ಶಾಸಕ ಗೂಳಿಹಟ್ಟಿ ಶೇಖರ್ ಗೆ ಸಿಗದ ಟಿಕೆಟ್: ಜನಾರ್ದನ ರೆಡ್ಡಿಯ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರ್ಪಡೆ ಸಾಧ್ಯತೆ

ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಗೆ ಬಿಜೆಪಿಯಿಂದ ಈ ಬಾರಿ ಟಿಕೆಟ್ ಘೋಷಣೆಯಾಗಿಲ್ಲ.  ಇದರಿಂದ ಬೇಸತ್ತಿರುವ ಗೂಳಿಹಟ್ಟಿ ಶೇಖರ್ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಗೂಳಿಹಟ್ಟಿ ಶೇಖರ್
ಗೂಳಿಹಟ್ಟಿ ಶೇಖರ್

ಹೊಸದುರ್ಗ: ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಗೆ ಬಿಜೆಪಿಯಿಂದ ಈ ಬಾರಿ ಟಿಕೆಟ್ ಘೋಷಣೆಯಾಗಿಲ್ಲ.  ಇದರಿಂದ ಬೇಸತ್ತಿರುವ ಗೂಳಿಹಟ್ಟಿ ಶೇಖರ್ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕಳೆದ ರಾತ್ರಿ 189 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಹೊರಬಿದ್ದ ಕೂಡಲೇ ತಮ್ಮ ಹೆಸರು ಇಲ್ಲದಿರುವುದನ್ನು ಅರಿತ ಗೂಳಿಹಟ್ಟಿ ಶೇಖರ್ ಬೆಂಗಳೂರಿನಲ್ಲಿರುವ ಜನಾರ್ದನ ರೆಡ್ಡಿ ಮನೆಗೆ ತೆರಳಿ ಕೆಲ ಹೊತ್ತು ಅವರ ಜೊತೆ ಮಾತುಕತೆ ನಡೆಸಿದ್ದಾರೆ.

ಟಿಕೆಟ್‌ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತೇನೆ, ಇಲ್ಲದಿದ್ದರೆ ಸ್ವತಂತ್ರವಾಗಿ ನಿಲ್ಲುತ್ತೇನೆ, ಮುಂದೆ ಬರುವ ಲೋಕಸಭೆ ಚುನಾವಣೆಗೂ ನಿಂತುಕೊಳ್ಳುತ್ತೇನೆ ಎಂದು ನಾಲ್ಕೈದು ತಿಂಗಳಿನಿಂದ ಗೂಳಿಹಟ್ಟಿ ಶೇಖರ್ ಹೇಳುತ್ತಲೇ ಬಂದಿದ್ದರು.

ಹೊಸದುರ್ಗ ವಿಧಾನಸಭೆ ಕ್ಷೇತ್ರ ಸಾಮಾನ್ಯವಾಗಿದ್ದರೂ ಪರಿಶಿಷ್ಟ ಜಾತಿಗೆ ಸೇರಿರುವ ಗೂಳಿಹಟ್ಟಿ ಶೇಖರ್‌ ಎರಡು ಬಾರಿ ಗೆದ್ದಿದ್ದರು. 2018ರಲ್ಲಿ ಗೆಲುವು ಸಾಧಿಸಿದ್ದ ಗೂಳಿಹಟ್ಟಿ ಶೇಖರ್‌ ಸಹಜವಾಗಿ ಬಿಜೆಪಿಯಿಂದ ಮರು ಸ್ಪರ್ಧೆ ಬಯಸಿದ್ದರು. ಕಳೆದ ನಾಲ್ಕು ವರ್ಷಗಳಲ್ಲಿ ತಾಲೂಕು ಬಿಜೆಪಿಯಲ್ಲಿ ಅನೇಕ ರಾಜಕೀಯ ಬದಲಾವಣೆಗಳಾಗಿದ್ದವು. ಇತ್ತೀಚೆಗೆ ಪಕ್ಷದೊಳಗಿನ ಮುಸುಕಿನ ಗುದ್ದಾಟ ಆಕಾಂಕ್ಷಿಗಳ ಹೆಚ್ಚಳಕ್ಕೆ ಕಾರಣವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com