಿಕ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ "ಕಮಿಷನ್ ಸಂಸ್ಕೃತಿ" ಅನ್ನು ಕೊನೆಗೊಳಿಸಬೇಕು. “ಬಿಜೆಪಿ ನಾಯಕರು ಹಲಾಲ್ ಮಾಂಸದ ಬಗ್ಗೆ ಕೆಟ್ಟ ಅಭಿಪ್ರಾಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ ಬಿಜೆಪಿಯೂ ಹಲಾಲ್ ಕಮಿಷನ್ ಪಡೆಯುತ್ತಿದೆ. ಅವರ ನಾಯಕರು ಹಲಾಲ್ ಕಮಿಷನ್ ಸ್ವೀಕರಿಸಿದ್ದಾರೆ ಎಂಬುದಕ್ಕೆ ನನ್ನ ಬಳಿ ಸಾಕಷ್ಟು ವಿಡಿಯೋ ಸಾಕ್ಷಿಗಳಿವೆ ಎಂದು ಆರೋಪಿಸಿದರು.

“ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಘೋಷಣೆ ಕೇವಲ ಅವರ ಭಾಷಣಗಳಿಗೆ ಸೀಮಿತವಾಗಿದೆ. ಬಿಜೆಪಿ ಮುಸ್ಲಿಂ ವಿರೋಧಿ ಪಕ್ಷ. ಬಿಜೆಪಿ ಆಡಳಿತದಲ್ಲಿ ಮುಸ್ಲಿಂರ ಗಡ್ಡ, ಊಟ, ಟೋಪಿಗೆಗೆ ತೊಂದರೆ ಇದೆ ಎಂದು ಹೇಳಿದರು. 

ಬಿಜೆಪಿಯ ‘ಬಿ’ ಟೀಂ ಎಂಬ ಪಕ್ಷ ಎಂಬ ಕಾಂಗ್ರೆಸ್ ಸ್ ಆರೋಪಕ್ಕೆ ಪ್ರತಿಕ್ರಿಯಿಸಿ, ನಮಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ, ನಾವು ಬಿಜೆಪಿ ಪಕ್ಷದ ಬಿ ಟೀಂ ಅಲ್ಲ. ಕರ್ನಾಟಕ, ಗುಜರಾತ್, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರು ಓಡಿ ಹೋಗಿದ್ದಾರೆ. ಅಮೇಥಿಯಲ್ಲಿ ರಾಹುಲ್ ಗಾಂಧಿ ಸೋತರೇ ನಾನು ಜವಾಬ್ದಾರನಾ ಎಂದು ಪ್ರಶ್ನೀಸಿದರು. ರಾಜಸ್ಥಾನದ ಕಾಂಗ್ರೆಸ್ ಪಕ್ಷದಲ್ಲಿ ಈಗಲೂ ತಿಕ್ಕಾಟ ನಡೆಯುತ್ತಿವೆ. ಇದಕ್ಕೆಲ್ಲ ನಾವು ಕಾರಣರಲ್ಲ, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಕಳಪೆ ನಾಯಕತ್ವದಿಂದಲೇ ಮೋದಿ ಎರಡು ಬಾರಿ ಪ್ರಧಾನಿಯಾಗಿದ್ದು ಎಂದು ತಿಳಿಸಿದರು.

ಇದೇ ವೇಳೆ ಕರ್ನಾಟಕದಲ್ಲಿ ಎಐಎಂಐಎಂ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಅವರು ಅವರ ಕೆಲಸ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಕಳೆದ ಬಾರಿ ಕುಮಾರಸ್ವಾಮಿ ಪರವಾಗಿ ಜಸ್ಟ್ ಕ್ಯಾಂಪೆನ್ ಮಾಡಿದ್ದೆವು. ಆದರೆ ಈ ಬಾರಿ ಜೆಡಿಎಸ್ ಜೊತೆಗೆ ಮೈತ್ರಿಯ ಮಾತಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಗೆ ನಮ್ಮ ಪಕ್ಷ ಸ್ವತಂತ್ರವಾಗಿ ಕಣಕ್ಕಿಳಿಯಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com