ಕೂಡ್ಲಿಗೆ ಶಾಸಕ ಎನ್.ವೈ.ಗೋಪಾಲಕೃಷ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಅಸಮಾಧಾನಗೊಂಡ ಶಾಸಕರು, ಮಾಜಿ ಶಾಸಕರು, ಬೇರೊಂದು ಪಕ್ಷಕ್ಕೆ ನೆಗೆಯುತ್ತಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಇದು ಪ್ರತಿನಿತ್ಯ ಕಂಡುಬರುತ್ತಿದೆ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕೈ ಹಿಡಿದ ಶಾಸಕ ಎನ್ ವೈ ಗೋಪಾಲಕೃಷ್ಣ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕೈ ಹಿಡಿದ ಶಾಸಕ ಎನ್ ವೈ ಗೋಪಾಲಕೃಷ್ಣ

ಬೆಂಗಳೂರು: ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಅಸಮಾಧಾನಗೊಂಡ ಶಾಸಕರು, ಮಾಜಿ ಶಾಸಕರು, ಬೇರೊಂದು ಪಕ್ಷಕ್ಕೆ ನೆಗೆಯುತ್ತಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಇದು ಪ್ರತಿನಿತ್ಯ ಕಂಡುಬರುತ್ತಿದೆ.

ಕೂಡ್ಲಿಗೆ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ತಮ್ಮಅಪಾರ ಬೆಂಬಲಿಗರೊಂದಿಗೆ ಗೋಪಾಲಕೃಷ್ಣ ಕೈ ಹಿಡಿದರು.

ಡಿಕೆ ಶಿವಕುಮಾರ್ ಅವರು ಪಕ್ಷದ ಧ್ವಜವನ್ನು ನೀಡಿ, ಗೋಪಾಲಕೃಷ್ಣ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ದಿನೇಶ್ ಗೂಳಿಗೌಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com