ಲಕ್ಷ್ಮಣ್ ಸವದಿ ಅವರೊಂದಿಗೆ ಸಿದ್ದರಾಮಯ್ಯ, ಡಿಕೆಶಿವಕುಮಾರ್ ಮಾತುಕತೆಯ ಚಿತ್ರ
ಲಕ್ಷ್ಮಣ್ ಸವದಿ ಅವರೊಂದಿಗೆ ಸಿದ್ದರಾಮಯ್ಯ, ಡಿಕೆಶಿವಕುಮಾರ್ ಮಾತುಕತೆಯ ಚಿತ್ರ

ಲಕ್ಷ್ಮಣ ಸವದಿ ದೊಡ್ಡ ತಪ್ಪು‌ ಮಾಡುತ್ತಿದ್ದಾರೆ, ಕಾಂಗ್ರೆಸ್ ಗೆ ಹೋದ ಮೇಲೆ ಪಶ್ಚಾತ್ತಾಪ ಪಡುತ್ತಾರೆ: ಅರುಣ್ ಸಿಂಗ್

ಲಕ್ಷ್ಮಣ ಸವದಿ ಅವರು ಬಹಳ ದೊಡ್ಡ ತಪ್ಪು ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಗೆ ಹೋದ ಮೇಲೆ ಪಶ್ಚಾತ್ತಾಪ ಪಡುತ್ತಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 

ಬೆಂಗಳೂರು: ಲಕ್ಷ್ಮಣ ಸವದಿ ಅವರು ಬಹಳ ದೊಡ್ಡ ತಪ್ಪು ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಗೆ ಹೋದ ಮೇಲೆ ಪಶ್ಚಾತ್ತಾಪ ಪಡುತ್ತಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 

ಇಂದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್,  ‘ಈಗ ಅವರು ಜಗಳಗಂಟ ಪಕ್ಷಕ್ಕೆ ಹೋಗಿದ್ದಾರೆ. ಕಾಂಗ್ರೆಸ್ ನಲ್ಲಿ ಅವರಿಗೆ ಭವಿಷ್ಯ ಇಲ್ಲ. ಇಷ್ಟು ವರ್ಷ ಅವರು ಬಿಜೆಪಿಯಲ್ಲಿ ಇದ್ದವರು. ಕಾಂಗ್ರೆಸ್ ಗೆ ಸೇರುವ ನಿರ್ಧಾರ ಮಾಡಬಾರದಿತ್ತು ಎಂದಿದ್ದಾರೆ.

ಲಕ್ಷ್ಮಣ ಸವದಿ ಬಹಳ ದೊಡ್ಡ ತಪ್ಪು‌ ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಗೆ ಹೋದ ಮೇಲೆ ಪಶ್ಚಾತ್ತಾಪ ಪಡುತ್ತಾರೆ. ಸವದಿ ಅವರು ಚುನಾವಣೆಯಲ್ಲಿ ಸೋತ ನಂತರ ಕೂಡ ಅವರನ್ನು ಎಂಎಲ್‌ಸಿ, ಡಿಸಿಎಂ ಮಾಡಲಾಯಿತು. ಆದರೆ ಸವದಿ ಕಾಂಗ್ರೆಸ್​ಗೆ ಹೋಗಿರುವುದು ನಮ್ಮ ಕಾರ್ಯಕರ್ತರಿಗೆ ನೋವಾಗಿದೆ ಎಂದರು.

ಆದರೆ ಯಾರೋ ನಾಲ್ಕು ಜನ ಪಕ್ಷ ಬಿಟ್ಟು ಹೋದರೆ ಏನೂ ನಷ್ಟ ಆಗಲ್ಲ. ಹೋಗುವವರು ದುಡುಕಿನ ನಿರ್ಧಾರ ತಗೊಂಡು ಹೋಗಿದ್ದಾರೆ. ಅಂಥವರಿಗೆ ನಮ್ಮ ಪಕ್ಷದ ಬಾಗಿಲು ಶಾಶ್ವತವಾಗಿ ಬಂದ್ ಆಗಲಿದೆ. ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳಲು 20 ವರ್ಷವಾಗಬಹುದು. 10 ವರ್ಷವಾದ್ರೂ ರಾಹುಲ್ ಮುಖ ನೋಡುತ್ತಾರೋ ಇಲ್ಲವೋ ಗೊತ್ತಿಲ್ಲ ಎನ್ನುವ ಮೂಲಕ ಲಕ್ಷ್ಮಣ ಸವದಿಗೆ ಟಾಂಗ್​ ನೀಡಿದ್ದಾರೆ.

Advertisement

X
Kannada Prabha
www.kannadaprabha.com