ಕೆಎಸ್‌ ಈಶ್ವರಪ್ಪ ಅವರನ್ನು ಬಿಜೆಪಿ ಕೆಟ್ಟದಾಗಿ ನಡೆಸಿಕೊಂಡಿದೆ: ಸಿದ್ದರಾಮಯ್ಯ

ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷವು ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ಈಶ್ವರಪ್ಪ
ಈಶ್ವರಪ್ಪ

ಹಳಿಯಾಳ (ಉತ್ತರ ಕನ್ನಡ): ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷವು ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿಗೆ ಕ್ಷೇತ್ರವಿಲ್ಲ ಎಂಬ ಈಶ್ವರಪ್ಪ ಹೇಳಿಕೆ ಕುರಿತು ವ್ಯಂಗ್ಯವಾಡಿದರು.

ಈಗ ಅವರಿಗೂ (ಈಶ್ವರಪ್ಪ) ಕ್ಷೇತ್ರವಿಲ್ಲ. ಅವರನ್ನು ನೋಡಿದರೆ ಬೇಸರವಾಗುತ್ತಿದೆ. ರಾಜಕೀಯದಲ್ಲಿ ಅವರು ನನ್ನ ಪ್ರತಿಸ್ಪರ್ಧಿ... ಆದರೆ ಅವರು ತಮ್ಮ ಪಕ್ಷಕ್ಕಾಗಿ (ಬಿಜೆಪಿ) ಶ್ರಮಿಸಿದ್ದಾರೆ. ಬಿಜೆಪಿ ಅವರನ್ನು, ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಹೇಳಿದರು.

ಈಶ್ವರಪ್ಪ ಅವರು ರಾಜ್ಯದಲ್ಲಿ ಬಿಜೆಪಿಯನ್ನು ಬಲಪಡಿಸಿದಿದರಪ. ಆರ್‌ಎಸ್‌ಎಸ್ ಹಿನ್ನೆಲೆಯುಳ್ಳವರಾಗಿದ್ದರು. ಅವರು ಉಪ ಮುಖ್ಯಮಂತ್ರಿ, ಹಿರಿಯ ಸಚಿವರು ಮತ್ತು ವಿರೋಧ ಪಕ್ಷದ ನಾಯಕರಾಗಿದ್ದರು. ಅವರನ್ನು ನಡೆಸಿಕೊಳ್ಳುವ ರೀತಿ ಸರಿಯಿಲ್ಲ ಎಂದು ತಿಳಿಸಿದ್ದಾರೆ

ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ನನಗೆ ತಿಳಿದಿಲ್ಲ. ಶೆಟ್ಟರ್ ಅವರು, ಶೆಟ್ಟರ್ ಅವರೊಂದಿಗೆ ಮಾತನಾಡಿಲ್ಲ ಎಂದರು.

ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ರದ್ದುಗೊಳಿಸಿದ್ದರ ಕುರಿತು ಪ್ರತಿಕ್ರಿಯಿಸಿ, ಸರ್ಕಾರ ಮಾಡಿದ್ದು ತಪ್ಪು, ಈ ವಿಚಾರ ಇದೀಗ ನ್ಯಾಯಾಲಯದ ಅಂಗಳದಲ್ಲಿದೆ. ಒಕ್ಕಲಿಗರು ಮತ್ತು ಲಿಂಗಾಯತರಿಗೆ ನೀಡಿರುವ ಮೀಸಲಾತಿಯನ್ನು ನಾವು ವಿರೋಧಿಸುವುದಿಲ್ಲ. ಆದರೆ, ಮುಸ್ಲಿಮರಿಗೆ ಮೀಸಲಾದ ಕೋಟಾವನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದರು.

ಈಗಿನ ಬಿಜೆಪಿ ಸರ್ಕಾರ ನಾನು ಕಂಡ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಬಿಜೆಪಿಯನ್ನು ಸೋಲಿಸುವುದಕ್ಕಾಗಿಯೇ ನಾನು ಮತ್ತು ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಒಂಬತ್ತನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com