ಅಧಿಕಾರದ ಹಪಾಹಪಿ: ಆಕಾಂಕ್ಷಿಗಳಿಂದ ಮುಂದುವರಿದ ಪಕ್ಷಾಂತರ ಪರ್ವ; ಮೂರು ಪಕ್ಷಗಳಿಗೂ ಹಾರಿ ನೆಗೆದ 'ಜಂಪಿಂಗ್ ಸ್ಟಾರ್ಸ್'!

ಮೇ 10 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಈ ಮದ್ಯೆ ತಾವು ಮೆಚ್ಚಿಕೊಂಡ ಪಕ್ಷಗಳು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಹಾಗೂ ಕೆಲವು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಹಲವು ಆಕಾಂಕ್ಷಿಗಳು ಈಗಾಗಲೇ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ.
ಟಿಕೆಟ್ ಆಕಾಂಕ್ಷಿಗಳ ಪಕ್ಷಾಂತರ ಪರ್ವ
ಟಿಕೆಟ್ ಆಕಾಂಕ್ಷಿಗಳ ಪಕ್ಷಾಂತರ ಪರ್ವ

ಬೆಂಗಳೂರು: ಮೇ 10 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಈ ಮದ್ಯೆ ತಾವು ಮೆಚ್ಚಿಕೊಂಡ ಪಕ್ಷಗಳು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಹಾಗೂ ಕೆಲವು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಹಲವು ಆಕಾಂಕ್ಷಿಗಳು ಈಗಾಗಲೇ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ.

ಈ ಪ್ರವೃತ್ತಿಯು ಸ್ವಹಿತಾಸಕ್ತಿಯ ಮೇಲೆ ಸವಾರಿ ಮಾಡುತ್ತದೆ, ವೈಯಕ್ತಿಕ ಮಟ್ಟದಲ್ಲಿ ಅವರ ರಾಜಕೀಯ ಜೀವನದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಪಕ್ಷ ನಿಷ್ಠೆ ಮತ್ತು ಜನರಿಗಾಗಿ ಕೆಲಸ ಮಾಡುವ ಬದ್ಧತೆಗೆ ಹಿನ್ನಡೆ ಉಂಟು ಮಾಡುತ್ತದೆ.

ಚುನಾವಣೆಯಲ್ಲಿ ಟಿಕೆಟ್ ಪಡೆಯುವುದು ಪ್ರಮುಖ ಗುರಿಯಾಗಿರುತ್ತದೆ, ಅವರು ಜಂಪ್ ಮಾಡುತ್ತಿರುವ ಪಕ್ಷಗಳು ಅಧಿಕಾರ ಹಿಡಿಯುತ್ತವೆ ಎಂಬ ನಿರೀಕ್ಷೆಯಿಂದ ಪಕ್ಷಾಂತರ ನಡೆಯುತ್ತದೆ. ಇನ್ನೂ ರಾಜಕೀಯ ಪಕ್ಷಗಳು ಕೂಡ ಅಭ್ಯರ್ಥಿ ಜಯ ಗಳಿಸುತ್ತಾರೆ ಎಂಬ ವಿಶ್ವಾಸವಿದ್ದರೇ ಮಾತ್ರ ಪಕ್ಷಕ್ಕೆ ಸೇರಿಸಿಕೊಂಡು ಟಿಕೆಟ್ ನೀಡುವ ಬುದ್ಧಿವಂತಿಕೆ ಪ್ರದರ್ಶಿಸುತ್ತವೆ.

ರಾಜಕೀಯ ಪಕ್ಷಗಳು ಟಿಕೆಟ್ ಘೋಷಿಸಿದ ನಂತರ ಬಂಡಾಯದ ಬಾವುಟ ಹಾರುತ್ತದೆ,  ಟಿಕೆಟ್ ಸಿಗದ ನಿರಾಶೆಯಿಂದ ಬೇರೆ ಪಕ್ಷಕ್ಕೆ ಜಿಗಿಯುತ್ತಾರೆ. ಆ ಪಕ್ಷಗಳು ಕೂಡ ಅಂತಹ ಬಂಡಾಯಗಾರರಿಗೆ ಮಣೆಹಾಕಲು ಕಾಯುತ್ತಿರುತ್ತವೆ,  ಕರ್ನಾಟಕದಲ್ಲಿ ಜೆಡಿಎಸ್  ಗೆ ಪ್ರಬಲ ನೆಲೆಯಿಲ್ಲದ ಕಾರಣ ಹೆಚ್ಚಿನ ಬಂಡಾಯಗಾರರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸುವ ಸಾಧ್ಯತೆಯಿದೆ.

