ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ' ನಾಳೆ ರಾಜ್ಯ ಪ್ರವೇಶ; ಗುಂಡ್ಲುಪೇಟೆಯಲ್ಲಿ ಅದ್ಧೂರಿ ಸಿದ್ಧತೆ

ಮುಂಬರುವ ಕೆಲ ರಾಜ್ಯ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ಹುಮ್ಮಸ್ಸು ತುಂಬಲು ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ಯಾತ್ರೆ ನಾಳೆ ರಾಜ್ಯ ಪ್ರವೇಶಿಸಲಿದೆ. 
ರಾಹುಲ್  ಗಾಂಧಿ
ರಾಹುಲ್ ಗಾಂಧಿ

ಬೆಂಗಳೂರು: ಮುಂಬರುವ ಕೆಲ ರಾಜ್ಯ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ಹುಮ್ಮಸ್ಸು ತುಂಬಲು ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ಯಾತ್ರೆ ನಾಳೆ ರಾಜ್ಯ ಪ್ರವೇಶಿಸಲಿದೆ. 

ಈಗಾಗಲೇ ಕೇರಳದಲ್ಲಿ 20 ದಿನದ ಪಾದಯಾತ್ರೆ ಮುಗಿಲಿಸಿರುವ ಜೋಡೋ ಯಾತ್ರೆ, ರಾಜ್ಯದ 8 ಜಿಲ್ಲೆಗಳಲ್ಲಿ 21 ದಿನ ಸುಮಾರು 511 ಕಿ.ಮೀ ದೂರ ನಡೆಯಲಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಈ ಯಾತ್ರೆಯನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

25 ರಿಂದ 30 ಸಾವಿರ ಮಂದಿ ಕರ್ನಾಟಕ- ಕೇರಳ ಗಡಿಯಲ್ಲಿ ಸೇರಿ ರಾಹುಲ್ ಗಾಂಧಿ ಅವರಿಗೆ ಅದ್ದೂರಿ ಸ್ವಾಗತ ನೀಡಲು ತಯಾರಿ ನಡೆದಿದೆ. ಚಾಮರಾಜನಗರ ನಂತರ ಮೈಸೂರು, ತುಮಕೂರು ಮಾರ್ಗವಾಗಿ ಯಾತ್ರೆ ಮುಂದೆ ಸಾಗಲಿದೆ. ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನಮನ ಒಂದಾಗದೇ ಜಗತ್ತಿನಲ್ಲಿ ಯಾವುದೇ ದೊಡ್ಡ ಬದಲಾವಣೆ ಸಾಧ್ಯವಿಲ್ಲ. ಕೇವಲ 5 ವರ್ಷಕ್ಕೊಮ್ಮೆ ಮತ ಹಾಕಿದರೆ ಸಾಲದು, ರಾಜಕಾರಣಿಯಾಗಲಿ, ಮತದಾರರಾಗಲಿ ಸಮಸ್ಯೆಗಳಿಗೆ ಪ್ರತಿದಿನ ಸ್ಪಂದಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com