ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರದಲ್ಲಿ ಹೆಚ್ಚಿನ ಲಾಭಕ್ಕಾಗಿ ಮೇಲುಕೋಟೆ ಬಿಟ್ಟುಕೊಟ್ಟ ಕಾಂಗ್ರೆಸ್!

ಬಿಜೆಪಿಗೆ ಬೆಂಬಲ ಘೋಷಿಸಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಭಾವವನ್ನು ತಡೆಯಲು ಮತ್ತು ಕರ್ನಾಟಕ ರೈತ ರಾಜ್ಯ ಸಂಘದ (ಕೆಆರ್‌ಆರ್‌ಎಸ್) ಕಾರ್ಯಕರ್ತರ ಮನ ಗೆಲ್ಲಲು ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟುಕೊಟ್ಟಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಬಿಜೆಪಿಗೆ ಬೆಂಬಲ ಘೋಷಿಸಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಭಾವವನ್ನು ತಡೆಯಲು ಮತ್ತು ಕರ್ನಾಟಕ ರೈತ ರಾಜ್ಯ ಸಂಘದ (ಕೆಆರ್‌ಆರ್‌ಎಸ್) ಕಾರ್ಯಕರ್ತರ ಮನ ಗೆಲ್ಲಲು ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರದಲ್ಲಿ ದಿವಂಗತ ರೈತ ಮುಖಂಡ ಕೆ ಎಸ್ ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರ ವಿರುದ್ಧ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಮೇಲುಕೋಟೆಯಿಂದ ಪಕ್ಷದ ಟಿಕೆಟ್‌ಗಾಗಿ ಹಲವು ಆಕಾಂಕ್ಷಿಗಳಿದ್ದರೂ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರಬಲ ಕಾರ್ಯಕರ್ತರನ್ನು ಹೊಂದಿರುವ ಕೆಆರ್‌ಆರ್‌ಎಸ್‌ಗೆ ಕಾಂಗ್ರೆಸ್ ಹೈಕಮಾಂಡ್ ಸ್ಥಾನವನ್ನು ಬಿಟ್ಟುಕೊಟ್ಟಿದೆ. ಈ ಬೆಂಬಲದಿಂದ ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಲಾಭವಾಗಲಿದೆ. 

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಮುಖ್ಯಸ್ಥರಾದ ಖ್ಯಾತ ಬರಹಗಾರ ದೇವನೂರು ಮಹಾದೇವ ಮತ್ತು ಅವರ ಅನುಯಾಯಿಗಳು ಭಾಗವಹಿಸಿದ್ದರು. ಕರ್ನಾಟಕದಲ್ಲಿ ನಡೆದ 500 ಕಿಲೋಮೀಟರ್ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಕೆಆರ್‌ಆರ್‌ಎಸ್ ಕಾರ್ಯಕರ್ತರು ಮತ್ತು ರೈತರೊಂದಿಗೆ ಸಂವಾದ ನಡೆಸಿದ್ದರು.

ಕೊಳ್ಳೇಗಾಲದ ಸಂತೇಮರಹಳ್ಳಿ ಕ್ಷೇತ್ರದಲ್ಲಿ ಈ ಹಿಂದಿನ ಚುನಾವಣೆಯಲ್ಲಿ ಆರ್.ಧ್ರುವನಾರಾಯಣ ವಿರುದ್ಧಒಂದು ಮತದಿಂದ ಸೋತಿದ್ದ ಎ.ಆರ್.ಕೃಷ್ಣಮೂರ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಮಾಜಿ ಶಾಸಕರಾದ ಎಸ್.ಜಯಣ್ಣ ಮತ್ತು ಎಸ್.ಬಾಲರಾಜ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪಕ್ಷದ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದರೂ, ಕೊಳ್ಳೇಗಾಲ ವಿಧಾನಸಭಾ ಭಾಗದಲ್ಲಿ ಕಳೆದ ಐದು ವರ್ಷಗಳಿಂದ ಪಕ್ಷವನ್ನು ಸಂಘಟಿಸಿದ ಕೃಷ್ಣಮೂರ್ತಿ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಇದು ಜಯಣ್ಣ ಮತ್ತು ಬಾಲರಾಜ್ ಬೆಂಬಲಿಗರಲ್ಲಿ ಭಿನ್ನಾಭಿಪ್ರಾಯ ಮೂಡಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕರ ಜತೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ಮಧ್ಯೆ ಚಾಮರಾಜ ಮತ್ತು ಕೃಷ್ಣರಾಜ ಕ್ಷೇತ್ರಗಳ ಅಭ್ಯರ್ಥಿಯ ಹಗ್ಗಜಗ್ಗಾಟ ಮುಂದುವರಿದಿದೆ. ಕೃಷ್ಣರಾಜದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿಷ್ಠಾವಂತ ಹಾಗೂ ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ಗೆ ಬೆಂಬಲ ನೀಡಿದರೆ, ಬ್ರಾಹ್ಮಣ ಸಮುದಾಯದ ಯುವ ಕಾಂಗ್ರೆಸ್ ಮುಖಂಡ ಕೆ.ಆರ್.ನವೀನ್ ಕುಮಾರ್ ಕೂಡ ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ, ಬ್ರಾಹ್ಮಣರು ಮತದಾರರಲ್ಲಿ ಒಂದು ಭಾಗವಾಗಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಚಾಮರಾಜದಲ್ಲಿ ಕಾಂಗ್ರೆಸ್ ಟಿಕೆಟ್ ಇಬ್ಬರು ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಎಂ ವೀರಪ್ಪ ಮೊಯ್ಲಿ ನಡುವೆ ಪ್ರತಿಷ್ಠೆಯ ಪ್ರಶ್ನೆಯಾಗಿ ಮಾರ್ಪಟ್ಟಿದೆ. ಗೌಡ ಮತ್ತು ವಾಸು ಇಬ್ಬರೂ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದರೂ ಮೊಯ್ಲಿ ತಮ್ಮ ಹಿಂಬಾಲಕ ವಾಸು ಅವರನ್ನು ಬೆಂಬಲಿಸುತ್ತಿದ್ದರೆ, ಹರೀಶ್ ಗೌಡ ಅವರನ್ನು ಕಣಕ್ಕಿಳಿಸಬೇಕು ಎಂದು ಸಿದ್ದರಾಮಯ್ಯ ಬಯಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಿಂದ ಸಚಿವ ಡಾ. ಕೆ.ಸಿ. ನಾರಾಯಣಗೌಡ ಕಾಂಗ್ರೆಸ್  ಸೇರಿ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತಿತ್ತು. ಆದರೆ, ಅವರು ಬಿಜೆಪಿ ತೊರೆಯದ ಕಾರಣ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋತಿದ್ದ ಬಿ.ಎಲ್. ದೇವರಾಜ್ ಅವರನ್ನು ಕಾಂಗ್ರೆಸ್ ಈ ಬಾರಿ ಕಣಕ್ಕಿಳಿಸಿದೆ.  ಅವರು ಕಳೆದೆರಡು ದಿನಗಳ ಹಿಂದೆ ಕಾಂಗ್ರೆಸ್ ಸೇರಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com