ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಶೇ.50ರಷ್ಟು ಮೀಸಲಾತಿ ಮಿತಿ ರದ್ದುಪಡಿಸಿ, ಜಾತಿ ಗಣತಿ ಆಧಾರದ ಮೇಲೆ ಮೀಸಲಾತಿ ನೀಡಿ: ರಾಹುಲ್ ಗಾಂಧಿ

ದೇಶದಲ್ಲಿ ಮೀಸಲಾತಿ ಮೇಲಿನ ಶೇ.50ರ ಮಿತಿಯನ್ನು ತೆಗೆದುಹಾಕಬೇಕು. ಜಾತಿ ಗಣತಿಯನ್ನು ಸಾರ್ವಜನಿಕಗೊಳಿಸಬೇಕು. ಜಾತಿ ಗಣತಿ ಆಧಾರದ ಮೇಲ ಒಬಿಸಿಗಳಿಗೆ ಉತ್ತಮ ಪ್ರಾತಿನಿಧ್ಯ ನೀಡಬೇಕು.
Published on

ಬೀದರ್: ದೇಶದಲ್ಲಿ ಮೀಸಲಾತಿ ಮೇಲಿನ ಶೇ.50ರ ಮಿತಿಯನ್ನು ತೆಗೆದುಹಾಕಬೇಕು. ಜಾತಿ ಗಣತಿಯನ್ನು ಸಾರ್ವಜನಿಕಗೊಳಿಸಬೇಕು. ಜಾತಿ ಗಣತಿ ಆಧಾರದ ಮೇಲ ಒಬಿಸಿಗಳಿಗೆ ಉತ್ತಮ ಪ್ರಾತಿನಿಧ್ಯ ನೀಡಬೇಕು. ದಲಿತರು ಹಾಗೂ ಆದಿವಾಸಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ.

ಇಂದು ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಹುಮನಾಬಾದ್‌ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬೀದರ್ 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಕರ್ಮಭೂಮಿಯಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬಸವಣ್ಣನವರ ಆದರ್ಶಗಳಾದ ಸಮಾನ ಪಾಲುದಾರಿಕೆ, ಸಮಾನ ಅವಕಾಶಗಳ ಮೇಲೆ ದಾಳಿ ನಡೆಸುತ್ತಿದ್ದು. ಅವರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದು ಕರೆ ನೀಡಿದರು.

2011ರ ಜನಗಣತಿಯ ಜಾತಿ ಆಧಾರಿತ ಒಬಿಸಿ ವರ್ಗೀಕರಣದ ಅಂಕಿಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಮತ್ತು ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿಯನ್ನು ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್ ಗಾಂಧಿ ಒತ್ತಾಯಿಸಿದರು.

"ಮೋದಿ ಕೇವಲ ಒಬಿಸಿಗಳ ಬಗ್ಗೆ ಮಾತನಾಡುತ್ತಾರೆ ಅಷ್ಟೆ. ಆದರೆ ಅಂಕಿ ಅಂಶಗಳನ್ನು ಬಿಡುಗಡೆ ಮಾಡುವುದಿಲ್ಲ. ಮೋದಿಗೆ ಒಬಿಸಿ ಮತಗಳು ಮಾತ್ರ ಬೇಕು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಜವಾಗಿಯೂ ಒಬಿಸಿಗಳಿಗೆ ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಶಕ್ತಿ ನೀಡುತ್ತದೆ ಎಂದು ಭರವಸೆ ನೀಡಿದರು.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿವೆ. ಅವರು ಬಡ ಮತ್ತು ದುರ್ಬಲ ವರ್ಗದ ಜನರ ಹಣವನ್ನು ಕಿತ್ತುಕೊಂಡು ಎರಡು ಅಥವಾ ಮೂರು ಶ್ರೀಮಂತರಿಗೆ ನೀಡುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com