ಚೀನಾ ಮನಸ್ಥಿತಿಯುಳ್ಳ ಮಹಾರಾಷ್ಟ್ರ ಕರ್ನಾಟಕವನ್ನು ಶತ್ರುವಿನಂತೆ ನೋಡುತ್ತಿದ್ದು, ಇನ್ನೆಷ್ಟು ದಿನ ಈ ಅನ್ಯಾಯ?: ಕೇಂದ್ರದ ವಿರುದ್ಧ ಎಚ್‌ಡಿ'ಕೆ ಕಿಡಿ

ಗಡಿ ಜಿಲ್ಲೆಗಳ ಗ್ರಾಮಸ್ಥರಿಗೆ ವಿಮೆ ನೀಡುವ ಮಹಾರಾಷ್ಟ್ರ ಸರ್ಕಾರದ ಕ್ರಮವನ್ನು ಖಂಡಿಸಿರುವ ಜನತಾದಳ (ಜಾತ್ಯತೀತ) ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮ ಅವರು, ಈ ವಿಚಾರ ಸಂಬಂಧ ಕೇಂದ್ರ ಸರ್ಕಾರ ಮೌನ ವಹಿಸಿರುವುದು ದೇಶದ ಒಕ್ಕೂಟ ವ್ಯವಸ್ಥೆ ಪತನಕ್ಕೆ ಕಾರಣವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಗಡಿ ಜಿಲ್ಲೆಗಳ ಗ್ರಾಮಸ್ಥರಿಗೆ ವಿಮೆ ನೀಡುವ ಮಹಾರಾಷ್ಟ್ರ ಸರ್ಕಾರದ ಕ್ರಮವನ್ನು ಖಂಡಿಸಿರುವ ಜನತಾದಳ (ಜಾತ್ಯತೀತ) ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮ ಅವರು, ಈ ವಿಚಾರ ಸಂಬಂಧ ಕೇಂದ್ರ ಸರ್ಕಾರ ಮೌನ ವಹಿಸಿರುವುದು ದೇಶದ ಒಕ್ಕೂಟ ವ್ಯವಸ್ಥೆ ಪತನಕ್ಕೆ ಕಾರಣವಾಗಲಿದೆ ಎಂದು ಎಚ್ಚರಿಸಿದ್ದಾರೆ.

ಕರ್ನಾಟಕದ ಗಡಿ ಭಾಗದ 865 ಹಳ್ಳಿಗಳ ಜನರಿಗೆ ವಿಮಾ ಯೋಜನೆ ಜಾರಿಗೊಳಿಸಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಅವರು ಬುಧವಾರ ಸರಣಿ ಟ್ವೀಟ್‌ ಮಾಡಿ ವಾಗ್ದಾಳಿ ನಡೆಸಿದ್ದು, ಕರ್ನಾಟಕದ ಆಂತರಿಕ ವಿಚಾರದಲ್ಲಿ ನೆರೆಯ ರಾಜ್ಯ ಹಲವು ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿರುವ ಬಿಜೆಪಿ ಡಬಲ್ ಎಂಜಿನ್ ಸರಕಾರ ಪದೇಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರು ದೇಶದಂತೆ ನೋಡುತ್ತಿದೆ. ಕೇಂದ್ರ ಬಿಜೆಪಿ ಸರಕಾರ ಇದೆಲ್ಲಾ ನೋಡಿಕೊಂಡು ಮೌನವಾಗಿದೆ, ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಇದೇ ಕಾರಣವಾಗಬಹುದು ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಇಡೀ ಭಾರತವೇ ಅಡಗಿದೆ. ಕಾಶ್ಮೀರದಿಂದ ಕನ್ಯಾಕಮಾರಿಯವರೆಗೆ, ಗುಜರಾತಿನಿಂದ ಒಡಿಶಾವರೆಗೆ ಎಲ್ಲ ಕಡೆಯಿಂದಲೂ ಅನ್ನ ಅರಸಿಕೊಂಡು ಬಂದವರಿಗೆ ಆಶ್ರಯ ನೀಡಿದೆ. ಆ ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸವನ್ನು ಮಹಾರಾಷ್ಟ್ರ ಎಗ್ಗಿಲ್ಲದೆ ಮಾಡುತ್ತಿದೆ. ಕನ್ನಡಿಗರು ಸುಮ್ಮನಿರುವ ಕಾಲ ಮುಗಿದಿದೆ.

ಭಾರತ ಸ್ವತಂತ್ರ್ಯಗೊಂಡಾಗ ಎಲ್ಲರಿಗಿಂತ ಮೊದಲೇ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟವರು ನಾವು. ನಮ್ಮ ಉದಾರತೆಯೇ ನಮಗೆ ಇಂದು ಮುಳುವಾಗಿದೆಯಾ? ನೆಲ, ಜಲ, ಭಾಷೆ, ಅನುದಾನ ಸೇರಿ ಪ್ರತಿ ವಿಷಯದಲ್ಲೂ ಕನ್ನಡಿಗರು ಮಲತಾಯಿ ಮಕ್ಕಳಾಗಿದ್ದಾರೆ!! ಇನ್ನೆಷ್ಟು ದಿನ ಈ ಅನ್ಯಾಯ? ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com