ಬಿಜೆಪಿ ಪಕ್ಷದಲ್ಲಿ ನನ್ನನ್ನು ಹುಚ್ಚು ನಾಯಿ ಓಡಿಸಿದ ರೀತಿ ಪಕ್ಷದಿಂದ ಓಡಿಸಿದ್ದಾರೆ: ಎಂ.ಪಿ.ಕುಮಾರಸ್ವಾಮಿ

ಬಿಜೆಪಿ ಪಕ್ಷದಲ್ಲಿ ನನ್ನನ್ನು ಹುಚ್ಚು ನಾಯಿ ಓಡಿಸಿದ ರೀತಿ ಪಕ್ಷದಿಂದ ಓಡಿಸಿದ್ದಾರೆ. ಇದಕ್ಕೆಲ್ಲಾ ಸಿಟಿ ರವಿ ಹಾಗೂ ಪ್ರಾಣೇಶ್ ಕಾರಣ. ಪಕ್ಷದಲ್ಲಿ ನನ್ನನ್ನು ಹೀನಾಯವಾಗಿ ನಡೆಸಿಕೊಂಡಿದ್ದಾರೆಂದು ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಎಂ.ಪಿ.ಕುಮಾರಸ್ವಾಮಿ
ಎಂ.ಪಿ.ಕುಮಾರಸ್ವಾಮಿ

ಶಿರಸಿ: ಬಿಜೆಪಿ ಪಕ್ಷದಲ್ಲಿ ನನ್ನನ್ನು ಹುಚ್ಚು ನಾಯಿ ಓಡಿಸಿದ ರೀತಿ ಪಕ್ಷದಿಂದ ಓಡಿಸಿದ್ದಾರೆ. ಇದಕ್ಕೆಲ್ಲಾ ಸಿಟಿ ರವಿ ಹಾಗೂ ಪ್ರಾಣೇಶ್ ಕಾರಣ. ಪಕ್ಷದಲ್ಲಿ ನನ್ನನ್ನು ಹೀನಾಯವಾಗಿ ನಡೆಸಿಕೊಂಡಿದ್ದಾರೆಂದು ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಎಂಪಿ ಕುಮಾರಸ್ವಾಮಿ ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿಗ ಎಂಪಿ.ಕುಮಾರಸ್ವಾಮಿಯವರು, ಬಿಜೆಪಿ ನಾಯಕರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ನಾಯಕರೇ ಇಲ್ಲ. ಪ್ರಧಾನಿ ಮೋದಿ, ಅಮಿತ್ ಶಾ ಅವರೇ ಬಂದು ಗೊಂದಲ ಬಗೆ ಹರಿಸುವ ಸ್ಥಿತಿ ಬಂದಿದೆ ಎಂದು ಕಿಡಿಕಾರಿದರು.

ಒಳ್ಳೆತನಕ್ಕೆ ಜಯ ಸಿಗುತ್ತದೆ. ಬಿಜೆಪಿಯಲ್ಲಿ ನನಗಿಷ್ಟು ಹಂಚಿಕೊಂಡಾಗ ಮಾನದಂಡ ಎಲ್ಲಿ ಬರುತ್ತದೆ. ಯಡಿಯೂರಪ್ಪ ಅವರು ಮೊಬೈಲ್​ ಸ್ವಿಚ್​ ಆಫ್ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ 50-70 ಸ್ಥಾನ ಬಿಜೆಪಿದು ದಾಟಲ್ಲ. ನನಗೆ ಟಿಕೆಟ್ ತಪ್ಪಲು ಸಿ.ಟಿ.ರವಿ ಅವರು ಕಾರಣ. ಹುಚ್ಚನಾಯಿ ತರ ಸೀಟಿ ಹೊಡೆಸಿ ಓಡಿಸಿದಂತೆ ಅಟ್ಟಿಸಿಕೊಂಡು ಪಕ್ಷದಿಂದ ಓಡಿಸಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುವುದಿಲ್ಲ. ಮೂಡಿಗೆರೆಯಲ್ಲಿ ನನ್ನ ಗೆಲುವು ಖಚಿತ. ಈ ಕ್ಷೇತ್ರದ ಮುಂದಿನ ಶಾಸಕ ನಾನೇ ಎಂದು ವಿಶ್ವಾದ ವ್ಯಕ್ತಪಡಿಸಿದ ಅವರು, ನಾನಿಲ್ಲದೇ ಇದ್ದರೆ ಜೆಡಿಎಸ್, ಕಾಂಗ್ರೆಸ್ ಗೆಲ್ಲಬೇಕಿತ್ತು. ಸಚಿವರಿಗಿಂತ ಹೆಚ್ಚು ಕೆಲಸ ಮಾಡಿದ ತೃಪ್ತಿ ನನಗಿದೆ ಎಂದು ಹೇಳಿದರು.

ಸಿಟಿ ರವಿ ಪಕ್ಷ ಉಳಿಸಲ್ಲ. ಅವರು ಬಿಜೆಪಿಗೆ ಮಾರಕ. ಮುಂದಿನ ಬಾರಿ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ನನಗೆ ಇನ್ನೂ ವಯಸ್ಸಾಗಿಲ್ಲ, ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ. ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ. ಶನಿವಾರ ಸಂಜೆ ವೇಳೆಗೆ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com