ದೇವೇಗೌಡರ ಮನೆಗೆ ಸಿದ್ದರಾಮಯ್ಯ ಭೇಟಿ, ಆರೋಗ್ಯ ವಿಚಾರಣೆ: ಆರು ವರ್ಷಗಳ ಬಳಿಕ ಗುರು-ಶಿಷ್ಯರ ಸಮಾಗಮ!

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಅವರು  ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.  
ಎಚ್.ಡಿ ದೇವೇಗೌಡ ಮತ್ತು ಸಿದ್ದರಾಮಯ್ಯ
ಎಚ್.ಡಿ ದೇವೇಗೌಡ ಮತ್ತು ಸಿದ್ದರಾಮಯ್ಯ

ಬೆಂಗಳೂರು: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಅವರು  ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.  

ವಿಧಾನಸಭೆ ಕಲಾಪ ಮುಗಿದ ಬಳಿಕ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ ಅವರು ಭೇಟಿ ಮಾತುಕತೆ ನಡೆಸಿದರು.‌ ಈ ವೇಳೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕರಾದ ಜಮೀರ್ ಅಹ್ಮದ್ ಖಾನ್ ಸಿದ್ದರಾಮಯ್ಯ ಜೊತೆಗಿದ್ದರು.  

ರಾಜಕೀಯವಾಗಿ ದೇವೇಗೌಡರ ಶಿಷ್ಯರಾಗಿದ್ದ ಸಿದ್ದರಾಮಯ್ಯ ಅವರು ಮುನಿಸಿಕೊಂಡು ಜೆಡಿಎಸ್‌ನಿಂದ ಹೊರಬಂದು ಕಾಂಗ್ರೆಸ್ ‌ಸೇರ್ಪಡೆಯಾದರು. ಬಳಿಕ ಅವರು ಮುಖ್ಯಮಂತ್ರಿ ಆದ ನಂತರದಲ್ಲಿ 2016 ಸೆಪ್ಟೆಂಬರ್ 21 ರಂದು ಎಚ್.ಡಿ.ದೇವೇಗೌಡ ಅವರನ್ನು ಮೊದಲು ಭೇಟಿ ಮಾಡಿದ್ದರು.

ದೇವೆಗೌಡರ ಜೊತೆ ರಾಜಕೀಯ ಚರ್ಚೆ ಮಾಡಿಲ್ಲ. ನಮಸ್ಕಾರ ಅಂದೆ. ಅವರು ನಮಸ್ಕಾರ ಅಂದ್ರು. ಕಾಲು ನೋವು ಅಂತ ಹೇಳಿದ್ರು. ಆರೋಗ್ಯ ವಿಚಾರಿಸೋಕೆ ಬಂದಿದ್ದೆ. ರಾಜಕೀಯ ಬೇರೆ, ಮನುಷ್ಯತ್ವ ಮುಖ್ಯ, ದೇವೆಗೌಡರು ದೇಶ ಕಂಡ ಹಿರಿಯ ರಾಜಕಾರಣಿ. ಲಾಸ್ಟ್ ಟೈಮ್ ಕಾವೇರಿ ವಿಚಾರಕ್ಕೆ ಭೇಟಿ ಮಾಡಿದ್ದೆ. ದೇವೆಗೌಡರಿಗೆ ಕಾಲು ನೋವು ವಾಕರ್ ಹಿಡಿದು ಓಡಾಡುತ್ತಾರೆ. ಅವರ ಸ್ಮರಣ ಶಕ್ತಿ ಚೆನ್ನಾಗಿ ಇದೆ‌ ಎಂದು ಇದೇ ವೇಳೆ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಹಿರಿಯರಾದ ಮಾಜಿ ಪ್ರಧಾನಿ ದೇವೇ ಗೌಡರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಬಹಳ ದಿನಗಳ ನಂತರ ದೇವೇಗೌಡರನ್ನು ಭೇಟಿಯಾದದ್ದು ಸಂತೋಷವಾಯಿತು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com