ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ: ಪದ್ಮನಾಭನಗರ, ಕನಕಪುರದಿಂದ ಆರ್ ಅಶೋಕ್, ಸಿದ್ದರಾಮಯ್ಯ ವಿರುದ್ಧ ವರುಣಾದಿಂದ ಸೋಮಣ್ಣ ಕಣಕ್ಕೆ

ರಾಜ್ಯ ಚುನಾವಣೆಗೆ ಉಳಿದೆಲ್ಲಾ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದರೂ ಗಜಪ್ರಸವದಂತಾಗಿದ್ದ ಬಿಜೆಪಿಯ ಮೊದಲ ಪಟ್ಟಿ ಕೊನೆಗೂ ಇಂದು ಏ.11 ರಂದು ಬಿಡುಗಡೆಯಾಗಿದೆ. 
ಬಿಜೆಪಿ ಲೋಗೋ
ಬಿಜೆಪಿ ಲೋಗೋ

ನವದೆಹಲಿ: ರಾಜ್ಯ ಚುನಾವಣೆಗೆ ಉಳಿದೆಲ್ಲಾ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದರೂ ಗಜಪ್ರಸವದಂತಾಗಿದ್ದ ಬಿಜೆಪಿಯ ಮೊದಲ ಪಟ್ಟಿ ಕೊನೆಗೂ ಇಂದು ಏ.11 ರಂದು ಬಿಡುಗಡೆಯಾಗಿದೆ. 

ರಾತ್ರಿ 9 ಗಂಟೆ ವೇಳೆಗೆ ಕೇಂದ್ರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದ 189 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದರು. 

ರಾಜ್ಯದಲ್ಲಿ ಹೊಸ ತಲೆಮಾರಿನ ನಾಯಕತ್ವ ಬಂದಿದೆ ಎಂದು ಹೇಳುವ ಮೂಲಕ ಹೊಸ ಅಭ್ಯರ್ಥಿಗಳಿಗೆ ಆದ್ಯತೆ ನೀಡಿರುವ ಸುಳಿವನ್ನು ಸುದ್ದಿಗೋಷ್ಠಿಯಲ್ಲಿ ಧರ್ಮೇಂದ್ರ ಸಿಂಗ್ ನೀಡಿದರು. 

ಟಿಕೆಟ್ ಘೋಷಣೆಗೂ ಮುನ್ನ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬೆಳವಣಿಗೆಗಳು ರಾಜ್ಯದಲ್ಲಿ ಹಲವು ಮಂದಿ ಹಾಲಿ ಶಾಸಕರಿಗೆ ಹಾಗೂ ಹಿರಿಯ ನಾಯಕರಿಗೆ ಈ ಬಾರಿ ಖೋಕ್ ನೀಡಲಾಗುತ್ತದೆ ಎಂಬ ಸುಳಿವು ನೀಡಿತ್ತು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಈ ಬಾರಿ 52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ, 9 ವೈದ್ಯರಿಗೆ, ನಿವೃತ್ತ ಐಎಸ್ಎಸ್, ಐಪಿಎಸ್ ಗಳಿಗೆ ಟಿಕೆಟ್ ನೀಡಲಾಗಿದೆ. 32 ಒಬಿಸಿ ಗಳಿಗೆ ಟಿಕೆಟ್ ನೀಡಲಾಗಿದೆ ಎಂದು ಹೇಳಿದರು. ಇತ್ತೀಚೆಗಷ್ಟೇ ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗೆ ಟಿಕೆಟ್ ಘೋಷಿಸಲಾಗಿದೆ.

BJP releases a list of 189 candidates for the upcoming #KarnatakaElections2023 pic.twitter.com/Pt0AZTaIBE

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com