ಗೆಲ್ಲುವ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಬೇಟೆ? ಡಿಕೆಶಿಯ 'ಒಬ್ಬ ನಾಯಕ, ಒಂದೇ ಕ್ಷೇತ್ರ' ನೀತಿಯಿಂದಾಗಿ ಸಿದ್ದುಗಿಲ್ಲ ಕೋಲಾರ ಟಿಕೆಟ್?

ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಗುರುವಾರ ತನ್ನ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಎಚ್‌ವೈ ಮೇಟಿ, ಬಾಬುರಾವ್ ಚಿಂಚನಸೂರ್, ಸಂತೋಷ್ ಲಾಡ್, ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ಅಭ್ಯರ್ಥಿಗಳ ಹೆಸರಿವೆ.
ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ
ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ
Updated on

ಬೆಂಗಳೂರು: ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಗುರುವಾರ ತನ್ನ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಎಚ್‌ವೈ ಮೇಟಿ, ಬಾಬುರಾವ್ ಚಿಂಚನಸೂರ್, ಸಂತೋಷ್ ಲಾಡ್, ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ಅಭ್ಯರ್ಥಿಗಳ ಹೆಸರಿವೆ.

166 ಸ್ಥಾನಗಳಿಗೆ ಹೆಸರನ್ನು ಅಂತಿಮಗೊಳಿಸಿದ ಪಕ್ಷವು 58 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸದೆ ತಡೆಹಿಡಿದಿದೆ. ಗೆಲ್ಲುವ ಅಭ್ಯರ್ಥಿಗಳ ಕೊರತೆಯಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆಯು ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳವಾರ ಮತ್ತು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಚರ್ಚೆ ನಡೆಸಿತು.

ಬಿಜೆಪಿ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ಶಿಕಾರಿಪುರ, ಉತ್ತರಹಳ್ಳಿ, ರಾಮನಗರ ಮತ್ತು ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಕಳೆದ ಮೂರ್ನಾಲ್ಕು ಚುನಾವಣೆಗಳಲ್ಲಿ ಪಕ್ಷ ತನ್ನ ಖಾತೆ ತೆರೆಯಲು ವಿಫಲವಾದ ಕ್ಷೇತ್ರಗಳು ಸೇರಿವೆ.  ಈ ಸ್ಥಾನಗಳಲ್ಲಿ ಕಾಂಗ್ರೆಸ್‌ಗೆ ಬಹಳ ಕಡಿಮೆ ಅವಕಾಶವಿದೆ ಮತ್ತು ಬೂತ್ ಮಟ್ಟದಲ್ಲಿ ಪ್ರಬಲ ಅಭ್ಯರ್ಥಿಗಳಾಗಲೀ ಅಥವಾ ಉತ್ತಮ ಪಕ್ಷದ ಸಂಘಟನೆಯಾಗಲಿ ಇಲ್ಲ.

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲು ಬಯಸಿದ್ದರು, ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರುಣಾದಿಂದಲೇ ಸ್ಪರ್ಧಿಸುವಂತೆ ಸೂಚಿಸಿದ್ದಾರೆ ಎಂಬ ವಿಷಯವನ್ನು ಕಾಂಗ್ರೆಸ್ ನಾಯಕರು ಅಲ್ಲಗಳೆದಿದ್ದಾರೆ, ಕೆಲ ಕ್ಷೇತ್ರಗಳಲ್ಲಿ ಒಂದಕ್ಕಿಂತ ಹೆಚ್ಚಿನ ಆಕಾಂಕ್ಷಿಗಳಿರುವ ಕಾರಣ ಪಕ್ಷ ಮೂರನೇ ಪಟ್ಟಿ ಬಿಡುಗಡೆ ಮಾಡುವುದನ್ನು ಮತ್ತಷ್ಟು ವಿಳಂಬ ಮಾಡುತ್ತದೆ ಎನ್ನಲಾಗಿದೆ.

ಒಂದು ಕ್ಷೇತ್ರದಲ್ಲಿ ಹಲವು ಆಕಾಂಕ್ಷಿಗಳಿರುವ ಕಾರಣ, ಸ್ಪರ್ಧೆ ಕಠಿಣವಾಗಲಿದೆ, ಹಾಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮ ಮಾಡುವುದು ಸ್ವಲ್ಪ ವಿಳಂಬವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ನಮಗೆ 1,350 ಅರ್ಜಿಗಳು ಬಂದಿವೆ, ಇದು ಪ್ರತಿ ಕ್ಷೇತ್ರಕ್ಕೆ ಸರಾಸರಿ ಆರು ಅಭ್ಯರ್ಥಿಗಳನ್ನು ಮಾಡಲು ಅವಕಾಶವಿದೆ, ನಮಗೆ ರಾಜ್ಯದ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಮರ್ಥ ಅಭ್ಯರ್ಥಿಗಳಿದ್ದಾರೆ ಎಂದು ಎಐಸಿಸಿ ಮುಖಂಡ ಡಾ.ಗೌರವ್ ವಲ್ಲಭ್ ಹೇಳಿದ್ದಾರೆ.

ಕಾಂಗ್ರೆಸ್ 166 ಹೆಸರುಗಳನ್ನು ಬಿಡುಗಡೆ ಮಾಡಿದೆ,  ಆದರೆ  ಬಿಜೆಪಿಗೆ ಇದುವರೆಗೆ ಪಟ್ಟಿ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ. ಬಹುಶಃ ಪ್ರತಿ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ಪ್ರತಿ ಹಳ್ಳಿಯಲ್ಲಿ ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ವಿಷಯ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚೆಗೆ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇತ್ತೀಚೆಗೆ ಸ್ಪಷ್ಟಪಡಿಸಿದಂತೆ 'ಒಬ್ಬ ನಾಯಕ, ಒಂದೇ ಟಿಕೆಟ್' ನೀತಿಯಿಂದಾಗಿ ಪಕ್ಷವು ಅವರಿಗೆ ಎರಡನೇ ಸ್ಥಾನವನ್ನು ನೀಡುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ.

ಹೈಕೋರ್ಟ್‌ನಲ್ಲಿ ನಕಲಿ ಎಸ್‌ಸಿ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಪ್ರಕರಣ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಕೋತೂರು ಜಿ ಮಂಜುನಾಥ್ ಅವರ ಪರವಾಗಿ ತೀರ್ಪು ಬಂದರೆ ಮುಳಬಾಗಲು (ಎಸ್‌ಸಿ) ಅಭ್ಯರ್ಥಿಯಾಗುವ ನಿರೀಕ್ಷೆಯಿದೆ.  ಒಂದು ವೇಳೆ ತೀರ್ಪು  ವಿರುದ್ಧವಾಗಿ ಬಂದರೆ  ಕೋಲಾರಕ್ಕೆ ತೆರಳಬಹುದು, ಅದಕ್ಕಾಗಿಯೇ ಕೋಲಾರ ಮತ್ತು ಮುಳಬಾಗಲು ಇನ್ನೂ ಅಭ್ಯರ್ಥಿಗಳನ್ನು ಘೋಷಿಸಲಾಗಿಲ್ಲ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com