ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಸೋನಿಯಾ, ಪ್ರಿಯಾಂಕಾ ಗಾಂಧಿ ಸಾಥ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಈ ತಿಂಗಳಾಂತ್ಯಕ್ಕೆ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. 
ರಾಹುಲ್-ಪ್ರಿಯಾಂಕಾ ಗಾಂಧಿ
ರಾಹುಲ್-ಪ್ರಿಯಾಂಕಾ ಗಾಂಧಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಈ ತಿಂಗಳಾಂತ್ಯಕ್ಕೆ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. 

ಮುಂದಿನ ದಿನಗಳಲ್ಲಿ ಅವರ ಪಾಲ್ಗೊಳ್ಳುವಿಕೆ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.

ಸೆಪ್ಟೆಂಬರ್ 30 ರಂದು ಬೆಳಿಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಲ್ಲಿ ಪ್ರಾರಂಭವಾಗುವ ಭಾರತ್ ಜೋಡೋ ಯಾತ್ರೆಯ ಸಿದ್ಧತೆಯನ್ನು ಉಭಯ ನಾಯಕರು ಪರಿಶೀಲಿಸಿದರು. ಅಕ್ಟೋಬರ್ 2 ರಂದು ಮೈಸೂರಿನಿಂದ ಸುಮಾರು 20 ಕಿಮೀ ದೂರದಲ್ಲಿರುವ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ನಾವು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಅದು ಖಾದಿ ಮತ್ತು ಗ್ರಾಮೋದ್ಯೋಗ ಘಟಕಗಳಿಗೆ ಹೆಸರುವಾಸಿಯಾಗಿದೆ. ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಯಾತ್ರೆಗೆ ಎರಡು ದಿನ ವಿರಾಮ ಸಿಗಲಿದೆ. ಕೊನೆಯಲ್ಲಿ ಬಳ್ಳಾರಿಯಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದು ಹೇಳಿದರು.

ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ರಾಹುಲ್ ಅವರೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗಣ್ಯರು, ನಾಗರಿಕ ಸಮಾಜದ ಮುಖಂಡರು, ಕಲಾವಿದರು, ಕೈಗಾರಿಕೋದ್ಯಮಿಗಳು ಮತ್ತು ಚಿಂತಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.

ಅತಿ ದೊಡ್ಡ ನಗರವಾಗಿರುವ ಮೈಸೂರಿನ ಜನರು ಬೆಳಗ್ಗೆ 7 ಗಂಟೆಯಿಂದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಪಕ್ಷ ವಿನಂತಿಸಿದೆ. ಕಳೆದ ದಶಕದಿಂದ ಬಿಜೆಪಿ ಮತ್ತು ಸಂಘಪರಿವಾರ ಕೇವಲ ರಾಹುಲ್ ಪ್ರತಿಷ್ಠೆಯನ್ನು ಹಾಳು ಮಾಡುತ್ತಿದೆ. ಆದರೆ ರಾಹುಲ್ ಯಾರೆಂದು ಜನರಿಗೆ ಈಗ ತಿಳಿದಿದೆ. ಈ ಯಾತ್ರೆಯು ಭಾರತದ ರಾಜಕೀಯದಲ್ಲಿ ಮಹತ್ವದ ತಿರುವು ಆಗಲಿದೆ ಎಂದು ವೇಣುಗೋಪಾಲ್ ಹೇಳಿದರು.

PayCM ಅಭಿಯಾನದಲ್ಲಿ, ಗುತ್ತಿಗೆದಾರರ ಸಂಘವು ಎತ್ತಿದ ನಿಜವಾದ ಸಮಸ್ಯೆಯನ್ನು ಮಾತ್ರ ಪಕ್ಷವು ನಾಡಿನ ಜನತೆಗೆ ತೋರಿಸುತ್ತಿದೆ. ಕರ್ನಾಟಕದ ಜನರು ತಾವು ಕಂಡ ಅತ್ಯಂತ ಭ್ರಷ್ಟ ಸರ್ಕಾರಗಳಲ್ಲಿ ಇದೂ ಒಂದು ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಬಂಧನಕ್ಕೆ ಹೆದರುವುದಿಲ್ಲ. ಮತ್ತೆ ಮತ್ತೆ ಸರ್ಕಾರದ ಭ್ರಷ್ಟಾಚಾರದ ಆಡಳಿತವನ್ನು ಬಯಲಿಗೆಳೆಯುವ ಪ್ರಯತ್ನ ಮಾಡುತ್ತೇವೆ ಎಂದು ಸರ್ಕಾರ ವಿರುದ್ಧ ಹರಿಹಾಯ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com