ಬಿಜೆಪಿ ಭವಿಷ್ಯಕ್ಕೆ ಕುತ್ತು ತರಲಿದ್ಯಾ ಮೀಸಲಾತಿ: ವಿಧಾನಸಭೆ ಚುನಾವಣೆ ಹೊತ್ತಲ್ಲಿ ತಂದಿತ್ತ ಫಜೀತಿ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಹಿಂದೇಟು!

ಕಿತ್ತೂರು ಕರ್ನಾಟಕ ಭಾಗವೂ ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ ಮತ್ತು ಗದಗ ಜಿಲ್ಲೆಗಳನ್ನು ಒಳಗೊಂಡಿದೆ. ಮುಸ್ಲಿಮರಿಗೆ 2ಬಿ ಮೀಸಲಾತಿಯನ್ನು ರದ್ದುಪಡಿಸುವ ಮತ್ತು ಲಿಂಗಾಯತ ಮತ್ತು ಒಕ್ಕಲಿಗರ ನಡುವೆ ಮೀಸಲಾತಿ ಹಂಚಿಕೆಯ ವಿಷಯವು ಈ ಪ್ರದೇಶದ ಮತದಾರರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಬಿ,ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ
ಬಿ,ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ

ಬೆಳಗಾವಿ: ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವು ತನ್ನ ಆಡಳಿತಾವಧಿಯ  ಕೊನೆಯಲ್ಲಿ ಅಸ್ತಿತ್ವದಲ್ಲಿರುವ ಮೀಸಲಾತಿ ನೀತಿಗೆ ಮಾಡಿದ ಬದಲಾವಣೆಯಿಂದಾಗಿ ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ, ವಿಶೇಷವಾಗಿ ಲಿಂಗಾಯತ ಹೃದಯಭೂಮಿ ಕಿತ್ತೂರು ಕರ್ನಾಟಕ ಪ್ರದೇಶದ 56 ಕ್ಷೇತ್ರಗಳಲ್ಲಿ ಭಾರೀ ಪರಿಣಾಮ ಬೀರುವ ನಿರೀಕ್ಷೆಯಿದೆ.

ಕಿತ್ತೂರು ಕರ್ನಾಟಕ ಭಾಗವೂ ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ ಮತ್ತು ಗದಗ ಜಿಲ್ಲೆಗಳನ್ನು ಒಳಗೊಂಡಿದೆ. ಮುಸ್ಲಿಮರಿಗೆ 2ಬಿ ಮೀಸಲಾತಿಯನ್ನು ರದ್ದುಪಡಿಸುವ ಮತ್ತು ಲಿಂಗಾಯತ ಮತ್ತು ಒಕ್ಕಲಿಗರ ನಡುವೆ ಮೀಸಲಾತಿ ಹಂಚಿಕೆಯ ವಿಷಯವು ಈ ಪ್ರದೇಶದ ಮತದಾರರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ರದ್ದಾದ 2ಬಿ ಕೋಟಾದಿಂದ ಲಿಂಗಾಯತರಿಗೆ ಶೇ.2ರಷ್ಟು ಮೀಸಲಾತಿಯನ್ನು ವಿಸ್ತರಿಸುವ ಮೂಲಕ ಆಡಳಿತಾರೂಢ ಬಿಜೆಪಿ ಲಿಂಗಾಯತರನ್ನು ಸಮಾಧಾನಪಡಿಸಲು ಪ್ರಯತ್ನ ನಡೆಸಿದ್ದರೂ, ಈ ಭಾಗದ ಬಹುಪಾಲು ಲಿಂಗಾಯತ ಮತದಾರರು ಕೇಸರಿ ಪಕ್ಷದ ವಿರುದ್ಧ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ವಿರುದ್ಧ ಅಸಮಾಧಾನಗೊಂಡಿದ್ದಾರೆ.