ರಾಜಕೀಯ ಪಕ್ಷಗಳ ಅಧಿಕಾರದ ಹಪಾಹಪಿಯಿಂದ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಬಯಸುತ್ತವೆ, ಗೆಲ್ಲುವ ಮಾರ್ಗ ಅವರಿಗೆ ಮುಖ್ಯವಾಗುವುದಿಲ್ಲ, ಒಟ್ಟಿನಲ್ಲಿ ಹೇಗಾದರೂ ಅಧಿಕಾರದ ಚುಕ್ಕಾಣಿ ಹಿಡಿಯುವುದೇ ಪ್ರಮುಖ ಧ್ಯೇಯವಾಗಿರುತ್ತದೆ.

ಆರ್ ಎಸ್ ಎಸ್ ಮೂಲದಿಂದ ಬಂದಿರುವ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಕೆ.ಎಸ್ ಕಿರಣ್ ಕುಮಾರ್, ಮಹಾದೇವಪುರದಲ್ಲಿ ಎಚ್. ನಾಗೇಶ್ ಹಾಗೂ ಬೆಂಗಳೂರಿನ ರಾಜಾಜಿನಗರದ ಅಭ್ಯರ್ಥಿ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಹೊಸಬರಿಗೆ ಅವಕಾಶ ಕಲ್ಪಿಸಲು ಕೆಲವು ಸ್ಥಾನಗಳನ್ನು ಖಾಲಿ ಇಟ್ಟುಕೊಂಡಿರುವ ಬಗ್ಗೆ ಟೀಕೆ ವ್ಯಕ್ತವಾಗಿದೆ.

ಜೆಡಿಎಸ್ ನಿಂದ ಗುಬ್ಬಿ ಮಾಜಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರಿಗೂ ಕಾಂಗ್ರೆಸ್ ಟಿಕೆಟ್ ಖಚಿತವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಸರ್ಕಾರದ ವಿರುದ್ಧ ಹೆಚ್ಚುತ್ತಿರುವ ಆಡಳಿತ ವಿರೋಧಿ ಅಲೆಯಿಂದಾಗಿ ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಜಿಗಿಯುವ ಸಾಧ್ಯತೆಗಳಿವೆ, ಇವರೆಲ್ಲಾ ಕೆಪಿಸಿಸಿ ಮುಖ್ಯಸ್ಥರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಹಿರೇಕೆರೂರಿನಲ್ಲಿ ಮಾಜಿ ಶಾಸಕ ಯು.ಬಿ.ಬಣಕಾರ, ಚಿಕ್ಕಮಗಳೂರಿನಲ್ಲಿ ಎಚ್.ಡಿ.ತಮ್ಮಣ್ಣ, ಧಾರವಾಡದಿಂದ ಮೋಹನ್ ಲಿಂಬಿಕಾಯಿ (ಎಲ್ಲರೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೆಂಬಲಿಗರು), ಶಿಗ್ಗಾಂವಿಯಿಂದ ಮಂಜುನಾಥ ಕುನ್ನೂರ ಮತ್ತು ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಷ್ಣ ಕಾಂಗ್ರೆಸ್ ಸೇರಿದ್ದಾರೆ.

ವಸತಿ ಸಚಿವ ವಿ ಸೋಮಣ್ಣ  ಕಾಂಗ್ರೆಸ್‌ಗೆ ತೆರಳುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಮಧ್ಯಪ್ರವೇಶಿಸಿ, ಸೋಮಣ್ಣ ಅವರನ್ನು ನವದೆಹಲಿಗೆ ಕರೆಸಿಕೊಂಡು ಪಕ್ಷದಲ್ಲೇ ಮುಂದುವರಿಯುವಂತೆ ಮನವರಿಕೆ ಮಾಡಿದರು.

ಕೆಲವು ಹಿರಿಯ ನಾಯಕರು  ತಮ್ಮ ಮಕ್ಕಳಿಗೆ ಟಿಕೆಟ್ ಕೊಡಿಸಲು ಪಕ್ಷದ ವಿರುದ್ಧ ಹೋರಾಟ ಆರಂಭಿಸಿರುತ್ತಾರೆ, ಜೆಡಿಎಸ್‌ನಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದು, ಅವರನ್ನು ಪಕ್ಷದ ನಾಯಕತ್ವ ನಿಲ್ಲಿಸಿ ಅವರ ಪುತ್ರನಿಗೆ ಹುಣಸೂರು ಟಿಕೆಟ್‌ ನೀಡುವುದಾಗಿ ಭರವಸೆ ನೀಡಿತ್ತು.

ಕೆಪಿಸಿಸಿ ಮುಖ್ಯಸ್ಥ ಶಿವಕುಮಾರ್ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸೇರುವಂತೆ ಕರೆ  ಮಾಡುತ್ತಿದ್ದು, ಕೆಲ ಸ್ಥಾನಗಳನ್ನು ಅವರಿಗಾಗಿಯೇ  ಮೀಸಲು ಇಡುತ್ತಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.

