ಎದೆಗೆ ಚೂರಿ ಇರಿದಂತಾಗಿದೆ, ಆಕೆ ಹೀಗೆ ಮಾಡಬಾರದಿತ್ತು: ಬಿಜೆಪಿ ಸೇರಿದ ಮಗಳ ನಡೆಗೆ ಕಾಗೋಡು ತಿಮ್ಮಪ್ಪ ಆಕ್ರೋಶ!

ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಕಾಗೋಡು ತಿಮ್ಮಪ್ಪ ಮತ್ತು ಪುತ್ರಿ ರಾಜನಂದಿನಿ
ಕಾಗೋಡು ತಿಮ್ಮಪ್ಪ ಮತ್ತು ಪುತ್ರಿ ರಾಜನಂದಿನಿ

ಶಿವಮೊಗ್ಗ: ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಇಂದು ಬಿಜೆಪಿ ಕಚೇರಿಯಲ್ಲಿ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. 

ಇದರ ಬೆನ್ನಲ್ಲೇ ಪುತ್ರಿ ರಾಜನಂದಿನಿ ಬಿಜೆಪಿ ಸೇರಲು ಹೊರಟಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಾಗೋಡು ತಿಮ್ಮಪ್ಪ ಅವರು, ಈ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಈಗ ವಿಷಯ ಗೊತ್ತಾಯಿತು. ಅವಳು (ರಾಜ ನಂದಿನಿ) ಈ ರೀತಿ ಮಾಡುತ್ತಾಳೆ ಎಂಬುದನ್ನು ಕನಸಲ್ಲೂ ಯೋಚಿಸಿರಲಿಲ್ಲ. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ತಂತ್ರ ಇರಬಹುದು ಎಂದು ಹೇಳಿದ್ದಾರೆ.

ರಾಜಕಾರಣದಲ್ಲಿ ಬದ್ಧತೆ, ಸ್ಥಿರತೆ ಇಟ್ಟುಕೊಂಡು ಬೆಳೆದು ಬಂದವರು ನಾವು. ಆ ಸಂತೋಷ, ನೆಮ್ಮದಿ ನನಗೆ ಇದೆ. ಏನೇ ಆಗಲಿ ನಾನು ಕಾಂಗ್ರೆಸ್ ಬಿಟ್ಡು ಹೋಗಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಎಂದು ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com