ಚುನಾವಣಾ ರಾಜಕೀಯಕ್ಕೆ ಮತ್ತೊಬ್ಬ ಬಿಜೆಪಿ ಶಾಸಕ ಗುಡ್ ಬೈ: ಎಸ್ ಎ ರವೀಂದ್ರನಾಥ್ ನಿವೃತ್ತಿ ಘೋಷಣೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಮೊನ್ನೆಯಷ್ಟೇ ಉಡುಪಿ ಜಿಲ್ಲೆಯ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. 
ಎಸ್ ಎ ರವೀಂದ್ರನಾಥ್
ಎಸ್ ಎ ರವೀಂದ್ರನಾಥ್

ದಾವಣಗೆರೆ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಮೊನ್ನೆಯಷ್ಟೇ ಉಡುಪಿ ಜಿಲ್ಲೆಯ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. 

ಇದೀಗ ಮತ್ತೊಬ್ಬ ಬಿಜೆಪಿ ಶಾಸಕ ಅದೇ ಹಾದಿ ತುಳಿದಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್​ಎ ರವೀಂದ್ರನಾಥ್ (SA Ravindranath)​ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ನಿನ್ನೆ ದಾವಣಗೆರೆ ತಾಲೂಕಿನ ಶಿರಮಗೊಂಡನ ಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ನಾನೇ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. 

ಇತ್ತೀಚೆಗೆ ಸಿಎಂ ಬೊಮ್ಮಾಯಿ ದಾವಣಗೆರೆ ಉತ್ತರಕ್ಕೆ ಎಸ್​​.ಎ. ರವೀಂದ್ರನಾಥ್​ ಅಭ್ಯರ್ಥಿ ಎಂದು ಹೇಳಿದ್ದರು. ನನಗೆ ಟಿಕೆಟ್​ ಬೇಡ, ಹೊಸಬರಿಗೆ ಅವಕಾಶ ಕೊಡಿ ಎಂದು ರವೀಂದ್ರನಾಥ್ ಹೇಳಿದ್ದರು. ಯಡಿಯೂರಪ್ಪ ಅವರು ಸ್ವಯಂ ನಿವೃತ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಅವರಾದ ಬಳಿಕ ಹಿರಿಯ ಅಂದರೆ ನಾನೇ ಇರೋದು. ಹಾಗಾಗಿ ನಾನು ಕೂಡ ನಿವೃತ್ತಿ ಘೋಷಣ ಮಾಡಿಕೊಂಡಿದ್ದೇನೆ. ಪಕ್ಷ ಯಾರಿಗೆ ಟಿಕೆಟ್​ ನೀಡುತ್ತದೆ ಅವರನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ. ಎಸ್ ಎ ರವೀಂದ್ರನಾಥ್ ಅವರಿಗೆ 76 ವರ್ಷಗಳಾಗಿದೆ. 

ಎಸ್.ಎ. ರವೀಂದ್ರನಾಥ್​ ಕಣದಿಂದ ಹಿಂದೆ ಸರಿಯುತ್ತಿದ್ದಂತೆ ಅವರ ನಿವಾಸದ ಮುಂದೆ ಸಾಕಷ್ಟು ಬೆಂಬಲಿಗರು ಜಮಾಯಿಸಿದ್ದರು. ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯದಂತೆ, ಬೇಕಿದ್ದರೆ 25 ಸಾವಿರ ಅಂತರದಿಂದ ಗೆಲ್ಲಿಸುತ್ತೇವೆ. ಜೊತೆಗೆ ಪಕ್ಷದ ವರಿಷ್ಠರ ಮನವೊಲಿಸುವ ಕೆಲಸ ಕೂಡ ಮಾಡುತ್ತೇವೆ ಎಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com