ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪರನ್ನೂ ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ: ಪ್ರಿಯಾಂಕ್ ಖರ್ಗೆ

ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನೂ ಕೂಡಾ ತುಂಬಾ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Updated on: 

ಕಲಬುರಗಿ: ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನೂ ಕೂಡಾ ತುಂಬಾ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿಯ ಪ್ರತಿಬಿಂಬವಾಗಿದ್ದರೂ ಇಂದು ತಮ್ಮ ಅಸ್ತಿತ್ವಕ್ಕಾಗಿ ಅವರು ಪರಾದಾಡುತ್ತಿರುವುದು ದುರದೃಷ್ಟಕರ ಎಂದರು. 

ಬಿಜೆಪಿಯನ್ನು ಮೊದಲಿನಿಂದಲೂ ಕಟ್ಟಿ ಬೆಳೆಸಿದ ಹಿರಿಯ ನಾಯಕರನ್ನು ರಾಜ್ಯ ನಡೆಸಿಕೊಳ್ಳುತ್ತಿರುವ ರೀತಿ ಅತ್ಯಂತ ದುರದೃಷ್ಟಕರವಾಗಿದೆ. ಜಗದೀಶ್ ಶೆಟ್ಟರ್ ಅಷ್ಟೇ ಅಲ್ಲ, ಗೂಳಿಹಟ್ಟಿ ಡಿ ಶೇಖರ್ ಗೆ ಏನಾಗಿದೆ ನೋಡಿ. ಪಕ್ಷ ಕಟ್ಟಿದವರೆಲ್ಲ ಇಂದು ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಅಥವಾ ಟಿಕೆಟ್ ನಿರಾಕರಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com