ರಾಹುಲ್ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರತಿದಿನ 25 ಸಾವಿರ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಬೇಕು: ಸಿದ್ದರಾಮಯ್ಯ

ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ನಾನೂ ಭಾಗವಹಿಸಲಿದ್ದೇನೆ. ದೇಶಾದ್ಯಂತ 3570 ಕಿ.ಮೀ. ಪಾದಯಾತ್ರೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 510 ಕಿ.ಮೀ. ಯಾತ್ರೆ ಸಾಗಲಿದೆ ಎಂದು ವಿವರಿಸಿದರು.
ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ
ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ಮೈಸೂರು: ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿಯವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ನಡೆಸುವ ಭಾರತ್ ಜೋಡೋ ಪಾದಯಾತ್ರೆ ಐತಿಹಾಸಿಕ ನಡಿಗೆಯಾಗಬೇಕು ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಸೋಮವಾರ ಕರೆದಿದ್ದ ಸಭೆಯಲ್ಲಿ ಭಾಗವಹಿಸಿ  ಮಾತನಾಡಿದ ಅವರು, ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ನಾನೂ ಭಾಗವಹಿಸಲಿದ್ದೇನೆ. ದೇಶಾದ್ಯಂತ 3570 ಕಿ.ಮೀ. ಪಾದಯಾತ್ರೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 510 ಕಿ.ಮೀ. ಯಾತ್ರೆ ಸಾಗಲಿದೆ ಎಂದು ವಿವರಿಸಿದರು.

ಸೆ. 30ರಂದು ಗುಂಡ್ಲುಪೇಟೆ ಮೂಲಕ ಪಾದಯಾತ್ರೆ ರಾಜ್ಯ ಪ್ರವೇಶಿಸಲಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರಿಗೆ ಅದ್ದೂರಿ ಸ್ವಾಗತ ಕೋರಲು ನಿರ್ಧರಿಸಿದೆ. ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಪಾದಯಾತ್ರೆ ಯಶಸ್ವಿಗೊಳಿಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿದಿನ 25 ಸಾವಿರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಬೇಕು ಎಂದು ಹೇಳಿದ್ದಾರೆ. ಪ್ರತಿದಿನ 25 ಕಿಮೀ ಪಾದಯಾತ್ರೆ ನಡೆಯಲಿದ್ದು, ಬಡವರ, ರೈತರ ಹಾಗೂ ದಿನ ದಲಿತರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.

ಉಭಯ ಜಿಲ್ಲೆಯಲ್ಲಿ ನಡೆಯುವ ಪಾದಯಾತ್ರೆ ನೆನಪಿನಲ್ಲಿ ಉಳಿಯುವಂತಿರಬೇಕು. ಇದರ ಜವಾಬ್ದಾರಿಯನ್ನು ಎರಡೂ ಜಿಲ್ಲೆಯ ಮುಖಂಡರು ವಹಿಸಿಕೊಳ್ಳಬೇಕು ಎಂದರು. ರಾಜ್ಯ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಡಾ. ವಿಜಯಕುಮಾರ್, ಚಾಮರಾಜನಗರ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಮೈಸೂರು ನಗರ ಘಟಕ ಅಧ್ಯಕ್ಷ ಮೂರ್ತಿ, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ನರೇಂದ್ರ, ಮಂಜುನಾಥ್, ಪುಟ್ಟರಂಗ ಶೆಟ್ಟಿ, ತನ್ವೀರ್ ಸೇಠ್, ಡಾ. ತಿಮ್ಮಯ್ಯ, ಮಧು ಮಾದೇಗೌಡ ಹಾಜರಿದ್ದರು.

ಪಕ್ಷದ ಕಾರ್ಯಕರ್ತರು ಪಾದಯಾತ್ರೆಯ ಮಾರ್ಗವನ್ನು ಎಚ್ಚರಿಕೆಯಿಂದ ಆಯೋಜಿಸಿದ್ದಾರೆ. ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿಯವರು ಭೇಟಿ ನೀಡಿದ್ದ ಬದನವಾಳು ಗ್ರಾಮದಿಂದ ಕರ್ನಾಟಕ ಯಾತ್ರೆಯನ್ನು ಪ್ರಾರಂಭಿಸಲಿದ್ದಾರೆ. ಹೊಸ ಧ್ವಜ ಸಂಹಿತೆಯ ವಿರುದ್ಧ ನೇಕಾರರು ಘೋಷಿಸಿರುವ ಧ್ವಜ ಸತ್ಯಾಗ್ರಹ ಮತ್ತು ಖಾದಿ ಚಳವಳಿಗೆ  ಬೆಂಬಲ ನೀಡುವುದಾಗಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com