ಆನಂದ್ ಸಿಂಗ್ ಪುತ್ರನಿಗೆ ಬಿಜೆಪಿ ಮಣೆ; ಟಿಕೆಟ್ ಆಕಾಂಕ್ಷಿಗಳಿಗೆ ಅಸಮಾಧಾನ, ತೀವ್ರ ಕುತೂಹಲ ಕೆರಳಿಸಿದ ವಿಧಾನಸಭಾ ಚುನಾವಣೆ

ಸಚಿವ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ್ ಸಿಂಗ್ ಅವರಿಗೆ ವಿಜಯನಗರ ಕ್ಷೇತ್ರದ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದ್ದು, ನೂತನ ಜಿಲ್ಲೆ ರಚನೆಯಾದ ಮೇಲೆ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಟಿಕೆಟ್ ಎದುರುನೋಡುತ್ತಿದ್ದ ಹಲವು ಆಕಾಂಕ್ಷಿಗಳಲ್ಲಿ ಈ ನಡೆ ಅಸಮಾಧಾನಕ್ಕೆ ಕಾರಣವಾಗಿದೆ. 
ಆನಂದ್ ಸಿಂಗ್
ಆನಂದ್ ಸಿಂಗ್

ಹೊಸಪೇಟೆ: ಸಚಿವ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ್ ಸಿಂಗ್ ಅವರಿಗೆ ವಿಜಯನಗರ ಕ್ಷೇತ್ರದ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದ್ದು, ನೂತನ ಜಿಲ್ಲೆ ರಚನೆಯಾದ ಮೇಲೆ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಟಿಕೆಟ್ ಎದುರುನೋಡುತ್ತಿದ್ದ ಹಲವು ಆಕಾಂಕ್ಷಿಗಳಲ್ಲಿ ಈ ನಡೆ ಅಸಮಾಧಾನಕ್ಕೆ ಕಾರಣವಾಗಿದೆ. 
ಹಾಲಿ ಶಾಸಕ ಆನಂದ್ ಸಿಂಗ್ ತಮ್ಮ ಪುತ್ರ ಸಿದ್ಧಾರ್ಥ್‌ಗಾಗಿ ತಮ್ಮ ಸ್ಥಾನವನ್ನು ತ್ಯಾಗ ಮಾಡಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. 

ಆನಂದ್ ಸಿಂಗ್ ಅವರ ಸಂಬಂಧಿಯೂ ಆಗಿರುವ ಸ್ಥಳೀಯ ಬಿಜೆಪಿ ನಾಯಕಿ ಹಾಗೂ ಟಿಕೆಟ್ ಆಕಾಂಕ್ಷಿ ರಾಣಿ ಸಂಯುಕ್ತಾ ಅವರು ಪಕ್ಷವು ಟಿಕೆಟ್ ನಿರಾಕರಿಸಿದ್ದಕ್ಕೆ ಮಾಧ್ಯಮಗಳ ಮುಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ವಿಜಯನಗರದಲ್ಲಿ ಕಳೆದ 30 ವರ್ಷಗಳಿಂದ ಪಕ್ಷ ಕಟ್ಟಿದ್ದೇವೆ. ಆದರೆ, ಪಕ್ಷದ ಹೈಕಮಾಂಡ್ ಅನಿರೀಕ್ಷಿತ ಅಭ್ಯರ್ಥಿಗೆ ಟಿಕೆಟ್ ಘೋಷಣೆ ಮಾಡಿದ್ದು, ಕಳೆದ ಕೆಲವು ವರ್ಷಗಳಿಂದ ಆಕಾಂಕ್ಷಿಯಾಗಿದ್ದ ನನಗೆ ನೋವಾಗಿದೆ' ಎಂದು ಅವರು ಹೇಳಿದರು.

'ನನ್ನ ಮುಂದಿನ ನಡೆ ಬಗ್ಗೆ ನನ್ನ ಬೆಂಬಲಿಗರೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ. ನಾನು ಯಾವ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ ಎಂಬುದು ಇನ್ನೂ ನಿರ್ಧರಿಸಿಲ್ಲ. ಕಾರ್ಯಕರ್ತರ ಭಾವನೆಗಳನ್ನು ಪಕ್ಷ ಗೌರವಿಸಬೇಕು. ಹಠಾತ್ ಟಿಕೆಟ್ ಘೋಷಣೆಯು ಪಕ್ಷದ ತಳಮಟ್ಟದ ಕಾರ್ಯಕರ್ತರಲ್ಲಿ ಯಾವಾಗಲೂ ಗೊಂದಲವನ್ನು ಉಂಟುಮಾಡುತ್ತದೆ' ಎಂದು ಅವರು ಹೇಳಿದರು.

ಸಿದ್ಧಾರ್ಥ್ ಅವರಿಗೆ ಟಿಕೆಟ್ ನೀಡಿರುವುದನ್ನು ವಿರೋಧಿಸುತ್ತಿರುವವರ ಪ್ರಕಾರ, ವಿಜಯನಗರದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ಶ್ರಮಿಸುತ್ತಿರುವ ಅನೇಕ ಪಕ್ಷದ ಕಾರ್ಯಕರ್ತರು ಮತ್ತು ಯುವ ಮುಖಂಡರು ಇದ್ದಾರೆ. ಈಗ ಅವರನ್ನೆಲ್ಲಾ ನಿರ್ಲಕ್ಷಿಸಲಾಗಿದೆ ಎಂಬ ಭಾವನೆ ಇದೆ ಎನ್ನುತ್ತಾರೆ.

ವಿಜಯನಗರ ಜಿಲ್ಲೆ ರಚನೆ ಆನಂದ್ ಸಿಂಗ್ ಅವರಿಗೆ ಬಹುದೊಡ್ಡ ಪ್ಲಸ್ ಪಾಯಿಂಟ್ ಎಂಬುದು ಸ್ಪಷ್ಟವಾಗಿದೆ ಎಂದು ಹೇಳುವ ರಾಜಕೀಯ ವಿಶ್ಲೇಷಕ ಪ್ರಕಾಶ್ ಎನ್, ಕಾಂಗ್ರೆಸ್ ಕೂಡ ಲಿಂಗಾಯತ ಸಮುದಾಯದ ಪ್ರಬಲ ಅಭ್ಯರ್ಥಿ ಎಚ್‌ಆರ್ ಗವಿಯಪ್ಪ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿಯ ನಿರ್ಧಾರದಿಂದ ಉಂಟಾಗಿರುವ ಸದ್ಯದ ಭಿನ್ನಮತ ಚುನಾವಣೆಯಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷದ ಕಾರ್ಯಕರ್ತರ ಬಂಡಾಯವು ಚುನಾವಣೆಯಲ್ಲಿ ಸಿಂಗ್ ಅವರು ಮತಗಳನ್ನು ಕಳೆದುಕೊಳ್ಳಬಹುದು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com