ನಾಯಕರು ಪಕ್ಷ ಬಿಟ್ಟು ಹೋಗುತ್ತಾರೆ, ಆದರೆ ಕಾರ್ಯಕರ್ತರು ನಿಷ್ಠಾವಂತರು: ಸಿಎಂ ಬೊಮ್ಮಾಯಿ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ಒಟ್ಟು 212 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ ನಂತರ ಟಿಕೆಟ್ ವಂಚಿತ ಹಲವು ಬಿಜೆಪಿ ಶಾಸಕರು ಬಂಡಾಯ ಸಾರಿದ್ದು, ಪಕ್ಷ ತೊರೆಯುತ್ತಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Updated on: 

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ಒಟ್ಟು 212 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ ನಂತರ ಟಿಕೆಟ್ ವಂಚಿತ ಹಲವು ಬಿಜೆಪಿ ಶಾಸಕರು ಬಂಡಾಯ ಸಾರಿದ್ದು, ಪಕ್ಷ ತೊರೆಯುತ್ತಿದ್ದಾರೆ.

ಟಿಕೆಟ್ ವಂಚಿತ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶಾಸಕರಾಗುವ ಮಹತ್ವಾಕಾಂಕ್ಷೆಯಿಂದ ಕೆಲವು ನಾಯಕರು ಪಕ್ಷ ತೊರೆಯುತ್ತಿದ್ದಾರೆ. ಆದರೆ ಕಾರ್ಯಕರ್ತರು ನಿಷ್ಠಾವಂತರಾಗಿದ್ದು, ಪಕ್ಷಕ್ಕೆ ಬದ್ಧರಾಗಿದ್ದಾರೆ ಎಂದರು.

ಟಿಕೆಟ್ ಸಿಗದಿರುವ ಬಗ್ಗೆ ಅಸಮಾಧಾನಗೊಂಡಿರುವ ಕೆಲವು ಅತೃಪ್ತ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಗೆ ಸೇರ್ಪಡೆಯಾಗುವುದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.

ಹಲವು ಬಂಡಾಯ ಬಿಜೆಪಿ ನಾಯಕರೊಂದಿಗೆ ಕಾಂಗ್ರೆಸ್ ಸಂಪರ್ಕದಲ್ಲಿದೆ ಎಂಬ ವರದಿಗಳ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ದೇಶದ ಅತ್ಯಂತ ಹಳೆಯ ಪಕ್ಷಕ್ಕೆ ಸುಮಾರು 60 ವಿಧಾನಸಭಾ ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳ ಕೊರತೆಯಿದೆ ಎಂದು ತಿರುಗೇಟು ನೀಡಿದರು.

ಬಿಜೆಪಿಯೊಳಗಿನ ಭಿನ್ನಾಭಿಪ್ರಾಯದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ''ಆಡಳಿತ ಪಕ್ಷದಲ್ಲಿ ಸಹಜವಾಗಿಯೇ ಟಿಕೆಟ್‌ಗೆ ಹೆಚ್ಚಿನ ಬೇಡಿಕೆ ಇರುತ್ತದೆ. "ನಾವು ನಮ್ಮ ಕಾರ್ಯಕರ್ತರೊಂದಿಗೆ ಮಾತನಾಡಿದ್ದೇವೆ, ಕೆಲವು ನಾಯಕರು ಶಾಸಕರಾಗುವ ಮಹತ್ವಾಕಾಂಕ್ಷೆಯೊಂದಿಗೆ(ಪಕ್ಷದಿಂದ) ಹೊರಗೆ ಹೋಗಲು ಪ್ರಯತ್ನಿಸುತ್ತಿದ್ದಾರೆ. ಆದರೆ ಕಾರ್ಯಕರ್ತರು ಹೋಗುವುದಿಲ್ಲ.... ಕಾರ್ಯಕರ್ತರು ಪಕ್ಷಕ್ಕೆ ನಿಷ್ಠರಾಗಿದ್ದಾರೆ" ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com