ಕಲಬುರಗಿಯಲ್ಲಿ ಬಿಜೆಪಿ ಒಬಿಸಿ ಸಮಾವೇಶ; 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ: ವಿ. ಸುನೀಲ್ ಕುಮಾರ್
ಕಲಬುರಗಿಯಲ್ಲಿ ಭಾನುವಾರ ನಡೆಯಲಿರುವ ಬಿಜೆಪಿ ಒಬಿಸಿ ಮೋರ್ಚಾ ಸಮಾವೇಶದಲ್ಲಿ ಸುಮಾರು 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಮತ್ತು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
Published: 28th October 2022 08:37 AM | Last Updated: 28th October 2022 01:10 PM | A+A A-

ವಿ. ಸುನೀಲ್ ಕುಮಾರ್
ಬೆಂಗಳೂರು: ಕಲಬುರಗಿಯಲ್ಲಿ ಭಾನುವಾರ ನಡೆಯಲಿರುವ ಬಿಜೆಪಿ ಒಬಿಸಿ ಮೋರ್ಚಾ ಸಮಾವೇಶದಲ್ಲಿ ಸುಮಾರು 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಮತ್ತು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಪಕ್ಷದ ಹಿರಿಯ ಮುಖಂಡರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಮುಂದಿನ ಎರಡು ತಿಂಗಳಲ್ಲಿ ರಾಜ್ಯಾದ್ಯಂತ ವಿವಿಧ ಸಮುದಾಯಗಳ ಸಮಾವೇಶವನ್ನು ಪಕ್ಷ ನಡೆಸಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂದು ಅವರು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ 250 ಕೋಟಿ ಬಿಡುಗಡೆ ಮಾಡಿದ್ದು, ಸಣ್ಣ ಸಮುದಾಯಗಳನ್ನು ಗುರುತಿಸಿ ಅವರ ಕಲ್ಯಾಣಕ್ಕಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಕ್ಷವು 205 ಒಬಿಸಿ ಸಮುದಾಯದ ನಾಯಕರನ್ನು ಸಮಾವೇಶಕ್ಕೆ ಆಹ್ವಾನಿಸಿದೆ. ಮಾಜಿ ಸಚಿವ ಕೆಎಸ್ ಈಶ್ವರಪ್ಪ ನೇತೃತ್ವದಲ್ಲಿ ಐದು ತಂಡಗಳು ಕರ್ನಾಟಕ ಪ್ರವಾಸ ಕೈಗೊಂಡಿವೆ ಎಂದು ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಹೇಳಿದ್ದಾರೆ.