ಆದರೆ 2019 ರಲ್ಲಿ ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಸಹಾಯ ಮಾಡಲು ಕಾಂಗ್ರೆಸ್‌ನ 13 ಶಾಸಕರು ಸೇರಿದಂತೆ 17 ಶಾಸಕರು ರಾಜೀನಾಮೆ ನೀಡಿ 'ಆಪರೇಷನ್ ಕಮಲ'ದ ನಂತರ ರಚನೆಯಾದ ಸರ್ಕಾರದ ಮುಖ್ಯಸ್ಥರಾಗಿರುವ ಬೊಮ್ಮಾಯಿ ಅವರ ಪ್ರಾಮಾಣಿಕತೆಯನ್ನು ಶಿವಕುಮಾರ್ ಪ್ರಶ್ನಿಸಿದ್ದಾರೆ.

ಪಕ್ಷಾಂತರ ವಿಷಯ ಸಂಬಂಧ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ಪ್ರೊ. ಕೆ.ಇ ರಾಧಾಕೃಷ್ಣ ಮಾತನಾಡಿದ್ದು, ಆಪರೇಷನ್ ಕಮಲವು  ಮಟನ್ ಶಾಪ್ ಇದ್ದಂಗೆ, ತನ್ನನ್ನು ತಾನೇ ಮಾರಿಕೊಳ್ಳುವಂತೆ ಎಂದು ಟೀಕಿಸಿದ್ದಾರೆ.

ಇನ್ನೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಮಾತನಾಡಿ ಈ ಹಿಂದೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ್ದ 17 ಶಾಸಕರನ್ನು ಲೈಂಗಿಕ ಕಾರ್ಯಕರ್ತೆಯರಿಗೆ ಹೋಲಿಸಿದ್ದರು.

ನಾನಾ ಕಾರಣಗಳಿಂದ ಪಕ್ಷಗಳು ತಮ್ಮ ನಾಯಕರನ್ನು ಕೈ ಬಿಡುತ್ತಿರುವ ನಿದರ್ಶನಗಳಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತದಲ್ಲಿ ಸಚಿವರಾಗಿದ್ದ ಎ ಮಂಜು ಅವರನ್ನು ಅರಕಲಗೂಡು ಅಭ್ಯರ್ಥಿಯಾಗಿ ಜೆಡಿಎಸ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿಯೂ ಕ್ಲೀನ್ ಇಮೇಜ್ ಹೊಂದಿರುವ ಜೆಡಿಎಸ್ ಶಾಸಕ ಎಟಿ ರಾಮಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ವಿಶೇಷವೆಂದರೆ, ಮಂಜು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಹಾಸನದಿಂದ ಸ್ಪರ್ಧಿಸಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದರು.

ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಪ್ರಜ್ವಲ್ ಅವರ ಆಸ್ತಿಯನ್ನು ಬಚ್ಚಿಟ್ಟಿರುವ ಕಾರಣ ಅವರ ಚುನಾವಣೆಯನ್ನು ಅನರ್ಹಗೊಳಿಸುವಂತೆ ಕೋರಿ ಅವರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಂಜು ಅವರ ಪುತ್ರ ಮಂಥರ್ ಗೌಡ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಮಾಜಿ ಶಾಸಕ ವೈಎಸ್‌ವಿ ದತ್ತ ಅವರು ದೇವೇಗೌಡರು ಮತ್ತು ಜೆಡಿಎಸ್‌ ಜೊತೆಗಿನ ನಾಲ್ಕು ದಶಕಗಳ ಸಂಬಂಧವನ್ನು ಕಡಿದುಕೊಂಡು, ನಂತರ ಪಕ್ಷವು “ಪ್ರಜಾಪ್ರಭುತ್ವವನ್ನು ರಕ್ಷಿಸುತ್ತದೆ” ಎಂದು ಭಾವಿಸಿದ್ದರಿಂದ ಕಾಂಗ್ರೆಸ್‌ಗೆ ಸೇರಿದ್ದಾಗಿ ಹೇಳಿಕೆ ನೀಡಿದ್ದರು.

ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್, ತುಮಕೂರು ಕ್ಷೇತ್ರದ ಮಾಜಿ ಸಂಸದ ಎಸ್‌ಪಿ ಮುದ್ದಹನುಮೇಗೌಡ, ಮಾಜಿ ಶಾಸಕ ಕೆಎಸ್ ಮಂಜುನಾಥ್ ಗೌಡ ಸೇರಿದಂತೆ ಹಲವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರದ ಅಡಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರು ತಮ್ಮ ರಾಜಕೀಯ ಜೀವನದ ಮುಸ್ಸಂಜೆಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು ಎಂಬುದನ್ನು ಇಲ್ಲಿ ಗಮನಿಸಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com