ಇಂದಿನಿಂದ ಎರಡು ದಿನ ಬಿಜೆಪಿ ಕೋರ್ ಕಮಿಟಿ ಸಭೆ; ಏಪ್ರಿಲ್ 8ಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬೊಮ್ಮಾಯಿ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏಪ್ರಿಲ್ 8 ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏಪ್ರಿಲ್ 8 ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಮಟ್ಟದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ, ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಗೆ ಕಳುಹಿಸಲಾಗುವುದು, ಏಪ್ರಿಲ್ 8 ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಂದೇ ಫೈನಲ್ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಮಧ್ಯೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಮುಖ್ಯಮಂತ್ರಿ ಖಚಿತಪಡಿಸಿದರು. ಈ ಮೂಲಕ ಹಾವೇರಿ ಹೊರಗಡೆ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದರು. ಅಭ್ಯರ್ಥಿಗಳ ಆಯ್ಕೆ ಸಂಬಂಧ ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಅದನ್ನು ಬೆಂಗಳೂರಿನಲ್ಲಿ ಇಂದಿನಿಂದ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ವಿವರಿಸಿದರು. 

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ  ಕಾಂಗ್ರೆಸ್  "ದಲಿತ, ಹಿಂದುಳಿದ ವರ್ಗಗಳು, ಲಿಂಗಾಯತರು ಮತ್ತು ಒಕ್ಕಲಿಗರ ವಿರೋಧಿ ಎಂದು ಕರೆದರು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದರು. 

ಕಾಂಗ್ರೆಸ್ ಲೋಕಾಯುಕ್ತವನ್ನು ದುರ್ಬಲಗೊಳಿಸಿದರೆ, ಬಿಜೆಪಿ ಸರ್ಕಾರ ಭ್ರಷ್ಟಾಚಾರದೊಂದಿಗೆ ರಾಜಿ ಮಾಡಿಕೊಂಡಿಲ್ಲ. “ಬಿಜೆಪಿ ಸರ್ಕಾರ ವಿರುದ್ಧದ  40% ಕಮಿಷನ್ ಆರೋಪವನ್ನು ಸಾಬೀತುಪಡಿಸಲು ದಾಖಲೆ ನೀಡಲು ಕಾಂಗ್ರೆಸ್ ವಿಫಲವಾಗಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com