ಪೇ-ಸಿಎಂ ಅಭಿಯಾನ ಸಮಗ್ರ ಕರ್ನಾಟಕಕ್ಕೆ ಮಾಡಿದ ಅವಮಾನ; ಕಾಂಗ್ರೆಸ್ ಪಕ್ಷ ಜನರ ಕ್ಷಮೆ ಕೋರಬೇಕು: ಅರುಣ್ ಸಿಂಗ್

ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್ ಪಕ್ಷ ಸಮಗ್ರ ಕರ್ನಾಟಕದ ಜನರಿಗೆ ಅವಮಾನ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅರುಣ್ ಸಿಂಗ್
ಅರುಣ್ ಸಿಂಗ್
Updated on

ಬೆಂಗಳೂರು/ಕಲಬುರಗಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ‘ಭಾರತ್ ಜೋಡೋ ಯಾತ್ರೆ’ ನಡೆಸುತ್ತಿರುವಾಗಲೇ ಕಾಂಗ್ರೆಸ್ ಛಿದ್ರವಾಗುತ್ತಿದೆ ಎಂದು ಕರ್ನಾಟಕ ಉಸ್ತುವಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬುಧವಾರ ಹೇಳಿದ್ದಾರೆ.

ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್ ಪಕ್ಷ ಸಮಗ್ರ ಕರ್ನಾಟಕದ ಜನರಿಗೆ ಅವಮಾನ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಪೇಸಿಎಂ ಅಭಿಯಾನ ವಿರುದ್ಧ ವಾಗ್ದಾಳಿ ನಡೆಸಿದ ಕರ್ನಾಟಕದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್,  ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮಾಡಿದ ಅವಮಾನವಾಗಿದೆ. ಇದಕ್ಕಾಗಿ ವಿರೋಧ ಪಕ್ಷ ಕಾಂಗ್ರೆಸ್‌ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ನಮ್ಮ ಸಿಎಂ ಬೊಮ್ಮಾಯಿ ರೈತರಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಖಾತೆಗೆ ಹಣ ಹಾಕುತ್ತಿದ್ದಾರೆ. ಅವರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಿದ್ದಾರೆ. ಎಸ್‌ಸಿ, ಎಸ್‌ಟಿಗೆ ಸಮುದಾಯದವರಿಗೆ ವಿಶೇಷ ಪ್ಯಾಕೇಜ್ ನೀಡಿದ್ದಾರೆ. ಅವರು ಸಾಮಾನ್ಯ ವ್ಯಕ್ತಿ ಮತ್ತು ಸಾಮಾನ್ಯ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. ಪೇಸಿಎಂ ಅಭಿಯಾನದ ಕುರಿತ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ ಸಿಎಂ ವಿರುದ್ಧ ಇಂತಹ ಸುಳ್ಳು ಕಮಿಷನ್ ಆರೋಪ ಹೊರಿಸುವ ಮೂಲಕ ಕಾಂಗ್ರೆಸ್ ಹೊಸ ಅಧೋಗತಿಗೆ ಇಳಿದಿದ್ದು, ಇದು ಜನಸಾಮಾನ್ಯರಿಗೆ ಮತ್ತು ಕರ್ನಾಟಕಕ್ಕೆ ಮಾಡಿದ ಅವಮಾನವಾಗಿದೆ ಎಂದರು.

ಕರ್ನಾಟಕದ ಜನ ಸಾಮಾನ್ಯರು ಮುಖ್ಯಮಂತ್ರಿಗಳಿಗೆ ಮಾಡಿದ ಅವಮಾನವನ್ನು ಎಂದಿಗೂ ಕ್ಷಮಿಸುವುದಿಲ್ಲ. ಖಂಡಿತವಾಗಿಯೂ ರಾಜ್ಯದ ಜನತೆ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.

ಪಂಜಾಬ್ ಮತ್ತು ಗೋವಾದಲ್ಲಿ ಕಾಂಗ್ರೆಸ್‌ನ ಪತನ ಮತ್ತು ಈಗ ರಾಜಸ್ಥಾನದಲ್ಲಿ ಪಕ್ಷದೊಳಗೆ ಬಿರುಕು ಬಿಟ್ಟಿದೆ ಎಂದು ಹೇಳಿದ ಅರುಣ್‌ ಸಿಂಗ್, ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಇದೇ ರೀತಿಯ ಬಿರುಕು ಮೂಡಲಿದೆ ಎಂದು ಹೇಳಿದರು.

ಕಾಂಗ್ರೆಸ್ ಪಿತೂರಿ ಮತ್ತು ಭ್ರಷ್ಟಾಚಾರಕ್ಕೆ ಸಮಾನಾರ್ಥಕವಾಗಿದೆ. ಕಾಂಗ್ರೆಸ್ ನಾಯಕರಿಲ್ಲದ ಪಕ್ಷವಾಗಿದೆ ಮತ್ತು ಇಡೀ ದೇಶ ನಾಶವಾಗಲು ಕಾರಣವಾಗಿದೆ. ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ  ಕಾಂಗ್ರೆಸ್ ಪಕ್ಷವು ಸಂಪೂರ್ಣವಾಗಿ ನಾಶವಾಗುತ್ತದೆ. 150 ಸ್ಥಾನಗಳ ಗುರಿಯೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿಂಗ್‌ ಹೇಳಿದರು.

ಕಾಂಗ್ರೆಸ್ ಯಾವುದೇ ದೂರದೃಷ್ಟಿ ಇಲ್ಲದ ಮತ್ತು ನಾಯಕರಿಲ್ಲದ ಪಕ್ಷವಾಗಿದ್ದು, ಅದಕ್ಕಾಗಿಯೇ ಅದನ್ನು ದೇಶದಿಂದ ಅಳಿಸಿಹಾಕಲಾಗಿದೆ. ಕರ್ನಾಟಕದಲ್ಲೂ 2023ರ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷ ನಶಿಸಿ ಹೋಗಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಅರುಣ್ ಸಿಂಗ್ ಹೇಳಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆಹಾರಧಾನ್ಯ ವಿತರಣೆ, ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ ಸೇರಿದಂತೆ ಹಲವು ಹಗರಣಗಳು ನಡೆದಿವೆ.

ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯಗಳಿರಬಹುದು, ಆದರೆ ಪಕ್ಷದಲ್ಲಿ  ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು. ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ-ಕರ್ನಾಟಕ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯವ್ವಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com