ಬಿಜೆಪಿ ಕೋರ್ ಕಮಿಟಿ ಸಭೆ 2ನೇ ದಿನ: ಅಭ್ಯರ್ಥಿಗಳ ಮೊದಲ ಪಟ್ಟಿ ಶೀಘ್ರದಲ್ಲೇ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ರವಾನೆ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ನಡುವಲ್ಲೇ ಭಾರತೀಯ ಜನತಾ ಪಕ್ಷವು ತನ್ನ ಎರಡು ದಿನಗಳ ಕೋರ್ ಕಮಿಟಿ ಸಭೆಯನ್ನು ಮಂಗಳವಾರ ಆರಂಭಿಸಿದೆ. ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಕುರಿತು ಚರ್ಚೆಗಳು ನಡೆಯಲಿದ್ದು, ಪಟ್ಟಿ ಸಿದ್ಧಗೊಂಡ ಬಳಿಕ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ರವಾನಿಸಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ನಡುವಲ್ಲೇ ಭಾರತೀಯ ಜನತಾ ಪಕ್ಷವು ತನ್ನ ಎರಡು ದಿನಗಳ ಕೋರ್ ಕಮಿಟಿ ಸಭೆಯನ್ನು ಮಂಗಳವಾರ ಆರಂಭಿಸಿದೆ. ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಕುರಿತು ಚರ್ಚೆಗಳು ನಡೆಯಲಿದ್ದು, ಪಟ್ಟಿ ಸಿದ್ಧಗೊಂಡ ಬಳಿಕ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ರವಾನಿಸಲಿದೆ.

ಕಾರ್ಯಕಾರಿ ಸಮಿತಿಯು ಏಪ್ರಿಲ್ 8 ರಂದು ಹೆಸರುಗಳನ್ನು ಅಂತಿಮಗೊಳಿಸುವ ನಿರೀಕ್ಷೆಗಳಿವೆ. ಅಭ್ಯರ್ಥಿಗಳ ಪಟ್ಟಿ ಕುರಿತು ನಾಲ್ಕೈದು ದಿನಗಳಿಂದಲೂ ಕಸರತ್ತು ನಡೆಸುತ್ತಿರುವ ಬಿಜೆಪಿ ನಾಯಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಕೋರ್ ಕಮಿಟಿ ಸೇರಿದಂತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದಲ್ಲದೇ ಜಿಲ್ಲಾ ಮಟ್ಟದ ಸಭೆಗಳನ್ನೂ ನಡೆಸಿದ್ದಾರೆ. ಜಿಲ್ಲಾ ಘಟಕಗಳು ರಾಜ್ಯ ಘಟಕಕ್ಕೆ ಪಟ್ಟಿಯನ್ನು ರವಾನಿಸಿವೆ.

ಎರಡು ದಿನಗಳ ರಾಜ್ಯ ಮಟ್ಟದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವರು ಭಾಗವಹಿಸಿದ್ದಾರೆ. ಮೊದಲ ದಿನವೇ 106 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿದುಬಂದಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಮಾಜಿ ಸಚಿವರು ಮತ್ತು ಸಮಿತಿಯ ಭಾಗವಾಗಿರುವ ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾತನಾಡಿ, ಜಿಲ್ಲಾ ಕೇಂದ್ರಗಳಿಂದ ಅಭ್ಯರ್ಥಿಗಳ ಪಟ್ಟಿ ರಾಜ್ಯಕ್ಕೆ ಬಿಜೆಪಿ ಕೈ ಸೇರಿದೆ. ಪ್ರತಿ ಕ್ಷೇತ್ರಕ್ಕೂ ಹಲವು ಹೆಸರುಗಳಿದ್ದು, ಪ್ರತಿ ಕ್ಷೇತ್ರದಲ್ಲಿ ಎರಡರಿಂದ ಮೂರು ಹೆಸರುಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಉಳಿದ ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯಲಿದೆ. ಅದು ಪೂರ್ಣಗೊಂಡ ಬಳಿಕ ಕೇಂದ್ರ ನಾಯಕರಿಗೆ ಪಟ್ಟಿ ಕಳುಹಿಸಲಾಗುವುದು. ಹೈಕಮಾಂಡ್ ಪ್ರತಿ ಕ್ಷೇತ್ರಕ್ಕೆ ಒಬ್ಬರ ಹೆಸರನ್ನು ಅಂತಿಮಗೊಳಿಸುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com