ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಗೆಲುವಿಗೆ ಕೆಆರ್‌ಆರ್‌ಎಸ್- ಕಾಂಗ್ರೆಸ್ ಕಾರ್ಯಕರ್ತರ ಬೆಂಬಲ: ಎನ್. ಚಲುವರಾಯಸ್ವಾಮಿ

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ (ಎಸ್‌ಕೆಪಿ) ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಗೆಲುವಿಗೆ ಕಾಂಗ್ರೆಸ್ ಸಂಪೂರ್ಣವಾಗಿ ಶ್ರಮಿಸಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ದರ್ಶನ್ ಪುಟ್ಟಣ್ಣಯ್ಯ
ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ (ಎಸ್‌ಕೆಪಿ) ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಗೆಲುವಿಗೆ ಕಾಂಗ್ರೆಸ್ ಸಂಪೂರ್ಣವಾಗಿ ಶ್ರಮಿಸಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಹಿಂದಿನ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಸೋತಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ದರ್ಶನ್ ಅವರಿಗೆ ಪಕ್ಷದ ಹೈಕಮಾಂಡ್ ಸ್ಥಾನ ಬಿಟ್ಟುಕೊಟ್ಟಿದೆ ಎಂದರು.

ಕೆಆರ್‌ಆರ್‌ಎಸ್ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಮೇಲುಕೋಟೆಯಿಂದ ಎರಡು ಬಾರಿ ಗೆದ್ದು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದನ್ನು ಸ್ಮರಿಸಿದ ಅವರು, ಬಿಜೆಪಿಯ ದುರಾಡಳಿತದಿಂದ ಬೇಸತ್ತು ಜನರು ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದರು.

ಮೇಲುಕೋಟೆ ಕಾಂಗ್ರೆಸ್ ಘಟಕದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಎಸ್‌ಕೆಪಿ ಅಭ್ಯರ್ಥಿಯ ಗೆಲುವಿಗೆ ಪಕ್ಷ ಶ್ರಮಿಸಲಿದೆ ಎಂದು ಸ್ಪಷ್ಟಪಡಿಸಿದರು. ಮಂಡ್ಯ ಕ್ಷೇತ್ರದಿಂದ ಎಸ್‌ಕೆಪಿ ಅಭ್ಯರ್ಥಿ ಹಿಂದೆ ಸರಿಯುತ್ತಾರೆ ಎಂದು ಆಶಿಸಿದರು.

ಏತನ್ಮಧ್ಯೆ, ಮೇಲುಕೋಟೆಯಿಂದ ತಮ್ಮ ಉಮೇದುವಾರಿಕೆಗೆ ಬೆಂಬಲ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಡಿ ಕೆ ಶಿವಕುಮಾರ್ ಮತ್ತು ಇತರರಿಗೆ ದರ್ಶನ್ ಧನ್ಯವಾದ ಹೇಳಿದರು. ಮೇಲುಕೋಟೆಯ ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಸೋಲಿಸಲು ಕೆಆರ್‌ಆರ್‌ಎಸ್ ಮತ್ತು ಕಾಂಗ್ರೆಸ್ ಮುಖಂಡರು ಜಂಟಿ ರ್ಯಾಲಿ ನಡೆಸಿ ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com