ಕರ್ನಾಟಕ ವಿಧಾನಪರಿಷತ್ ಸಭಾಪತಿ ಸ್ಥಾನ: ಹೊರಟ್ಟಿ, ಮಲ್ಕಾಪುರೆ ಮಧ್ಯೆ ತೀವ್ರ ಪೈಪೋಟಿ

ಕರ್ನಾಟಕ ವಿಧಾನ ಪರಿಷತ್ತು ಮೇಲ್ಮನೆಯ ಸಭಾಪತಿ ಮತ್ತು ಉಪ ಸಭಾಪತಿ ಸ್ಥಾನಕ್ಕೆ ಇನ್ನೆರಡು ದಿನದಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದ್ದು, ಮೇಲ್ಮನೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ ಎರಡೂ ಸ್ಥಾನಗಳನ್ನು ಅಲಂಕರಿಸುವ ನಿಟ್ಟಿನಲ್ಲಿ ಚುರುಕಿನ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. 
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತು ಮೇಲ್ಮನೆಯ ಸಭಾಪತಿ ಮತ್ತು ಉಪ ಸಭಾಪತಿ ಸ್ಥಾನಕ್ಕೆ ಇನ್ನೆರಡು ದಿನದಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದ್ದು, ಮೇಲ್ಮನೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ ಎರಡೂ ಸ್ಥಾನಗಳನ್ನು ಅಲಂಕರಿಸುವ ನಿಟ್ಟಿನಲ್ಲಿ ಚುರುಕಿನ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. 

ಹಂಗಾಮಿ ಸಭಾಪತಿ ಹಾಗೂ ಎರಡು ಬಾರಿ ಎಂಎಲ್‌ಸಿಯಾಗಿದ್ದ ರಘುನಾಥ್ ರಾವ್ ಮಲ್ಕಾಪುರೆ ಸಭಾಪತಿ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ. ಹಿಂದುಳಿದ ಕುರುಬ ಸಮುದಾಯದವರಾದ್ದರಿಂದ ಪಕ್ಷ ತಮ್ಮೊಂದಿಗಿದೆ ಎಂಬ ಸಂದೇಶ ರವಾನಿಸುವ ಸಾಧ್ಯತೆ ಇದೆ. ಸಮುದಾಯದ ಸದಸ್ಯ ಮತ್ತು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಸಂಪುಟದಿಂದ ಹೊರಗುಳಿದಿರುವುದರಿಂದ ಮತ್ತು ವಿಸ್ತರಣೆ ಶೀಘ್ರದಲ್ಲೇ ಆಗದ ಕಾರಣ, ಮಲ್ಕಾಪುರೆ ಅವರು ಸಭಾಪತಿ ಸ್ಥಾನಕ್ಕೆ ತೀವ್ರ ಆಕಾಂಕ್ಷಿಯಾಗಿದ್ದಾರೆ. 

ಆದರೆ ಕರ್ನಾಟಕ ವಾಯವ್ಯ ಶಿಕ್ಷಕರ ಸ್ಥಾನವನ್ನು ದಾಖಲೆಯ ಎಂಟನೇ ಬಾರಿಗೆ ಗೆದ್ದ ಜೆಡಿಎಸ್‌ನ ಮಾಜಿ ಎಂಎಲ್‌ಸಿ ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿಯಲ್ಲಿ ಸಭಾಪತಿ ಸ್ಥಾನದ ಭರವಸೆ ನೀಡಿದ್ದರಿಂದ ಕಳೆದ ಮೇ ತಿಂಗಳಲ್ಲಿ ಜೆಡಿಎಸ್‌ ತೊರೆದು ಬಿಜೆಪಿಗೆ ಬಂದಿದ್ದರು. ಬಿಜೆಪಿ ತನ್ನ ಮಾತಿಗೆ ಬದ್ಧವಾಗಿ ಉಳಿದರೆ, 76 ವರ್ಷದ ಲಿಂಗಾಯತ ನಾಯಕನಿ ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ಸಿಗುವ ಸಾಧ್ಯತೆಯಿದೆ, 

ಸಿಎಂ ಬಸವರಾಜ ಬೊಮ್ಮಾಯಿ ಹೊರಟ್ಟಿ ಪರವಾಗಿದ್ದಾರೆ. ಹೀಗಾದರೆ ಮಾಜಿ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅವರ ಸ್ಥಾನಕ್ಕೆ ಮಲ್ಕಾಪುರೆ ಅವರನ್ನು ಉಪಸಭಾಪತಿಯನ್ನಾಗಿ ಆಯ್ಕೆ ಮಾಡಲಾಗುತ್ತದೆ. ಇಂದು ಸಂಜೆ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com