ಕಾಂಗ್ರೆಸ್ ಸೇರಲು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನಿರ್ಧಾರ! ಮಧ್ಯಾಹ್ನ ಪರಿಷತ್ ಸ್ಥಾನಕ್ಕೆ ರಾಜೀನಾಮೆ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ವಂಚಿತರಾದ ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರಲು ಶುಕ್ರವಾರ ನಿರ್ಧರಿಸಿದ್ದಾರೆ.
ಲಕ್ಷ್ಮಣ್ ಸವದಿ ಅವರೊಂದಿಗೆ ಸಿದ್ದರಾಮಯ್ಯ, ಡಿಕೆಶಿವಕುಮಾರ್ ಮಾತುಕತೆಯ ಚಿತ್ರ
ಲಕ್ಷ್ಮಣ್ ಸವದಿ ಅವರೊಂದಿಗೆ ಸಿದ್ದರಾಮಯ್ಯ, ಡಿಕೆಶಿವಕುಮಾರ್ ಮಾತುಕತೆಯ ಚಿತ್ರ

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ವಂಚಿತರಾದ ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರಲು ಶುಕ್ರವಾರ ನಿರ್ಧರಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದ ಬಳಿಕ ಅವರ ಈ ನಿರ್ಧಾರ ಕೈಗೊಂಡಿದ್ದಾರೆ. 

ಲಕ್ಷ್ಮಣ್ ಸವದಿ ತಮ್ಮ ಸ್ವ ಇಚ್ಚೆಯ ಮೇರೆಗೆ ಕಾಂಗ್ರೆಸ್ ಕುಟುಂಬದ ಸದಸ್ಯರಾಗಲು ಒಪ್ಪಿಕೊಂಡಿದ್ದಾರೆ. ಇಂದು ಮಧ್ಯಾಹ್ನ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಔಪಚಾರಿಕವಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು. 

ಸವದಿ ಅವರ ಮನವಿಯನ್ನು ನಿರ್ಲಕ್ಷಿಸಿದ ಬಿಜೆಪಿ,  ಹಾಲಿ ಶಾಸಕ ಮಹೇಶ್ ಕುಮಠಳ್ಳಿ ಅವರಿಗೆ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ಸವದಿ ಅಥಣಿಯಿಂದ ಮೂರು ಬಾರಿ ಶಾಸಕರಾಗಿದ್ದರು ಆದರೆ 2018 ರ ಚುನಾವಣೆಯಲ್ಲಿ ಕುಮಠಳ್ಳಿ (ಆಗ ಕಾಂಗ್ರೆಸ್‌ನಲ್ಲಿದ್ದ) ಎದುರು ಸೋತಿದ್ದರು.

2019 ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಿ, ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚಿಸಲು ಸಹಾಯ ಮಾಡಿದ ಪಕ್ಷಾಂತರಿಗಳ ಗುಂಪಿನಲ್ಲಿ ಕುಮಠಳ್ಳಿ ಸೇರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com