ಸ್ಪಷ್ಟ ಬಹುಮತ ಪಡೆದು, ಬಿಜೆಪಿ ಅಧಿಕಾರಕ್ಕೆ ಮರಳುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯಗೆ ಬಿಎಸ್ ವೈ ಟಾಂಗ್!

ಕಾಂಗ್ರೆಸ್‌ನವರು ಏನೇ ತಿಪ್ಪರಲಾಗ ಹಾಕಿದ್ರೂ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಿ.ಎಸ್ ಯಡಿಯೂರಪ್ಪ
ಬಿ.ಎಸ್ ಯಡಿಯೂರಪ್ಪ

ಹುಬ್ಬಳ್ಳಿ: ಕಾಂಗ್ರೆಸ್‌ನವರು ಏನೇ ತಿಪ್ಪರಲಾಗ ಹಾಕಿದ್ರೂ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,  2023ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಸುವ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರ ಯೋಜನೆಗಳ ಕುರಿತು ಅವರು ಪ್ರತಿಕ್ರಿಯಿಸಿದರು.

ಅವರು (ಸಿದ್ದರಾಮಯ್ಯ) ಏನು ಬೇಕಾದರೂ ಮಾಡಲಿ. ನಮಗೆ ತೊಂದರೆ ಇಲ್ಲ. ನಮಗೆ ಸ್ಪಷ್ಟ ಬಹುಮತ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ' ಎಂದರು.

ವಿಶೇಷವೆಂದರೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಇತರ ಪ್ರಮುಖ ನಾಯಕರು ಭಾನುವಾರ ಹುಬ್ಬಳ್ಳಿಯಲ್ಲಿ ಹಾಜರಿದ್ದರು. ಭಾನುವಾರ ಹುಬ್ಬಳ್ಳಿಗೆ ಬಂದಿಳಿದ ಯಡಿಯೂರಪ್ಪ ಅವರು ಬೆಳಗಾವಿಯ ಬೈಲಹೊಂಗಲಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು.

ಆದರೆ, ಹುಬ್ಬಳ್ಳಿಯ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಸರಣಿ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದರು, ಹೀಗಾಗಿ ವಿಮಾನ ನಿಲ್ದಾಣದಲ್ಲಿ ಯಡಿಯೂರಪ್ಪ ಅವರನ್ನು ಬರಮಾಡಿಕೊಳ್ಳಲು ಯಾರು ಆಗಮಿಸಿರಲಿಲ್ಲ.

ಭಾರತ ಜೋಡೋ ಯಾತ್ರೆ, ರಥಯಾತ್ರೆ ಏನೇ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಇದು ಒಂದು ಕೇವಲ ಪಕ್ಷದ ಕಾರ್ಯಕ್ರಮ ಅಷ್ಟೇ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದಾಗಿ ಹಗಲುಗನಸು ಕಾಣುತ್ತಿದೆ ನಾನು 22 ರಿಂದ ರಾಜ್ಯ ಪ್ರವಾಸ ಮಾಡುತ್ತೇನೆ, ಬಿಜೆಪಿ 145-150 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com