2013ರ ಚುನಾವಣೆಯಲ್ಲಿ ಈ ಪ್ರದೇಶದ 56 ಸ್ಥಾನಗಳ ಪೈಕಿ ಕಾಂಗ್ರೆಸ್ 34 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತ್ತು. 2018ರಲ್ಲಿ ಬಿಜೆಪಿ 40 ಸ್ಥಾನಗಳಲ್ಲಿ ಯಶಸ್ಸನ್ನು ಕಂಡಿತ್ತು, ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ನಂತರ ವಿರೋಧ ಪಕ್ಷದಲ್ಲಿ ಕುಳಿತಿತ್ತು.

ಮೀಸಲಾತಿಯ ವಿಷಯದ ಹೊರತಾಗಿ, ಕಾಂಗ್ರೆಸ್‌ನ 40% ಕಮಿಷನ್ ಆರೋಪ ಮತ್ತು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೇಲಿನ ಲೋಕಾಯುಕ್ತ ದಾಳಿಯಂತಹ ಇತರ ವಿವಾದಾತ್ಮಕ ವಿಷಯಗಳು ಬಿಜೆಪಿಯ ಭವಿಷ್ಯಕ್ಕೆ ಧಕ್ಕೆ ತರಬಹುದು. ಈ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಒತ್ತು ನೀಡಬಹುದು ಎಂದು ಹೇಳಲಾಗಿದೆ. ಮತ್ತೊಂದೆಡೆ, ಬೊಮ್ಮಾಯಿ ಸರ್ಕಾರವು ಸಾಧಿಸುವಲ್ಲಿ ಯಶಸ್ವಿಯಾದ ಮಹದಾಯಿ ಯೋಜನೆ ಸೇರಿದಂತೆ ಕಿತ್ತೂರು ಕರ್ನಾಟಕದಲ್ಲಿ ಸರಣಿ ನೀರಾವರಿ ಯೋಜನೆಗಳು ಬಿಜೆಪಿಗೆ ದೊಡ್ಡ ಉತ್ತೇಜನ ನೀಡಬಹುದು.

ಆದರೆ, ರಾಜಕೀಯ ಬೆಳವಣಿಗೆಗಳ ಹೊರತಾಗಿಯೂ, ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ, ಅಲ್ಲಿ ಪಕ್ಷವು ಪ್ರಸ್ತುತ 15 ಸ್ಥಾನಗಳನ್ನು ಹೊಂದಿದೆ, ಕಾಂಗ್ರೆಸ್‌ನ 4 ಸ್ಥಾನಗಳನ್ನು ಹೊಂದಿದೆ.

ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಗದಗನಲ್ಲಿ 37 ನಿರ್ಣಾಯಕ ಸ್ಥಾನಗಳು ಯಾವ ಪಕ್ಷ್ಕೆ ಹೋಗುತ್ತವೆ ಎಂಬುದು ಕುತೂಹಲಕಾರಿಯಾಗಿದೆ. ಪ್ರಸ್ತುತ, ಬೆಳಗಾವಿಯಲ್ಲಿ ಕಾಂಗ್ರೆಸ್‌ನ ಐದು ಸ್ಥಾನಗಳಿದ್ದರೆ ಬಿಜೆಪಿ 13 ಸ್ಥಾನಗಳನ್ನು ಹೊಂದಿದೆ.  ವಿಜಯಪುರದಲ್ಲಿ ಕಾಂಗ್ರೆಸ್‌ ಎರಡು ಮತ್ತು ಜೆಡಿಎಸ್‌ನ ಒಂದು ಸ್ಥಾನ ಹೊಂದಿದೆ.. ಬಾಗಲಕೋಟೆಯಲ್ಲಿ ಬಿಜೆಪಿ ಐದು ಮತ್ತು ಕಾಂಗ್ರೆಸ್ ಎರಡು ಸ್ಥಾನಗಳನ್ನು ಹೊಂದಿದೆ. ವಿಧಾನಸೌಧದ ಕೀಲಿಕೈ ಹೊಂದಿರುವ  37 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್ ಏರ್ಪಡಲಿದೆ.

