ಪೋಸ್ಟಿಂಗ್ ಪಡೆಯಲು 80 ಲಕ್ಷ ರೂ.; ಸಚಿವ ಎಂಟಿಬಿ ನಾಗರಾಜ್ ರಿಂದ 40 ಪರ್ಸೆಂಟ್ ಸರ್ಕಾರದ ಭ್ರಷ್ಟಾಚಾರ ಬಯಲು

ಅಮಾನತುಗೊಂಡಿದ್ದ ಕೆ.ಆರ್. ಪುರಂ ಪೊಲೀಸ್ ಠಾಣೆಯ ಇನ್ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಂಟಿಬಿ ನಾಗರಾಜ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
ಪೇ ಸಿಎಂ ಅಭಿಯಾನದಲ್ಲಿ ಕಾಂಗ್ರೆಸ್ ಮುಖಂಡರು
ಪೇ ಸಿಎಂ ಅಭಿಯಾನದಲ್ಲಿ ಕಾಂಗ್ರೆಸ್ ಮುಖಂಡರು

ಬೆಂಗಳೂರು: ಅಮಾನತುಗೊಂಡಿದ್ದ ಕೆ.ಆರ್. ಪುರಂ ಪೊಲೀಸ್ ಠಾಣೆಯ ಇನ್ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಂಟಿಬಿ ನಾಗರಾಜ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ನಂದೀಶ್ ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದು, ಅಧಿಕಾರಿಯ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಚಿವ ಎಂಟಿಬಿ ನಾಗರಾಜ್ ಅವರು, ಪೋಸ್ಟಿಂಗ್ ಪಡೆಯಲು 70 ರಿಂದ 80 ಲಕ್ಷ ಕೊಟ್ಟು ಬಂದರೆ  ಹೃದಯಾಘಾತವಾಗದೆ ಇನ್ನೇನಾಗುತ್ತದೆ ಎಂದು ಹೇಳಿದ್ದರು.

ಎಂಟಿಬಿ ನಾಗರಾಜ್ ಅವರ ಈ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದ್ದು, ಸಚಿವ ಎಂಟಿಬಿ ನಾಗರಾಜ್ ಅವರು 40 ಪರ್ಸೆಂಟ್ ಸರ್ಕಾರದ ಭ್ರಷ್ಟಾಚಾರವನ್ನು ನೇರಾನೇರವಾಗಿ ಬಯಲಿಗಿಟ್ಟಿದ್ದಾರೆ ಎಂದು ಹೇಳಿದೆ.

ಸಚಿವರು ನೇಮಕಾತಿ ಅಕ್ರಮ, ವರ್ಗಾವಣೆ ದಂಧೆ ನಡೆದಿರುವುದು ಸ್ಪಷ್ಟಪಡಿಸಿದ್ದಾರೆ.

#PayCM ಎಂದಾಕ್ಷಣ ಉರಿದು ಬೀಳುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಪೋಸ್ಟಿಂಗ್ ಪಡೆಯಲು 70, 80 ಲಕ್ಷ ನೀಡಿದ್ದು ಯಾರಿಗೆ? ಯಾರು ಈ ಡೀಲಿಂಗ್ ಮಾಡುವುದು? #SayCM ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com