ಜಗದೀಶ್ ಶೆಟ್ಟರ್ ಮತ್ತು ಸಿದ್ದರಾಮಯ್ಯ
ಜಗದೀಶ್ ಶೆಟ್ಟರ್ ಮತ್ತು ಸಿದ್ದರಾಮಯ್ಯ

ಕಾಂಗ್ರೆಸ್ ಸೇರುವಂತೆ ಜಗದೀಶ್ ಶೆಟ್ಟರ್ ಗೆ ಸಿದ್ದರಾಮಯ್ಯ, ಖಂಡ್ರೆ ಆಹ್ವಾನ

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್ ವಿಚಾರವಾಗಿ ಬಿಜೆಪಿ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನಿಸಲಾಗಿದೆ.

ಬೆಂಗಳೂರು: ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್ ವಿಚಾರವಾಗಿ ಬಿಜೆಪಿ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನಿಸಲಾಗಿದೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಟಿಕೆಟ್ ನಿರಾಕರಣೆಗೆ ಮುನಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ. ಬಿಜೆಪಿ ಪಕ್ಷ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಸದಾ ಪಕ್ಷದ ಸಿದ್ಧಾಂತ ಎನ್ನುತ್ತಿದ್ದ ಕೆ.ಎಸ್‌.ಈಶ್ವರಪ್ಪ, ಈಗ ಎಲ್ಲಿ ಹೋದರು ಎಂದು ಪ್ರಶ್ನಿಸಿದ್ದಾರೆ.

ಅಂತೆಯೇ ‘ಜಗದೀಶ ಶೆಟ್ಟರ್ ನನ್ನೊಂದಿಗೆ ಮಾತನಾಡಿಲ್ಲ. ನಮ್ಮ ಪಕ್ಷಕ್ಕೆ ಬರುವುದಾದರೆ ಅವರಿಗೆ ಸ್ವಾಗತಿಸುತ್ತೇನೆ. ಲಕ್ಷ್ಮಣ ಸವದಿ ಆಗಮನದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಸವದಿ ಅವರು ಕೇಳಿದ ಕಡೆ ಪ್ರಚಾರ ಮಾಡಲು ಜವಾಬ್ದಾರಿ ಕೊಡುತ್ತೇವೆ. ವರುಣಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಸ್ಪರ್ಧಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ವರುಣಾ ಕ್ಷೇತ್ರದಲ್ಲಿ ಅವನ ಪರವಾಗಿ ಒಂದು ಮತವೂ ಇಲ್ಲ. ಅವನು ಹೊರಗಿನವನು’ ಎಂದರು.

‘ಜಗದೀಶ ಶೆಟ್ಟರ್ ನನ್ನೊಂದಿಗೆ ಮಾತನಾಡಿಲ್ಲ. ನಮ್ಮ ಪಕ್ಷಕ್ಕೆ ಬರುವುದಾದರೆ ಅವರಿಗೆ ಸ್ವಾಗತಿಸುತ್ತೇನೆ. ಲಕ್ಷ್ಮಣ ಸವದಿ ಆಗಮನದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಸವದಿ ಅವರು ಕೇಳಿದ ಕಡೆ ಪ್ರಚಾರ ಮಾಡಲು ಜವಾಬ್ದಾರಿ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್‌ಗೆ ಬನ್ನಿ: ಖಂಡ್ರೆ ಆಹ್ವಾನ
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಕ್ಷ ಸೆರ್ಪಡೆಯಾಗಲಿ ಎನ್ನುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಭಾಲ್ಕಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಒಂದು ಟಿಕೆಟ್‌ಗಾಗಿ ಮನೆಯ ಬಾಗಿಲು ಬಾಗಿಲು ಓಡಾಡುತ್ತಿದ್ದಾರೆ. ಲಕ್ಷ್ಮಣ ಸವದಿ (Laxman Savadi) ಟಿಕೆಟ್ ಸಿಗದೇ ಕಣ್ಣೀರು ಹಾಕಿ ಕೊನೆಗೂ ಕಾಂಗ್ರೆಸ್ ಸೆರ್ಪೆಡೆಯಾಗಿದ್ದಾರೆ ಎಂದರು.

ಹಿರಿಯರನ್ನು ಬಿಜೆಪಿ (BJP) ಯಾವ ರೀತಿ ನೋಡಿಕೊಳ್ಳುತ್ತಿದೆ ಎಂದು ಜನ ಗಮನಿಸುತ್ತಿದ್ದು, ಲಕ್ಷ್ಮಣ ಸವದಿ ಕಾಂಗ್ರೆಸ್‌ಗೆ ಬಂದಿದ್ದಾರೆ. ಇದೇ ರೀತಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡಾ ಕಾಂಗ್ರೆಸ್ ಪಕ್ಷಕ್ಕೆ ಬರಲಿ. ಅವರ ಜೊತೆಗೆ ಇನ್ನೂ ಬಹಳಷ್ಟು ಜನರು ಕಾಂಗ್ರೆಸ್‌ಗೆ ಬರುತ್ತಾರೆ ಕಾದು ನೋಡಿ ಎಂದರು.
 

Related Stories

No stories found.

Advertisement

X
Kannada Prabha
www.kannadaprabha.com