
ಕೊಪ್ಪಳ: ಚುನಾವಣೆ ಸಮೀಪದಲ್ಲೇ ಬಿಜೆಪಿಯಲ್ಲಿ ಬಂಡಾಯ ನಾಯಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಪಕ್ಷದಲ್ಲಿ ಮತ್ತೊಬ್ಬರು ರಾಜೀನಾಮೆಗೆ ಮುಂದಾಗಿದ್ದಾರೆ.
ಸಂಗಣ್ಣ ಕರಡಿ ಅವರು ಕೊಪ್ಪಳ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಟಿಕೆಟ್ ಸಿಗದೇ ತೀವ್ರ ಅಸಮಧಾನಗೊಂಡಿದ್ದರು. ಇದೀಗ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಗೆ ತಯಾರಿ ನಡೆಸಿದ್ದಾರೆ.
ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದ ಪಕ್ಷದ ವರಿಷ್ಠರ ಬಳಿ ತಮ್ಮ ಪುತ್ರ ಗವಿಸಿದ್ದಪ್ಪ ಕರಡಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಪುತ್ರನಿಗೂ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಅಸಮಧಾನಗೊಂಡಿರುವ ಸಂಗಣ್ಣ ಇಂದು ಬೆಳಿಗ್ಗೆ 11 ಗಂಟೆಗೆ ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆ ಬಳಿಕ ಮುಂದಿನ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಲಿದ್ದಾರೆ.
ಸಭೆಯ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಸಂಗಣ್ಣ ಕರಡಿಯವರು ನಾಳೆ ಲೋಕಸಭಾ ಸ್ಪೀಕರ್ ಗೆ ರಾಜೀನಾಮೆ ಪತ್ರ ಸಲ್ಲಿಸಿ ಏಪ್ರಿಲ್ 19 ರಂದು ಜೆಡಿಎಸ್‍ನಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.
Advertisement