100 ಕ್ಷೇತ್ರಗಳಲ್ಲಿ ಮನೆ ಮನೆಗೂ ಪಕ್ಷದ ಸಂದೇಶ ತಲುಪಿಸಲು ಯುವ ಕಾಂಗ್ರೆಸ್ ಸದಸ್ಯರಿಗೆ ನಿರ್ದೇಶನ

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಎಲ್ಲ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್, 100 ಕ್ಷೇತ್ರಗಳ  ಪ್ರತಿ ಮನೆಗೂ ಪಕ್ಷದ ಸಂದೇಶ  ತಲುಪಿಸಲು ಗಮನ ಹರಿಸುವಂತೆ ಯುವ ಕಾಂಗ್ರೆಸ್ ಸದಸ್ಯರಿಗೆ ನಿರ್ದೇಶನ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಎಲ್ಲ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್, 100 ಕ್ಷೇತ್ರಗಳ  ಪ್ರತಿ ಮನೆಗೂ ಪಕ್ಷದ ಸಂದೇಶ  ತಲುಪಿಸಲು ಗಮನ ಹರಿಸುವಂತೆ ಯುವ ಕಾಂಗ್ರೆಸ್ ಸದಸ್ಯರಿಗೆ ನಿರ್ದೇಶನ ನೀಡಲಾಗಿದೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್, 100 ಸ್ಥಾನಗಳನ್ನು ಸಂಪೂರ್ಣ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. 2018ರಲ್ಲಿ ಚುನಾವಣೆಯಲ್ಲಿ ಪಕ್ಷ ಗೆದ್ದ ಅಥವಾ ಕಡಿಮೆ ಅಂತರದಲ್ಲಿ ಸೋತ ಕ್ಷೇತ್ರಗಳತ್ತ ಗಮನ ಹರಿಸುವಂತೆ ಯುವ ಕಾಂಗ್ರೆಸ್ ಸದಸ್ಯರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಹಲವು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿದ ಶ್ರೀನಿವಾಸ್ , ದೇಶದ ವಿವಿಧ ಭಾಗಗಳ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಭಾರತೀಯ ಯುವ ಕಾಂಗ್ರೆಸ್ ನಾಯಕರಿಗೆ ವಿವಿಧ ಕ್ಷೇತ್ರಗಳನ್ನು ನಿಯೋಜಿಸಲಾಗಿದೆ. ಅವರು ಮನೆ ಮನೆಗೆ ತೆರಳಿ ಕಾಂಗ್ರೆಸ್‌ನ ಭರವಸೆಗಳು ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಹೇಳುತ್ತಿದ್ದಾರೆ. ನಾವು  130 ರಿಂದ 140 ಸ್ಥಾನಗಳನ್ನು ಗೆಲ್ಲುತ್ತೇವೆ. ಯುವ ಕಾಂಗ್ರೆಸ್ ಸದಸ್ಯರು 45 ದಿನಗಳ ಕಾಲ ತಳಮಟ್ಟದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಅವರು ಕೋವಿಡ್ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದರು. 

ಬಿಜೆಪಿಯವರು ಕರ್ನಾಟಕದಲ್ಲಿ  ಯುಪಿ ಮತ್ತು ಗುಜರಾತ್ ಮಾದರಿ ಜಾರಿಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಕರ್ನಾಟಕದಲ್ಲಿನ ಜನರಿಗೆ ಉದ್ಯೋಗ ಬೇಕು, ಆದರೆ ಸರ್ಕಾರ ಉದ್ಯೋಗಾವಕಾಶ ಸೃಷ್ಟಿಸುವಲ್ಲಿ ವಿಫಲವಾಗಿದೆ. ಬಿಜೆಪಿ ನಾಯಕರ ನಿರ್ಲಕ್ಷ್ಯದಿಂದ ಅನೇಕ ಹೂಡಿಕೆದಾರರು ರಾಜ್ಯ ತೊರೆಯುತ್ತಿದ್ದಾರೆ. ಕೇಂದ್ರ ಸಚಿವರು ಯುವಜನರನ್ನು ಓಲೈಸಲು ಕಾಲೇಜು ಕ್ಯಾಂಪಸ್‌ಗಳಿಗೆ ಆಗಾಗ್ಗೆ ಹೋಗುತ್ತಿರುವಂತೆಯೇ, ಮೊದಲ ಬಾರಿಗೆ ಮತದಾರರತ್ತ ಯುವ ಕಾಂಗ್ರೆಸ್ ಗಮನ ಕೇಂದ್ರೀಕರಿಸಿದೆ.  ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಿಜೆಪಿ ಕೇಂದ್ರ ನಾಯಕರು ಶೇ.40 ರಷ್ಟು ಭ್ರಷ್ಟಾಚಾರ, ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಹಗರಣ ಕುರಿತು ಮಾತನಾಡಬೇಕು ಎಂದು ಒತ್ತಾಯಿಸಿದರು.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಏಕೆ ಅನರ್ಹಗೊಳಿಸಲಾಯಿತು ಎಂಬುದನ್ನು ಜನರಿಗೆ ವಿವರಿಸುತ್ತಿದ್ದೇವೆ ಎಂದು ಶ್ರೀನಿವಾಸ್ ಹೇಳಿದರು. ಕೈಗಾರಿಕೋದ್ಯಮಿ ಗೌತಮ್ ಅದಾನಿ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲು ಪ್ರಾರಂಭಿಸಿದ ನಂತರ ಇದನ್ನು ಮಾಡಲಾಗಿದೆ. ಒಬ್ಬ ವ್ಯಕ್ತಿಯನ್ನು ರಕ್ಷಿಸಲು ಅವರು ಎಲ್ಲವನ್ನೂ ಮಾಡಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com