ಪೇ-ಸಿಎಂ ಅಂದ್ರೆ ಪೇ ಟು ಕಾಂಗ್ರೆಸ್ ಮೇಡಂ; ಚೀಟಿ ಡಿಕೆಶಿವಕುಮಾರ್, ರಿಡೂ ಸಿದ್ದರಾಮಯ್ಯ: ನಳಿನ್ ಕುಮಾರ್ ಕಟೀಲ್

ಪೇಸಿಎಂ ಅಂದ್ರೇ ಪೇ ಕಾಂಗ್ರೆಸ್‌ ಮೇಡಂ. ತಾವು ಕಾಂಗ್ರೆಸ್‌ ಮೇಡಂ ಅವರಿಗೆ ಪರ್ಸೆಂಟೇಜ್‌ ಕೊಟ್ಟಿದ್ದೇವೆ ಎನ್ನುವುದನ್ನು ಕಾಂಗ್ರೆಸ್‌ನವರು ತೋರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.
ಸ್ಕ್ಯಾಮ್ ರಾಮಯ್ಯ ಪುಸ್ತಕ ಬಿಡುಗಡೆ
ಸ್ಕ್ಯಾಮ್ ರಾಮಯ್ಯ ಪುಸ್ತಕ ಬಿಡುಗಡೆ

ಬೆಂಗಳೂರು: ಪೇಸಿಎಂ ಅಂದ್ರೇ ಪೇ ಕಾಂಗ್ರೆಸ್‌ ಮೇಡಂ. ತಾವು ಕಾಂಗ್ರೆಸ್‌ ಮೇಡಂ ಅವರಿಗೆ ಪರ್ಸೆಂಟೇಜ್‌ ಕೊಟ್ಟಿದ್ದೇವೆ ಎನ್ನುವುದನ್ನು ಕಾಂಗ್ರೆಸ್‌ನವರು ತೋರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿಯ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಕ್ಯಾಮ್‌ ರಾಮಯ್ಯ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ಅವರು, ಜನರ ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಸರಕಾರದ ಅವಧಿಯ ಎಲ್ಲಾ ಕರ್ಮಕಾಂಡವನ್ನು ಹೊರಹಾಕುತ್ತೇವೆ ಎಂದು ಕಿಡಿ ಕಾರಿದ್ದಾರೆ.

ಪೇ ಸಿಎಂ ಎಂದರೇ ಕಾಂಗ್ರೆಸ್ ಮೇಡಂಗೆ ಮಾಡುವ ಪೇಮೆಂಟ್ ಬಗ್ಗೆ ಉಲ್ಲೇಖ ಇದಾಗಿದೆ. ಶಿವಕುಮಾರ್ ಚೀಟಿ ನುಂಗಿದ್ದನ್ನು ನೋಡಿದ್ದೀರಿ. ಅವರು ಚೀಟಿ ಶಿವಕುಮಾರ್ ಆಗಿದ್ದಾರೆ. ಪೇ ಸಿಎಂ ಅಭಿಯಾನವು ಕರ್ನಾಟಕಕ್ಕೆ  ಮಾಡುತ್ತಿರುವ ಅವಮಾನ. ಸಿದ್ದರಾಮಯ್ಯ ಅವರು ಕೋರ್ಟಿನ ಆದೇಶದನ್ವಯ ಬಂಧನಕ್ಕೆ ಒಳಗಾಗಲಿದ್ದಾರೆ ಎಂದು ಕಟೀಲ್ ತಿಳಿಸಿದ್ದಾರೆ.

ನಮ್ಮ ಬಿಜೆಪಿ  ಸರಕಾರದ ಅಭಿವೃದ್ಧಿ ಕಾರ್ಯಗಳಿಂದ ಕಂಗೆಟ್ಟಿರುವ ಸಿದ್ದರಾಮಯ್ಯ ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಕಾಂಗ್ರೆಸ್‌ ಪಕ್ಷವು ತನ್ನ ಸುದೀರ್ಘ ರಾಜಕಾರಣದಲ್ಲಿ  ಭ್ರಷ್ಟಾಚಾರಕ್ಕೆ ಅತಿದೊಡ್ಡ ಕೊಡುಗೆ ನೀಡಿದೆ. ದೇಶದಲ್ಲಿ ಉಗ್ರವಾದ ಭಯೋತ್ಪಾದನೆಗೂ  ಕಾಂಗ್ರೆಸ್ ಪಕ್ಷವೇ ಕಾರಣ. 1947ರಿಂದ 2014ರವರೆಗೆ ಗರಿಷ್ಠ ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ (Congress) ಪಕ್ಷವು ಭ್ರಷ್ಟಾಚಾರಕ್ಕೆ ಬೃಹತ್ತಾದ ಕೊಡುಗೆ ನೀಡಿದೆ ಎಂದು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com