ಇ-ಮೇಲ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸೊಗಡು ಶಿವಣ್ಣ ರಾಜೀನಾಮೆ

ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಗುರುವಾರ ಇ-ಮೇಲ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಸೊಗಡು ಶಿವಣ್ಣ
ಸೊಗಡು ಶಿವಣ್ಣ

ತುಮಕೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಗುರುವಾರ ಇ-ಮೇಲ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸೊಗಡು ಶಿವಣ್ಣ ಅವರು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಇ-ಮೇಲ್ ಮೂಲಕ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ತುಮಕೂರು ನಗರ ಕ್ಷೇತ್ರದಿಂದ ನಾನು ಚುನಾವಣೆಗೆ ಸ್ಪರ್ಧಿಸುವುದು ಖಚಿತ‌. ನಮ್ಮ ಕಾರ್ಯಕರ್ತರ ಜೊತೆ ಸಭೆ ನಡೆಸಿ ತೀರ್ಮಾನ ಮಾಡುತ್ತೇನೆ. ಪಕ್ಷೇತರ ಅಥವಾ ಬೇರೆ ಪಕ್ಷದಿಂದ ಸ್ಪರ್ಧಿಸಬೇಕಾ ಎಂಬ ಬಗ್ಗೆ ಚರ್ಚೆ ಮಾಡುತ್ತೇನೆ. ನಾನು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

74 ವರ್ಷ ವಯಸ್ಸಿನ ಆರ್‌ಎಸ್‌ಎಸ್ ನಾಯಕ ತುಮಕೂರಿನಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಸಂಸದ  ಜಿ ಎಸ್ ಬಸವರಾಜು ಅವರ ಪುತ್ರ ಹಾಲಿ ಶಾಸಕ ಜಿ ಬಿ ಜ್ಯೋತಿಗಣೇಶ್ ಅವರಿಗಾಗಿ ಟಿಕೆಟ್ ತ್ಯಾಗ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com