ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ: 2023 ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದ ಕುಮಾರಸ್ವಾಮಿ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯಿಂದ ಜನಸಂಕಲ್ಪ ಯಾತ್ರೆ, ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ ಮುಗಿಯುತ್ತಿದ್ದಂತೆ ಜೆಡಿಎಸ್ ನಿಂದ ಪಂಚರತ್ನ ರಥಯಾತ್ರೆ ಆರಂಭವಾಗಿದೆ.
ಬೆಂಗಳೂರಿನ ಬಸವನಗುಡಿ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಾಯಿತು
ಬೆಂಗಳೂರಿನ ಬಸವನಗುಡಿ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಾಯಿತು
Updated on

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯಿಂದ ಜನಸಂಕಲ್ಪ ಯಾತ್ರೆ, ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ ಮುಗಿಯುತ್ತಿದ್ದಂತೆ ಜೆಡಿಎಸ್ ನಿಂದ ಪಂಚರತ್ನ ರಥಯಾತ್ರೆ ಆರಂಭವಾಗಿದೆ.

ಬೆಂಗಳೂರಿನ ಬಸವನಗುಡಿಯ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಪಂಚರತ್ನ ರಥಯಾತ್ರೆಗೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದರು. ನವೆಂಬರ್ 1ರಂದು ಮುಳಬಾಗಿಲಿನ ಕುರುಡುಮಲೆಯ ಮಹಾಗಣಪತಿ ದೇವಾಲಯದಿಂದ ಈ ರಥಯಾತ್ರೆ ಪೂರ್ಣಪ್ರಮಾಣದಲ್ಲಿ ಹೊರಡಲಿದೆ ಎಂದರು.

ನವೆಂಬರ್ 1 ರಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಸಲು ಯೋಜಿಸಲಾಗಿತ್ತು. ಆದರೆ, ಇಂದು ಉತ್ತಮ ದಿನವಾಗಿದ್ದರಿಂದ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಾಯಿತು. ನಾಳೆ ಅಣ್ಣಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗುವುದು. ತದನಂತರ ನವೆಂಬರ್ 1ರಂದು ಕೋಲಾರದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಹೇಳಿದರು.

ಜೆಡಿಎಸ್ ನಿಂದ ಕೆಂಪೇಗೌಡ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು. ಕೆಂಪೇಗೌಡರ ಕನಸು ನನಸು ಮಾಡುತ್ತೇನೆ. ಕೆಂಪೇಗೌಡರ ಹೆಸರಿನಲ್ಲಿ ಯೂನಿವರ್ಸಿಟಿ ಮಾಡಿ, ಯುವಕರಿಗೆ ಶಿಕ್ಷಣ ಹಾಗೂ ಉದ್ಯೋಗ ಕೊಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದರು. 

ಇದೇ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿಯ ವಿರುದ್ಧ ಕುಮಾರಸ್ವಾಮಿ, ಕಾಂಗ್ರೆಸ್ ನವರು ಭಾರತ್ ಜೋಡೋ ಆದ್ರೂ ಮಾಡಲಿ, ಬಿಜೆಪಿಯವರು ಸಂಕಲ್ಪ ಯಾತ್ರೆ ಬೇಕಿದ್ರೂ ಮಾಡಿಕೊಳ್ಳಲಿ, ಆದರೆ, 2023ಕ್ಕೆ ಜೆಡಿಎಸ್ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದರು. ಜನರಿಂದ ಲೂಟಿ ಮಾಡಿರುವ ಹಣವನ್ನು ಜನರಿಗೇ ಹಂಚುತ್ತಾರೆ. ಆದರೆ, ನಾವು ಲೂಟಿ ಮಾಡಿಲ್ಲ. ಕಾಂಗ್ರೆಸ್-ಬಿಜೆಪಿಯಿಂದ ಜನರ ಸಮಸ್ಯೆ ನಿವಾರಣೆ ಮಾಡಲು ಆಗುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com