ಅಭ್ಯರ್ಥಿಗಳ ಪಟ್ಟಿ ಪ್ರಕಟ ಕಸರತ್ತು: ನಾಳೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ದೆಹಲಿಗೆ

ವಿಧಾನಸಭೆ ಚುನಾವಣೆಗೆ ಇನ್ನು ಒಂದು ತಿಂಗಳು ಬಾಕಿ. ಆಡಳಿತ ಪಕ್ಷ ಬಿಜೆಪಿಯ ಮೊದಲ ಪಟ್ಟಿಯೇ ಇನ್ನೂ ಬಿಡುಗಡೆಯಾಗಿಲ್ಲ. ಏಪ್ರಿಲ್ 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 
ಸಿಎಂ ಬಸವರಾಜ ಬೊಮ್ಮಾಯಿ, ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ)
ಸಿಎಂ ಬಸವರಾಜ ಬೊಮ್ಮಾಯಿ, ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ)

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನು ಒಂದು ತಿಂಗಳು ಬಾಕಿ. ಆಡಳಿತ ಪಕ್ಷ ಬಿಜೆಪಿಯ ಮೊದಲ ಪಟ್ಟಿಯೇ ಇನ್ನೂ ಬಿಡುಗಡೆಯಾಗಿಲ್ಲ. ಏಪ್ರಿಲ್ 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಈ ಸಂಬಂಧ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಳೆ ದೆಹಲಿಗೆ ಹೋಗುತ್ತಿದ್ದಾರೆ. ಅಲ್ಲಿ ಹೈಕಮಾಂಡ್ ಜೊತೆ ಕೊನೆಯ ಸುತ್ತಿನ ಸಭೆ, ಮಾತುಕತೆ ನಡೆಯಲಿದೆ. 

ಈ ಬಾರಿ ಹಲವು ಅಚ್ಚರಿ, ಕುತೂಹಲಗಳು ಬಿಜೆಪಿಯ ಮೊದಲ ಪಟ್ಟಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿಯವರು ಹೇಳಿದ್ದು, ಯಾರ್ಯಾರಿಗೆ ಯಾವ ಕ್ಷೇತ್ರಗಳಲ್ಲಿ ಮಣೆ ಹಾಕಲಿದೆ. ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಯಾವ ಮಾನದಂಡಗಳನ್ನು ನೋಡಿದೆ ಎಂಬ ವಿಚಾರಕ್ಕೆ ಏಪ್ರಿಲ್ 8ರಂದು ತೆರೆಬೀಳಲಿದೆ. 

ಈಗಾಗಲೇ ಕೆಲವು ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಗೆ ಹೋಗಿದ್ದಾರೆ. ಇನ್ನು ಕೆಲವು ಪ್ರಮುಖ ಶಾಸಕರು ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ. ಅಸಮಾಧಾನ, ಅತೃಪ್ತಿ, ಬಂಡಾಯದ ಬಿಸಿ ಕೇಸರಿ ಪಾಳಯವನ್ನೂ ಬಿಟ್ಟಿಲ್ಲ. ಹೀಗಿರುವಾಗ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಪ್ರಯತ್ನದಲ್ಲಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡುತ್ತದೆ ಎಂಬುದು ಸದ್ಯದ ಕುತೂಹಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com