ರಾಶಿ ರಾಶಿ ಹಗರಣಗಳ ಅನಭಿಷಿಕ್ತ ದೊರೆ ರೀಡುರಾಮಯ್ಯ: ಬಿಜೆಪಿ ಕಿಡಿ
ಕಾಂಗ್ರೆಸ್ ಸರ್ಕಾರ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಭ್ರಷ್ಟ ರಾಮಯ್ಯ ಸರ್ಕಾರ ಆಡಳಿತ ನಡೆಸಿತ್ತು. ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿ ಓಡಾಡಿದ ಖ್ಯಾತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ಕಿಡಿಕಾರಿದೆ.
Published: 14th September 2022 11:36 PM | Last Updated: 15th September 2022 01:24 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಭ್ರಷ್ಟ ರಾಮಯ್ಯ ಸರ್ಕಾರ ಆಡಳಿತ ನಡೆಸಿತ್ತು. ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿ ಓಡಾಡಿದ ಖ್ಯಾತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ಕಿಡಿಕಾರಿದೆ.
ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿರುವ ಬಿಜೆಪಿ, ರಾಶಿ ರಾಶಿ ಹಗರಣಗಳ ಅನಭಿಷಿಕ್ತ ದೊರೆ ಎಂದರೆ ಅದು ರೀಡು ರಾಮಯ್ಯ. ಅನ್ನಭಾಗ್ಯ ಅಕ್ಕಿ ಕಳವು, ಅರ್ಕಾವತಿ ರೀಡೂ ಹಗರಣ, ಹಾಸಿಗೆ ತಲೆದಿಂಬು ಖರೀದಿ ಹಗರಣ, ಕಲ್ಲು ಗಣಿಗಾರಿಕೆ, ಮರಳು ದಂಧೆ, ಟ್ರಾನ್ಸ್ ಫರ್ ದಂದೆ, ಭ್ರಷ್ಟರಾಮಯ್ಯ ಇದಕ್ಕೆಲ್ಲಾ ಪಡೆದ ಕಮೀಷನ್ ಎಷ್ಟು? ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ವಿಧಾನಸಭೆ ಅಧಿವೇಶನ: ಸಿದ್ದರಾಮಯ್ಯಗೆ 'ಹ್ಯೂಬ್ಲೋಟ್' ಸಂಕಟ, ಲೋಕಾಯುಕ್ತ ತನಿಖೆಗೆ ಬಿಜೆಪಿ ಪಟ್ಟು
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿಯನ್ನು ತಮ್ಮ ಎಟಿಎಂ ರೀತಿ ಬಳಸಿದ್ದ ಕೆ.ಜೆ. ಜಾರ್ಜ್ ಸಿದ್ದರಾಮಯ್ಯ ಪಾಲಿನ ಎಟಿಎಂ ಆಗಿದ್ದರು. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 1,400 ಕೋಟಿ ಹಗರಣ ನಡೆದಿತ್ತು. ಈ ಎಲ್ಲಾ ಹಗರಣಗಳಿಗೂ ಕಾವಲುಗಾರನಾಗಿದ್ದು ಭ್ರಷ್ಟರಾಮಯ್ಯ, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರು ಖಾತೆ ನಿರ್ವಹಣೆ ಮಾಡುವ ಬದಲು ತಮ್ಮ ಖಾತೆ ಭರ್ತಿ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.
ರಾಶಿ ರಾಶಿ ಹಗರಣಗಳ ಅನಭಿಷಿಕ್ತ ದೊರೆ ಎಂದರೆ ಅದು #ರೀಡುರಾಮಯ್ಯ
— BJP Karnataka (@BJP4Karnataka) September 14, 2022
√ ಅನ್ನಭಾಗ್ಯ ಅಕ್ಕಿ ಕಳವು.
√ ಅರ್ಕಾವತಿ ರೀಡೂ ಹಗರಣ
√ ಹಾಸಿಗೆ ತಲೆದಿಂಬು ಖರೀದಿ ಹಗರಣ
√ ಕಲ್ಲು ಗಣಿಕಾರಿಕೆ, ಮರಳು ದಂಧೆ, ಟ್ರಾನ್ಸ್ಫರ್ ದಂಧೆ
ಮಾನ್ಯ #ಭ್ರಷ್ಟರಾಮಯ್ಯ ಅವರೇ ಇದಕ್ಕೆಲ್ಲಾ ಪಡೆದ ಕಮೀಷನ್ ಎಷ್ಟು?#ಕಡುಭ್ರಷ್ಟಕಾಂಗ್ರೆಸ್