ಕುಮಾರಸ್ವಾಮಿ ಜತೆ ಜಗಳವಾಡುವುದಿಲ್ಲ; ಪಕ್ಷ, ಕುಟುಂಬಕ್ಕಾಗಿ ಒಂದಾಗುತ್ತೇವೆ: ರೇವಣ್ಣ

ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಎಚ್.ಡಿ.ರೇವಣ್ಣ ಮತ್ತು ಎಚ್.ಡಿ.ಕುಮಾರಸ್ವಾಮಿ ನಡುವೆ ಜಗಳವಾಗಿದೆ ಎಂಬ ಊಹಾಪೋಹಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಜೆಡಿಎಸ್ ಮುಖಂಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು,...
ಕುಮಾರಸ್ವಾಮಿ- ರೇವಣ್ಣ
ಕುಮಾರಸ್ವಾಮಿ- ರೇವಣ್ಣ

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಎಚ್.ಡಿ.ರೇವಣ್ಣ ಮತ್ತು ಎಚ್.ಡಿ.ಕುಮಾರಸ್ವಾಮಿ ನಡುವೆ ಜಗಳವಾಗಿದೆ ಎಂಬ ಊಹಾಪೋಹಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಜೆಡಿಎಸ್ ಮುಖಂಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು, ಯಾವುದೇ ಸಂದರ್ಭದಲ್ಲೂ ತಮ್ಮ ಹಾಗೂ ಕುಮಾರಸ್ವಾಮಿ ನಡುವೆ ಜಗಳವಾಗಿಲ್ಲ ಎಂದು ಬುಧವಾರ ಹೇಳಿದ್ದಾರೆ.

ಇಂದು ಹೊಳೆನರಸೀಪುರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ನಮ್ಮ ನಡುವೆ ಭಿನ್ನಾಭಿಪ್ರಾಯವಿದ್ದರೂ ಪಕ್ಷ ಹಾಗೂ ಕುಟುಂಬದ ಹಿತದೃಷ್ಟಿಯಿಂದ ಒಂದಾಗುತ್ತೇವೆ. ಸಮಸ್ಯೆಗಳ ಬಗ್ಗೆ ಅವರೊಂದಿಗೆ ಚರ್ಚಿಸಿ ಪರಿಹರಿಸಿಕೊಳ್ಳುತ್ತೇವೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಲಾಭ ಪಡೆಯಲು ಸಾಧ್ಯವಿಲ್ಲ. ಅವರು ನಮ್ಮ ನಡುವಿನ ಜಗಳಕ್ಕಾಗಿ ಕಾದು ಕುಳಿತಿದ್ದಾರೆ ಎಂದು ಟೀಕಿಸಿದರು.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಅಥವಾ ಕಾಂಗ್ರೆಸ್ ಸೇರುತ್ತೇನೆ ಎಂದು ನಾನು ಹೇಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ರೇವಣ್ಣ, ನಾನು ಈಗಾಗಲೇ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರೊಂದಿಗೆ ಪ್ರಸ್ತುತ ರಾಜಕೀಯ ಸನ್ನಿವೇಶವನ್ನು ವಿವರಿಸಿದ್ದು, ಅವರು ಹಾಸನ ಕ್ಷೇತ್ರದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. 

ದೇವೇಗೌಡರು ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಹಾಸನ ಟಿಕೆಟ್ ನೀಡುವುದಾಗಿ ಹೇಳಿದರೆ ಅದನ್ನು ಒಪ್ಪಿಕೊಳ್ಳಲು ಸಿದ್ಧ. ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಯಾವುದೇ ಸಂದರ್ಭದಲ್ಲೂ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com