ಬಿಜೆಪಿ ಸಂಧಾನ ಯಶಸ್ವಿ: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಅಂಗಾರ

ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧ ಮುನಿಸಿಕೊಂಡು ರಾಜಕೀಯ ನಿವೃತ್ತಿ ಘೋಷಿಸಿದ್ದ ಸುಳ್ಯ ಬಿಜೆಪಿ ಶಾಸಕ ಎಸ್ ಅಂಗಾರ ಯೂಟರ್ನ್ ಹೊಡೆದಿದ್ದಾರೆ.
ಸಚಿವ ಎನ್.ಅಂಗಾರ
ಸಚಿವ ಎನ್.ಅಂಗಾರ

ಮಂಗಳೂರು: ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧ ಮುನಿಸಿಕೊಂಡು ರಾಜಕೀಯ ನಿವೃತ್ತಿ ಘೋಷಿಸಿದ್ದ ಸುಳ್ಯ ಬಿಜೆಪಿ ಶಾಸಕ ಎಸ್ ಅಂಗಾರ ಯೂಟರ್ನ್ ಹೊಡೆದಿದ್ದಾರೆ.

ರಾಜಕೀಯ ನಿವೃತ್ತಿ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದ ಹಿನ್ನಲೆಯಲ್ಲಿ ರಾಜಕೀಯ ನಿವೃತ್ತಿ ಹೇಳಿಕೆಯನ್ನು ಅಂಗಾರ ಹಿಂಪಡೆದಿದ್ದಾರೆ. 

ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲೇ ಬಿಜೆಪಿ ವಿರುದ್ಧ ಗುಡುಗಿದ್ದ ಎಸ್.ಅಂಗಾರ, ಪ್ರಾಮಾಣಿಕತೆಗೆ ಬೆಲೆ ಇಲ್ಲವೆಂದು ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅಷ್ಟೇ ಅಲ್ಲದೇ ಬಿಜೆಪಿ ಅಭ್ಯರ್ಥಿ ಭಾಗೀರಥಿ ಪರ ಪ್ರಚಾರ ನಡೆಸಲ್ಲ ಎಂದು ಹೇಳಿದ್ದರು. 

ಬಿಜೆಪಿ ಸಂಧಾನ
ಇದೀಗ ಹಿರಿಯ ನಾಯಕರ ಮಾತುಕತೆ ಬಳಿಕ ಅಂಗಾರ ತಮ್ಮ ನಿವೃತ್ತಿ ನಿರ್ಧಾರವನ್ನು ಬದಲಾಯಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅಂಗಾರ ಅವರು, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆಯನ್ನು ನೋವಿನಿಂದ ಹೇಳಿದ್ದೆ. ಆದರೆ ಈಗ ನಾನು ಮೊದಲಿನಂತೆ ಸಕ್ರಿಯವಾಗಿದ್ದು, ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆಯಾಗಿದೆ. ವೈಯಕ್ತಿಕವಾಗಿ ನೀಡಿದ ಆ ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ ಎಂದರು.

ಭಾಗರಥಿ ವಿರುದ್ಧ ಅಸಮಾಧಾನವಿಲ್ಲ
ಇನ್ನು ಪಕ್ಷ ಆಯ್ಕೆ ಮಾಡಿದ ಅಭ್ಯರ್ಥಿ ಬಗ್ಗೆ ಬೇಸರ ಇಲ್ಲ, ಅವರ ಪರ ಕೆಲಸ ಮಾಡೋದು ನನ್ನ ಹೊಣೆಗಾರಿಕೆಯಾಗಿದೆ. ನನ್ನ ಕಾರ್ಯಕರ್ತರು ಜೊತೆ ನಿಂತಿದ್ದಕ್ಕೆ ಧನ್ಯವಾದಗಳು. ನನಗೆ ಯಾವುದೇ ಅಸಮಾಧಾನ ಮತ್ತು ಭಿನ್ನಾಭಿಪ್ರಾಯ ಇಲ್ಲ. ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ನಾನು ಬೇಸರದಲ್ಲಿ, ಉದ್ವೇಗದಲ್ಲಿ ಹೇಳಿದ ಮಾತನ್ನು ವಾಪಸ್ಸು ಪಡೆಯುತ್ತೇನೆ. ಮುಂದೆ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಗೆಲ್ಲಿಸುವುದು ನನ್ನ ಗುರಿಯಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com