ಆಹ್ವಾನ ನೀಡಿ ಶೆಟ್ಟರ್‌ಗೆ ಗಾಳ ಹಾಕಿದ ಕಾಂಗ್ರೆಸ್: ರಾಹುಲ್​ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರುತ್ತಾರಾ ಮಾಜಿ ಸಿಎಂ?

ಬಿಜೆಪಿಗೆ ಈಗಾಗಲೇ ಗುಡ್ಬೈ ಹೇಳಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರಾ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಸ್ಪರ್ಧೆಗಿಳಿಯುತ್ತಾರಾ ಎಂಬುದರ ಕುರಿತು ಕುತೂಹಲಗಳು ಮೂಡತೊಡಗಿವೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ಬಿಜೆಪಿಗೆ ಈಗಾಗಲೇ ಗುಡ್ಬೈ ಹೇಳಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರಾ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಸ್ಪರ್ಧೆಗಿಳಿಯುತ್ತಾರಾ ಎಂಬುದರ ಕುರಿತು ಕುತೂಹಲಗಳು ಮೂಡತೊಡಗಿವೆ.

ಈ ನುವೆ ಬಿಜೆಪಿಯಲ್ಲಿ ಎದ್ದಿರುವ ಅತೃಪ್ತಿ ಸ್ಫೋಟವನ್ನು ತಮ್ಮ ಲಾಭವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದ್ದು,  ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಶೆಟ್ಟರ್ ಅವರಿಗೆ ಗಾಳ ಹಾಕಿದೆ.

ಸಂಬಂಧದಲ್ಲಿ ಬೀಗರಾಗಬೇಕಾದ ಶಾಮನೂರು ಶಿವಶಂಕರಪ್ಪ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಲು ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಈಗಾಗಲೇ ಶೆಟ್ಟರ್ ಜೊತೆಗೆ ಕಾಂಗ್ರೆಸ್ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಪಕ್ಷ ಸೇರಲು ಶೆಟ್ಟರ್ ಮುಂದಾಗಿದ್ದಾರೆಂದು ಹೇಳಲಾಗುತ್ತಿದೆ.

ಚುನಾವಣೆಗೆ ಕಾಂಗ್ರೆಸ್ ಮೂರು ಪಟ್ಟಿಯನ್ನು ಬಿಡುಗಡೆ ಮಾಡಿದ್ದರೂ, ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರಕ್ಕೆ ಮಾಚ್ಕ ಇಲ್ಲಿಯವರೆಗೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಆಫರ್ ನೀಡುತ್ತಿದೆ ಎಂದು ತಿಳಿದುಬಂದಿದೆ. ಇದರ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡದದಿಂದ ಟಿಕೆಟ್ ನೀಡುವ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ವಿಶೇಷ ವಿಮಾನದ ಮೂಲಕ ಜಗದೀಶ್ ಸೆಟ್ಟರ್ ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆಂದು ತಿಳಿದುಬಂದಿದ್ದು, ಈ ಪ್ರಯಾಣದಲ್ಲಿ ಧಾರವಾಡ ಜಿಲ್ಲೆಯ ಕಾಂಗ್ರೆಸ್​ ಮುಖಂಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಆಪ್ತ ಜೊತೆಯಾಗಿರುವುದು ಕುತೂಹಲಕ್ಕೆ ಏಡೆ ಮಾಡಿಕೊಟ್ಟಿದೆ.

ಈಗಾಗಲೆ ರಾಜ್ಯ ಕಾಂಗ್ರೆಸ್​ ನಾಯಕರು ಜಗದೀಶ್​ ಶೆಟ್ಟರ್​​ ಅವರನ್ನು ಸಂಪರ್ಕಿಸಿದ್ದು, ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.


ಒಂದು ವೇಳೆ ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ಗೆ ಸೇರುವುದು ಪಕ್ಕಾ ಆದಲ್ಲಿ ರೆಡ್​ ಕಾರ್ಪೆಟ್​ ಹಾಕಿ, ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಅವರ ಸಮ್ಮುಖದಲ್ಲಿ ಸೇರ್ಪಡೆಗೊಳ್ಳುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com