ಬಿಜೆಪಿಯಲ್ಲಿ 'ಬಂಡಾಯ'ದ ಬಿರುಗಾಳಿ: ಶೀಘ್ರವೇ ಭಿನ್ನಮತ ಶಮನ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಅತೃಪ್ತರಾಗಿರುವ ನಾಯಕರನ್ನು ಮನವೊಲಿಸುವ ಪ್ರಯತ್ನದಲ್ಲಿ ಬಿಜೆಪಿಯ ಹಿರಿಯ ನಾಯಕರು ತೊಡಗಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಶಮನಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಗುರುವಾಗ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಅತೃಪ್ತರಾಗಿರುವ ನಾಯಕರನ್ನು ಮನವೊಲಿಸುವ ಪ್ರಯತ್ನದಲ್ಲಿ ಬಿಜೆಪಿಯ ಹಿರಿಯ ನಾಯಕರು ತೊಡಗಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಶಮನಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಗುರುವಾಗ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬದಲಾವಣೆ ಸಹಜ, ಕೆಲವೊಮ್ಮೆ ಹೀಗಾಗುತ್ತೆ. ಅಸಮಾಧಾನ ಇರುವವರ ಮನವೊಲಿಸುತ್ತೇವೆ. ಪಕ್ಷದಲ್ಲಿನ ಅಸಮಾಧಾನ ಸರಿಪಡಿಸಲಾಗುತ್ತಿದೆ. ಕಾರ್ಯಕರ್ತರು ಬಲಿಷ್ಠರಾಗಿದ್ದು, ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಬಹುತೇಕ ಕಡೆ ಪಕ್ಷದ ಭಿನ್ನಾಭಿಪ್ರಾಯ ಶಮನವಾಗಲಿದೆ ಎಂದು ಬೊಮ್ಮಾಯಿ ಹೇಳಿದರು. 

ಹೈಕಮಾಂಡ್ ಅತೃಪ್ತರ ಜೊತೆ ಮಾತನಾಡುತ್ತಿದೆ. ಎಲ್ಲ ನಾಯಕರ ಜತೆ ಮಾತನಾಡಿದ್ದೇನೆ. ಶೀಘ್ರದಲ್ಲಿಯೇ ವ್ಯತ್ಯಾಸ ಬಗೆಹರಿಯುವ ವಿಶ್ವಾಸವಿದೆ. ಸವದಿ ಹಿರಿಯರಾಗಿದ್ದು, ಸುದೀರ್ಘ ಕಾಲದಿಂದ ರಾಜಕೀಯದಲ್ಲಿದ್ದಾರೆ. ಆ ಕ್ಷೇತ್ರಕ್ಕಾಗಿ ಒತ್ತಡವೂ ಇದೆ, ಸರಿಹೋಗಲು ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ನಲ್ಲಿ 60 ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ, ಈಗ ಪಕ್ಷವು ಬೇರೆ ಪಕ್ಷಗಳಿಂದ ನಾಯಕರನ್ನು ಸೇರಿಸಿಕೊಳ್ಳುವ ಚಿಂತನೆ ನಡೆಸುತ್ತಿದೆ. ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿ ಇಲ್ಲ, ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಆರೋಪಿಸಿದರು.

ಇದಕ್ಕೂ ಮುನ್ನ, ಮೇ 10 ರಂದು ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರಿಂದ ಹಾಲಿ ಸಚಿವ ಮತ್ತು ಆರು ಬಾರಿ ಬಿಜೆಪಿ ಶಾಸಕರಾಗಿರುವ ಅಂಗಾರ ಎಸ್ ಅವರು, ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ ಮತ್ತು ರಾಜಕೀಯ ಚಟುವಟಿಕೆಯಿಂದ ನಿರ್ಗಮಿಸುವುದಾಗಿ ಘೋಷಿಸಿದರು.

ಬಿಜೆಪಿ ಏಪ್ರಿಲ್ 11 ರಂದು ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರನ್ನು ಮತ್ತು ಏಪ್ರಿಲ್ 12 ರಂದು ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳ ಹೆಸರನ್ನು ಘೋಷಿಸಿತು. ಎರಡೂ ಪಟ್ಟಿಗಳಲ್ಲಿ ಅಂಗಾರ ಅವರ ಹೆಸರು ನಾಪತ್ತೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com