ಕಾಂಗ್ರೆಸ್-ಬಿಜೆಪಿ ಪಕ್ಷಗಳ ಆಂತರಿಕ ಕಚ್ಚಾಟದಿಂದ ಜೆಡಿಎಸ್'ಗೆ ಲಾಭ!

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದ ತಮ್ಮ ತಮ್ಮ ಪಕ್ಷಗಳ ವಿರುದ್ಧ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ಬಂಡಾಯ ಎದ್ದಿದ್ದು, ಈ ಬೆಳವಣಿಗೆ ಜೆಡಿಎಸ್ ಪಕ್ಷಕ್ಕೆ ಲಾಭವನ್ನು ತಂದೊಡ್ಡಲಿದೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲಬುರಗಿ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದ ತಮ್ಮ ತಮ್ಮ ಪಕ್ಷಗಳ ವಿರುದ್ಧ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ಬಂಡಾಯ ಎದ್ದಿದ್ದು, ಈ ಬೆಳವಣಿಗೆ ಜೆಡಿಎಸ್ ಪಕ್ಷಕ್ಕೆ ಲಾಭವನ್ನು ತಂದೊಡ್ಡಲಿದೆ ಎಂದು ಹೇಳಲಾಗುತ್ತಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ದೂರವಾಣಿ ಕರೆ ಮೂಲಕ ಮಾತನಾಡಿ ಮಾಹಿತಿ ನೀಡಿರುವ ಕಾಶಂಪೂರ್ ಅವರು, ಪಕ್ಷವು ಈಗಲೇ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವುದಿಲ್ಲ. ಚುನಾವಣೆ ಮೇ.10 ರಂದು ನಡೆಯಲಿದ್ದು, ಬಿಜೆಪಿ-ಕಾಂಗ್ರೆಸ್ ಪಟ್ಟಿಗಳು ಬಿಡುಗಡೆಯಾಗುವವರೆಗೂ ಕಾದು ನೋಡುವ ತಂತ್ರವನ್ನು ಅನುಸರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಬೇರೆಯವರಿಗೆ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿ ಕಂಡು ಬಂದಿದ್ದೇ ಆದರೆ, ಅಗತ್ಯಬಿದ್ದರೆ, ಈಗಾಗಲೇ ಘೋಷಣೆ ಮಾಡಲಾಗಿರುವ ಪಟ್ಟಿಗಳಲ್ಲಿಯೂ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್ ಬದಲಾಯಿಸುವ ಸಾಧ್ಯತೆಗಳೂ ಇವೆ ಎಂದು ತಿಳಿಸಿದ್ದಾರೆ.

ಮಾಜಿ ಸಚಿವ ಡಾ.ಎ.ಬಿ.ಮಾಲಕ ರೆಡ್ಡಿ ಅವರ ಕೆಲ ಬೆಂಬಲಿಗರು, ಜೆಡಿಎಸ್ ಹಿರಿಯ ನಾಯಕರನ್ನು ಸಂಪರ್ಕಿಸಿದ್ದು ಮಾಲಕ ರೆಡ್ಡಿಯವರಿಗೆ ಅಥವಾ ಅವರ ಪುತ್ರಿ ಡಾ.ಅನುರಾಘಾ ಅವರಿಗೆ ಯಾದಗಿರಿಯಲ್ಲಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆಂದು ಹೇಳಿದರು.

ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಉದ್ಯಮಿ ಮತ್ತು ಗುಲ್ಬರ್ಗ-ದಕ್ಷಿಣದಿಂದ ಟಿಕೆಟ್ ಆಕಾಂಕ್ಷಿಯಾಗಿರುವ ಗುಲ್ಬರ್ಗ-ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡ ಕೃಷ್ಣಾಜಿ ಕುಲಕರ್ಣಿ ಅವರು ಮಾತನಾಡಿ, ಜೆಡಿಎಸ್‌ನ ಕೆಲವು ನಾಯಕರು ನನ್ನನ್ನು ಸಂಪರ್ಕಿಸಿದ್ದು, ಜೆಡಿಎಸ್ ಪಕ್ಷದ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ನಾನಿನ್ನೂ ಈ ಬಗ್ಗೆ ನಿರ್ಧರಿಸಿಲ್ಲ ಎಂದು ಎಂದು ಎಕ್ಸ್‌ಪ್ರೆಸ್‌ಗೆ ತಿಳಿಸಿದರು, ಆದರೆ ಅವರು ತಮ್ಮ ಮುಂದಿನ ಕ್ರಮವನ್ನು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.

ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೆಲ ದಿನಗಳ ಹಿಂದೆ ಡಾ.ಮಾಲಕ ರೆಡ್ಡಿ ಅವರನ್ನು ಸಂಪರ್ಕಿಸಿದ್ದು, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಾತುಕತೆ ವೇಳೆ ಯಾದಗಿರಿ ಕ್ಷೇತ್ರದಿಂದ ಡಾ.ಅನುರಾಘಾ ಅವರನ್ನು ಕಣಕ್ಕಿಳಿಸುವುದಾಗಿ ಮಾಲಕ ರೆಡ್ಡಿ ಅವರಿಗೆ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದು, ಡಾ. ಮಾಲಕ ರೆಡ್ಡಿ ಅವರು ಈ ಆಫರ್'ನ್ನು ಒಪ್ಪಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

ಆದರೆ 2 ದಿನಗಳ ಹಿಂದಷ್ಟೇ ಪ್ರಕಟವಾಗಿರುವ ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಯಾದಗಿರಿ ಕ್ಷೇತ್ರದಿಂದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ಬೆಳವಣಿಗೆ ಡಾ.ಮಾಲಕ ರೆಡ್ಡಿ ಹಾಗೂ ಅವರ ಬೆಂಬಲಿಗರು ಕೆರಳುವಂತೆ ಮಾಡಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಡಾ.ಮಾಲಕ ರೆಡ್ಡಿ ಅವರ ಬೆಂಬಲಿಗರು ಶುಕ್ರವಾರ ಯಾದಗಿರಿಯಲ್ಲಿ ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಡಾ ಮಾಲಕ ರೆಡ್ಡಿ ಮತ್ತು ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.

ಕಲ್ಯಾಣ ಕರ್ನಾಟಕ ಭಾಗದ 2 ಜಿಲ್ಲೆಗಳಲ್ಲಿ ಇದೇ ರೀತಿಯ ಬೆಳವಣಿಗೆಗಳು ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸಾಕಷ್ಟು ಅತೃಪ್ತ ನಾಯಕರು ಇದೀಗ ಜೆಡಿಎಸ್‌ನತ್ತ ಮುಖಮಾಡಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.

ಬಿಜೆಪಿ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಬಿಜೆಪಿಯ ಅತೃಪ್ತ ನಾಯಕರೂ ಕೂಡ ಜೆಡಿಎಸ್'ಗೆ ಸೇರ್ಪಡೆಗೊಳ್ಳಬಹುದು ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆಯು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಅವಕಾಶ ಮಾಡಿಕೊಡಲಿದೆ. ಇದಷ್ಟೇ ಅಲ್ಲ, ಪಟ್ಟಿ ಬಿಡುಗಡೆ ವಿಳಂಬವಾದಷ್ಟು ಆಂತರಿಕ ಸಮಸ್ಯೆಗಳಿಗೂ ಪರಿಹಾರ ದೊರೆಯಲಿದೆ ಎಂದು ಜೆಡಿಎಸ್‌ನ ಉನ್ನತ ಮೂಲಗಳು ಮಾಹಿತಿ ನೀಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com