ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ ಹಾಗೂ ಸಚಿವರು

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದ ಅವರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳು, ಅವರ ಆರೋಗ್ಯ ವಿಚಾರಿಸಿದರು.
ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ
ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ
Updated on: 

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದ ಅವರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳು, ಅವರ ಆರೋಗ್ಯ ವಿಚಾರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ. ನಾನು ಮತ್ತು ನನ್ನ ಸಂಪುಟದ ಸಚಿವರು ಯಾಜಮಾನರನ್ನು ಭೇಟಿ ಮಾಡಲು ಬಂದಿದ್ದೆವು. ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಆಗಿದೆ ಎಂದರು.

ಅವರು ನಮ್ಮೊಂದಿಗೆ ಬಹಳ ಅತ್ಮಿಯವಾಗಿ ಲವಲವಿಕೆಯಿಂದ ಮಾತನಾಡಿದರು. ಅವರ ಅನುಭವವನ್ನು ನಮ್ಮೊಂದಿಗೆ ಹಂಚಿಕೊಂಡರು. ರಾಜ್ಯದ ಅಭಿವೃದ್ಧಿಗೆ ಯಾವೆಲ್ಲ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡಬೇಕು ಅನ್ನೋ ಬಗ್ಗೆ ಸಲಹೆ ನೀಡಿದರು. ಅವರ ಆರೋಗ್ಯ ಚನ್ನಾಗಿ ಇರಲಿ. ನೂರು ಕಾಲ ಬಾಳಲಿ ರಾಜ್ಯಕ್ಕೆ ಅವರ ಮಾರ್ಗದರ್ಶನ ಸಿಗಲಿ ಎಂದು ಸಿಎಂ ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಗೋಪಾಲಯ್ಯ, ಆರ್.ಅಶೋಕ, ಬೈರತಿ ಬಸವರಾಜ್, ಮುನಿರತ್ನ, ವಿ.ಸೋಮಣ್ಣ, ಮಾಧುಸ್ವಾಮಿ ಇತರರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com