ಸಚಿವ ಸಂಪುಟ ವಿಸ್ತರಣೆ ಬಹುತೇಕ ಫಿಕ್ಸ್; ಶೀಘ್ರವೇ ಪಟ್ಟಿ ರವಾನೆ: ಬಸವರಾಜ ಬೊಮ್ಮಾಯಿ
ಬಹಳ ದಿನಗಳಿಂದಲೂ ಮುಂದೂಡುತ್ತಲೇ ಬಂದಿರುವ ಸಚಿವ ಸಂಪುಟ ವಿಸ್ತರಣೆ ಯನ್ನು ಶೀಘ್ರವೇ ಪೂರ್ಣಗೊಳಿಸುವುದಾಗಿ ಹೇಳಿಗದ ಬೊಮ್ಮಾಯಿ, ಈ ವಿಚಾರವನ್ನು ಈಗಾಗಲೇ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಹೆಸರುಗಳನ್ನು ಅಂತಿಮಗೊಳಿಸುವುದಾಗಿ ಭರವಸೆ ನೀಡಿದ್ದಾರೆ .
Published: 24th September 2022 08:48 AM | Last Updated: 24th September 2022 01:09 PM | A+A A-

ಬಸವರಾಜ ಬೊಮ್ಮಾಯಿ
ಬೆಂಗಳೂರು: ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆದಷ್ಟು ಬೇಗ ಮಾಡೋಣ ಅಂತ ಹೈಕಮಾಂಡ್ ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಹೈಕಮಾಂಡ್ ಅನುಮತಿ ಪಡೆದು ವಿಸ್ತರಣೆ ಮಾಡುತ್ತೇವೆ ಎಂದಿದ್ದಾರೆ.
ಬಹಳ ದಿನಗಳಿಂದಲೂ ಮುಂದೂಡುತ್ತಲೇ ಬಂದಿರುವ ಸಚಿವ ಸಂಪುಟ ವಿಸ್ತರಣೆ ಯನ್ನು ಶೀಘ್ರವೇ ಪೂರ್ಣಗೊಳಿಸುವುದಾಗಿ ಹೇಳಿಗದ ಬೊಮ್ಮಾಯಿ, ಈ ವಿಚಾರವನ್ನು ಈಗಾಗಲೇ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಹೆಸರುಗಳನ್ನು ಅಂತಿಮಗೊಳಿಸುವುದಾಗಿ ಭರವಸೆ ನೀಡಿದ್ದಾರೆ .
ಇದನ್ನೂ ಓದಿ: ಎಸ್ ಟಿ ಮೀಸಲಾತಿ ಹೆಚ್ಚಳ: ಒಂದು ವಾರದಲ್ಲಿ ಸರ್ವಪಕ್ಷ ಸಭೆ ಕರೆದು ತೀರ್ಮಾನ ಎಂದ ಸಿಎಂ ಬೊಮ್ಮಾಯಿ
ವಿಧಾನಸಭೆ ಅಧಿವೇಶನ ಮುಗಿಯಲು ಕಾಯುತ್ತಿದ್ದೇವು, ಈಗ ಅಧಿವೇಶನ ಮುಗಿದಿದೆ, ಹೀಗಾಗಿ ಸಚಿವ ಸಂಪುಟ ವಿಸ್ತರಣೆಯತ್ತ ಗಮನ ಹರಿಸುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ. ಕೇಂದ್ರ ಬಿಜೆಪಿ ನಾಯಕರ ಜೊತೆ, ಅಲ್ಲಿಂದ ಗ್ರೀನ್ ಸಿಗ್ನಲ್ ಸಿಕ್ಕ ನಂತರ ಸಂಪುಟ ವಿಸ್ತರಣೆ ನಡೆಯಲಿದೆ ಎಂದಿದ್ದಾರೆ.