ಬೊಮ್ಮಾಯಿ ಸರ್ಕಾರದ ದೌರ್ಬಲ್ಯಗಳನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದರೆ, ಬಿಜೆಪಿ ತನ್ನ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ತನ್ನ ಸ್ಟಾರ್ ಪ್ರಚಾರಕರನ್ನು ಹೆಚ್ಚಾಗಿ ಅವಲಂಬಿಸಿದೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ರೋಡ್ ಶೋ ನಡೆಸುತ್ತಿರುವ ಮೋದಿ ಕಿತ್ತೂರು ಕರ್ನಾಟಕದಲ್ಲಿ ಹೆಚ್ಚಿನ ಪ್ರಚಾರ ನಡೆಸುವ ನಿರೀಕ್ಷೆ ಇದೆ.

ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿರುವ ಕ್ಷೇತ್ರವಾದ ಶಿಗ್ಗಾಂವಿಯಲ್ಲಿ ಹೆಚ್ಚಿನ ಘರ್ಷಣೆಗಳು ನಡೆಯುತ್ತಿವೆ. ಪಂಚಮಸಾಲಿ-ಲಿಂಗಾಯತರ ಮುಖ ಎಂದು ಬಿಂಬಿಸಲಾಗುತ್ತಿರುವ ವಿನಯ್ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಉತ್ಸುಕವಾಗಿರುವ ಹಿನ್ನೆಲೆಯಲ್ಲಿ ಎರಡು ಲಿಂಗಾಯತರ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ.

ಕುತೂಹಲಕಾರಿಯಾಗಿ, ವಿಜಯಪುರ ನಗರ, ಗೋಕಾಕ, ಬೆಳಗಾವಿ ಗ್ರಾಮಾಂತರ, ಅಥಣಿ, ರಾಯಬಾಗ, ಧಾರವಾಡ, ಭಟ್ಕಳ, ಕಲಘಟಗಿ, ಬಾದಾಮಿ, ಗದಗ, ಹಾವೇರಿ, ನಿಪಾಣಿ, ಸೌದತ್ತಿ ಮತ್ತು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರಗಳಲ್ಲಿ ಪೈಪೋಟಿ ಏರ್ಪಟ್ಟಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಹಲವು ಕ್ಷೇತ್ರಗಳಲ್ಲಿ ಲಿಂಗಾಯತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಭಾರೀ ಪ್ರಮಾಣದಲ್ಲಿ ಮತ ವಿಭಜನೆಯಾಗುವ ಭೀತಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ.  ಎಸ್‌ಆರ್ ಬೊಮ್ಮಾಯಿ, ಜೆಎಚ್ ಪಟೇಲ್ ಮತ್ತು ರಾಮಕೃಷ್ಣ ಹೆಗಡೆ ಅವರ ನಿಧನದ ನಂತರ ಜನತಾ ದಳದ ಪತನದ ನಂತರ ಜೆಡಿಯು ನಾಯಕರು ಬಿಜೆಪಿಗೆ ಬದಲಾದರು.   ಯಡಿಯೂರಪ್ಪ ಲಿಂಗಾಯತ ಐಕಾನ್ ಆಗಿ ಹೆಚ್ಚುತ್ತಿರುವ ಜನಪ್ರಿಯತೆಯು ಈ ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯಕ್ಕೆ ಕಾರಣವಾಯಿತು.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ 15 ವರ್ಷಗಳಲ್ಲಿ ರಾಜಕೀಯವಾಗಿ ಪ್ರಭಾವಿಯಾಗಿರುವ ಜಾರಕಿಹೊಳಿ ಮತ್ತು ಕತ್ತಿ ಕುಟುಂಬಗಳು ಜೆಡಿಎಸ್‌ ಪಕ್ಷವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಬಿಜೆಪಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದೆ. ಒಂದು ಕಾಲದಲ್ಲಿ ಕಾಂಗ್ರೆಸ್‌ಗೆ ಪ್ರಬಲ ನೆಲೆಯಾಗಿದ್ದ  ಬೆಳಗಾವಿಯನ್ನು ಬಿಜೆಪಿ ತನ್ನ ಭದ್ರಕೋಟೆ ಬಲಪಡಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com